CM Alamatti Bagin: ಆಲಮಟ್ಡಿ ಜಲಾಷಯಕ್ಕೆ ಸಿಎಂ‌ ಬಸವರಾಜ ಬೊಮ್ಮಾಯಿ ಗಂಗಾಪೂಜೆ, ಬಾಗೀನ ಸಲ್ಲಿಕೆ

ವಿಜಯಪುರ: ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿರು ಜಲಾಷಯಕ್ಕೆ ಗಂಗಾಪೂಜೆ ಸಲ್ಲಿಸಿ ಬಾಗೀನ ಅರ್ಪಿಸಿದ್ದಾರೆ.

ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಅವರು ಆಲಮಟ್ಟಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರಕ್ಕೆ ತೆರಳಿ ಕೃಷ್ಣಾ ನದಿಗೆ ಗಂಗಾ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ಆಲಮಟ್ಟಿ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರಕ್ಕೆ ತೆರಳಿ ಕೃಷ್ಣಾ ನದಿಗೆ ಗಂಗಾಪೂಜೆ ಸಲ್ಲಿಸಿ ಬಾಗೀನ ಅರ್ಪಿಸಿದ ಸಿಎಂ

 

ಈ ಸಂದರ್ಭದಲ್ಲಿ ನೀರಾವರಿ ಸಚಿವ ಗೋವಿಂದ ಕಾರಜೋಳ, ಮುದ್ದೇಬಿಹಾಳ ಶಾಸಕ ನಡಹಳ್ಳಿ, ವಿಜಯಪುರ ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಕರ್ನಾಟಕ ಸಾವಯುವ ಬೀಜ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ, ಮಾಜಿ ಸಚಿವ ಸಂಗಣ್ಣ ಕೆ. ಬೆಳ್ಳುಬ್ವಿ ವಿಧಾನ ಪರಿಷತ ಬಿಜೆಪಿ ಸದಸ್ಯ ಪಿ. ಎಚ್. ಪೂಜಾರ, ಬಿಜೆಪಿ ವಿಜಯಪುರ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ, ಬಿಜೆಪಿ ಮುಖಂಡರಾದ ರಾಜೆಂದ್ರ ವಾಲಿ, ಅಪ್ಪುಗೌಡ ಪಾಟೀಲ್ ಮನಗೂಳಿ, ಮಾಜಿ ಶಾಸಕ‌ ಶ್ರೀಕಾಂತ ಕುಲಕರ್ಣಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌