Health Camp: ಅ. 7 ರಂದು ಬಿ ಎಲ್ ಡಿ ಇ ಆಸ್ಪತ್ರೆ ವತಿಯಿಂದ ನಾಲ್ಕು ಕಡೆ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ- ಡಾ. ಅರವಿಂದ ಪಾಟೀಲ

ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ವತಿಯಿಂದ ವಿಜಯಪುರ ಜಿಲ್ಲೆಯಾದ್ಯಂತ ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರಗಳನ್ನು ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಅರವಿಂದ ಪಾಟೀಲ ತಿಳಿಸಿದ್ದಾರೆ.

ಬಿ.ಎಲ್.ಡಿ.ಇ ಅಧ್ಯಕ್ಷ ಎಂ. ಬಿ. ಪಾಟೀಲ ಅವರ ಜನ್ಮದಿನವಾದ ಅ. 7 ರಂದು ಶುಕ್ರವಾರ ಈ ಬೃಹತ್ ಆರೋಗ್ಯ ಶಿಬಿರಗಳಿಗೆ ಚಾಲನೆ ನೀಡಲಾಗುವುದು.  ನಂತರ ಪ್ರತಿ ತಿಂಗಳು ಎರಡನೇ ಹಾಗೂ ನಾಲ್ಕನೇ ಶನಿವಾರರಂದು ಜಿಲ್ಲೆಯ ನಾನಾ ಕಡೆ ಈ ಶಿಬಿರಗಳನ್ನು ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಅ. 7 ರಂದು ಶುಕ್ರವಾರ ಉಕ್ಕಲಿ, ಕನ್ನೂರ, ಬಬಲೇಶ್ವರ ಹಾಗೂ ತಿಕೋಟಾಗಳಲ್ಲಿ ಏಕಕಾಲದಲ್ಲಿ ಶಿಬಿರ ಆಯೋಜಿಸಲಾಗಿದೆ.  ಬೆ. 9 ಗಂ. ಶಿಬಿರಗಳನ್ನು ಉದ್ಘಾಟಿಸಲಾಗುವುದು.  ಉಕ್ಕಲಿಯ ಬಿ. ಎಲ್. ಡಿ. ಇ ಸಂಸ್ಥೆಯ ನ್ಯೂ ಇಂಗ್ಲೀಷ ಪ್ರೌಢ ಶಾಲೆ ಮೈದಾನದಲ್ಲಿ ನಡೆಯುವ ಶಿಬಿರದಲ್ಲಿ ಬಿ. ಎಲ್. ಡಿ. ಇ ಸಂಸ್ಥೆಯ ನಿರ್ದೇಶಕ ಬಸನಗೌಡ ಎಂ. ಪಾಟೀಲ ಉದ್ಘಾಟಿಸಲಿದ್ದಾರೆ.

ಕನ್ನೂರಿನ ಗುರುಮಠದಲ್ಲಿ ನಡೆಯಲಿರುವ ಆರೋಗ್ಯ ಶಿಬಿರವನ್ನು ಬಿ. ಎಲ್. ಡಿ. ಇ ಸಂಸ್ಥೆಯ ಅಧ್ಯಕ್ಷ, ಶಾಸಕ ಎಂ. ಬಿ. ಪಾಟೀಲ ಉದ್ಘಾಟಿಸಲಿದ್ದಾರೆ.

ಬಬಲೇಶ್ವರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಿಬಿರ ನಡೆಯಲಿದ್ದು, ಬಿ.ಎಲ್.ಡಿ.ಇ ನಿರ್ದೇಶಕ ವಿ. ಎಸ್. ಪಾಟೀಲ ಬಬಲೇಶ್ವರ ಉದ್ಘಾಟಿಸಲಿದ್ದಾರೆ.

ತಿಕೋಟಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದ್ದು, ಬಿ. ಎಲ್. ಡಿ. ಇ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಮಾಜಿ ಸದಸ್ಯ ಶಾಸಕ ಜಿ. ಕೆ. ಪಾಟೀಲ ಉದ್ಘಾಟಿಸಲಿದ್ದಾರೆ.
ವೈದ್ಯಕೀಯ ವಿಭಾಗ, ಶಸ್ತ್ರಚಿಕಿತ್ಸೆ, ಎಲಬು ಮತ್ತು ಕೀಲು, ಕಿ.ವಿ, ಮೂಗು ಹಾಗೂ ಗಂಟಲು, ಹೆರಿಗೆ ಮತ್ತು ಪ್ರಸೂತಿ, ಚಿಕ್ಕಮಕ್ಕಳ, ಚರ್ಮ ರೋಗ, ನೇತ್ರ, ಹೃದಯ ರೋಗÀ, ನರರೋಗ ವಿಭಾಗ ನುರಿತ ತಜ್ಞವೈದ್ಯರು ಈ ಶಿಬಿರದಲ್ಲಿ ಪಲ್ಗೊಳ್ಳಲಿದ್ದು, ಸಂಬಂಧಿತ ಕಾಯಿಲೆಗಳು ಸೇರಿದಂತೆ ಸಕ್ಕರೆ ಕಾಯಿಲೆ, ರಕ್ತದೊತ್ತಡ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ತಪಾಸಣೆ ಮಾಡಿ, ಸೂಕ್ತ ಚಿಕಿತ್ಸೆ ಹಾಗೂ ಔಷಧಿ ನೀಡಲಿದ್ದಾರೆ.  ಶಸ್ತ್ರಚಿಕಿತ್ಸೆಗೆ ಒಳಪಡುವ ರೋಗಿಗಳಿಗೂ ಸಹ ಉಚಿತವಾಗಿ ಶಸ್ತ್ರಚಿಕಿತ್ಸೆ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ನೆರವೇರಿಸಿ, ಜೊತೆಗೆ ಸಾಮಾನ್ಯ ಔಷಧಿಗಳನ್ನು ನೀಡಲಾಗುವುದು.

ಶಿಬಿರದ ಪ್ರಯೋಜನ ಪಡೆದುಕೊಳ್ಳುವ ಸಾರ್ವಜನಿಕರು ಬಿಪಿಎಲ್ ಮತ್ತು ಆಧಾರ ಕಾರ್ಡ  ತಪ್ಪದೇ ತರಬೇಕು. ಹೆಚ್ಚಿನ ಮಾಹಿತಿಗಾಗಿ ಮತ್ತು ನೊಂದಣಿಗಾಗಿ 9591682224, 8951178777 ಸಂಪರ್ಕಿಸಬಹುದಾಗಿದೆ ಎಂದು ಡಾ. ಅರವಿಂದ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌