JSS Gandhi Shastri Jayanti: ಜೆಎಸ್ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ

ವಿಜಯಪುರ: ಮಹಾತ್ಮ ಗಾಂಧೀಜಿಯವರ ಹೋರಾಟದ ಬದುಕು ಯುವಕರಿಗೆ ದಾರಿದೀಪವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಮತ್ತು ಗಮಕ ಕಲಾ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ. ಎಂ. ಪಾಟೀಲ ಹೇಳಿದ್ದಾರೆ.

ಆ ಜಾದಿ ಕಾ ಅಮೃತ ಮಹೋತ್ಸವ ಹಾಗೂ IQAC ಅಡಿಯಲ್ಲಿ,  ಬಿ.ಎಲ್.ಡಿ.ಇ ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯ ಸ್ನಾತಕೋತ್ತರ ಶಿಕ್ಷಣ ಅಧ್ಯಯನ ಕೇಂದ್ರ ಮತ್ತು ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಲಾಗಿದ್ದ  ಮಹಾತ್ಮ ಗಾಂಧೀಜಿ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸತ್ಯ, ಶಾಂತಿ, ತ್ಯಾಗ, ಮೂರ್ತಿಯಾಗಿದ್ದ  ಮಹಾತ್ಮ ಗಾಂಧಿಯವರು, ಬದುಕಿದ ಸರಳ ಜೀವನ ಹಾಗೂ ಅವರು ಸ್ವಾತಂತ್ರಕ್ಕಾಗಿ ನಡೆಸಿದ ಹೋರಾಡವನ್ನು ವಿಶ್ಲೇಷಿಸಿದರು.

ಜೆಎಸ್‌ಎಸ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿ. ಎಂ. ಪಾಟೀಲ ಮಾತನಾಡಿದರು

ವಿದೇಶಿ ವಸ್ತ್ರ ಬಹಿಷ್ಕಾರ, ಸ್ವದೇಶಿ ವಸ್ತ್ರ ಸ್ವೀಕಾರ, ಬ್ರಿಟಿಷರು ಶೋಷಣೆ ಮಾಡಿದ ಬಗೆ, ಚಳವಳಿಗಳ ಕುರಿತು ಪ್ರಶಂಸೆ ವ್ಯಕ್ತಪಡಿಸಿದ ಅವರು, ಲಾಲ್ ಬಹಾದ್ದೂರ ಶಾಸ್ತ್ರಿ ಅವರು ಪ್ರಧಾನ ಮಂತ್ರಿಯಾಗಿ ಮಾಡಿದ ದೇಶ ಸೇವೆ, ದೇಶ ಪ್ರೇಮದ ಮೂಲಕ ದೇಶಕ್ಕಾಗಿ ತ್ಯಾಗ ಮಾಡಿದ ಸತ್ಪುರುಷರು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಸರ್ವ ಧರ್ಮ ಪ್ರಾರ್ಥನೆ ಹಾಗೂ ಗಾಂಧೀಜಿಯವರಿಗೆ ಇಷ್ಟವಾದ ಮೀರಾ ಭಜನೆಯನ್ನು ಸಾಮೂಹಿಕವಾಗಿ ಮಾಡಲಾಯಿತು.

ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಾದ ಚೈತ್ರಾ ಬಳವಾಟ್, ಶ್ರೀಧರ ಝoಡೆ,  ಮಾಬೂಬಿ ಮುಲ್ಲಾ, ಐಶ್ವರ್ಯ ಮಿರ್ಜಿ, ವಾಣಿ ಪಾಟೀಲ ಅವರು ಕ್ರಮವಾಗಿ ಭಗವದ್ಗೀತೆ, ಬುದ್ಧ, ಕುರಾನ್, ಬೈಬಲ್, ವಚನ ಗಾಯನ ಹೇಳುವ ಮೂಲಕ ಸರ್ವಧರ್ಮ ಪ್ರಾರ್ಥನೆ ಪಠಣ ಮಾಡಿದರು.

ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಬಿ. ವೈ. ಖಾಸನಿಸ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

ರಾಜೇಶ್ವರಿ ಕೊರವಾರ ಸ್ವಾಗತಿಸಿದರು. ಮಹಾಲಕ್ಷ್ಮಿ ನಿಲಜಗಿ ಪರಿಚಯಿಸಿದರು.  ಸಿದರಾಯ ನಡುವಿನಮನಿ ಬಾಪೂಜಿ ಗೀತೆ ಹಾಡಿದರು.  ರಾಜಶ್ರೀ ಅವತಾಡೆ  ವಂದಿಸಿದರು. ಕೆಂಚಪ್ಪ ಚಾಲವಾದಿ ನಿರೂಪಿಸಿದರು.

Leave a Reply

ಹೊಸ ಪೋಸ್ಟ್‌