Corporation Election: ವಿಜಯಪುರ ಮಹಾನಗರ ಪಾಲಿಕೆಯ 35 ವಾರ್ಡುಗಳಿಗೆ ಅ. 28 ರಂದು ಚುನಾವಣೆ- ಡಿಸಿ ಡಾ ದಾನಮ್ಮನವರ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಗೆ ಚುನಾವಣೆ ದಿನಾಂಕಯನ್ನು ರಾಜ್ಯ ಚುನಾವಣೆ ಆಯೋಗ ನಿಗದಿ ಪಡಿಸಿದ್ದು, ಅ. 28 ರಂದು ಮತದಾನ ನಡೆಯಲಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ 10ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಗುವುದು. ಅ. 17ರ ವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಅ. 18ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ. 20 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಏ. 28ರಂದು ಮತದಾನ ನಡೆಯಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡ ವಿಜಯಪುರ ಡಿಸಿ, ಎಸ್ಪಿ, ಎಡಿಸಿ

ಅ. 20 ರಂದು ಬೆ. 7 ರಿಂದ ಸಂ. 5ರ ವರೆಗೆ ಮತದಾನ ನಡೆಯಲಿದೆ. ನಾನಾ ಕಾರಣಗಳಿಂದ ಮರು ಮತದಾನ ಅಗತ್ಯಬಿದ್ದರೆ ಅ. 30 ರಂದು ಮರು ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬೆ. 7 ರಿಂದ ಸಂ. 5ರ ವರೆಗೆ ಮತದಾನ ನಡೆಯಲಿದೆ ಎಂದು ಅವರು ತಿಳಿಸಿದರು.

ಅ. 31 ರಂದು ಮತ ಎಣಿಕೆ

ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಗೆ ಅ. 31 ರಂದು ಬೆ. 8 ರಿಂದ ತಾಲೂಕಿನ ಕೇಂದ್ರ ಸ್ಥಳದಲ್ಲಿ ನಡೆಯಲಿದೆ. ಅದೇ ದಿನ ಮತ ಎಣಿಕೆ ಮುಕ್ತಾಯವಾಗಲಿದೆ ಎಂದು ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದರು.

ಮತಗಟ್ಟೆಗಳ ವಿವರ

ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಗೆ ವಿಜಯಪುರ ವಿಧಾನಸಭೆ ಮತಕ್ಷೇತ್ರದ ವ್ಯಾಪ್ತಿಯಲ್ಲಿ 263 ಮತಗಟ್ಟೆಗಳು ಮತ್ತು ನಾಗಠಾಣ ವಿಧಾನಸಭೆ ಕ್ಷೇತ್ರದ 45 ಮತಗಟ್ಟೆಗಳು ಹಾಗೂ ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದ 2 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.

ಮತದಾರರ ಪಟ್ಟಿಯನ್ನು 13. 01.2022ನ್ನು ಅಳವಡಿಸಿಕೊಂಡು ವಿಜಯಪುರ ಮಹಾನಗರ ಪಾಲಿಕೆಯ ಚುನಾವಣೆಗೆ ಒಟ್ಟು 303 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 13.01.2022ಮತದಾರರ ಪಟ್ಟಿಯಂತೆ ಒಟ್ಟು 2,94,173 ಮತದಾರಿದ್ದಾರೆ. 14.1.2022 ರಿಂದ 15.09.2022ರ ವರೆಗೆ ಹಾಗೂ 16.09.2022ರಿಂದ 7.10.2022ರ ವರೆಗೆ ವಿಧಾನಸಭೆ ಮತಕ್ಷೇತ್ರಗಳ ಮತದಾರರ ಪಟ್ಟಿಯನ್ನು ಅಳವಡಿಸಿಕೊಂಡು ಪೂರಕ ಪಟ್ಟಿ-1 ಮತ್ತು ಪೂರಕ ಪಟ್ಟಿ-2ನ್ನು ತಯಾರಿಸಿ ಮತದಾರರ ವಿವರ ನೀಡಲಾಗುವುದು ಎಂದು ಡಿಸಿ ತಿಳಿಸಿದರು.

 

 

ಚುನಾವಣೆ ನೀತಿ ಸಂಹಿತೆ

ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಅ. 10 ರಿಂದ ಅ. 31ರ ವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಈ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಪಾಲನೆ, ಅಭ್ಯರ್ಥಿಗಳ ಚುನಾವಣೆ ವೆಚ್ಚ, ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಒಳಗೊಂಡಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೊಳಗೊಂಡ ತಂಡಗಳನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದರು.

ವಿದ್ಯುನ್ಮಾನ ಮತಯಂತ್ರಗಳ ಬಳಕೆ

ವಿಜಯಪುರ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ಬಳಕೆ ಮಾಡಲಾಗುವುದು. ಪಾಲಿಕೆಯ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಗರಿಷ್ಟ ರೂ. 3 ಲಕ್ಷ ವೆಚ್ಚದ ಮಿತಿ ನಿಗದಿಪಡಿಸಲಾಗಿದೆ. ವಿಜಯಪುರ ನಗರದ ದರಬಾರ ಹೈಸ್ಕೂಲಿನಲ್ಲಿ ಮತಯಂತ್ರಗಳ ಮಸ್ಟರಿಂಗ್ ಹಾಗೂ ಡಿಮಸ್ಟರಿಂಗ್ ಅಲ್ಲದೇ, ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಮತದಾರರ ಪಟ್ಟಿ, ಮಾದರಿ ನೀತಿ ಸಂಹಿತೆ ಕುರಿತಾಗಿ ದೂರುಗಳು ಇದ್ದಲ್ಲಿ ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಸ್ಥಾಪಿಸಲಾದ ದೂರವಾಣಿ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಹುದಾಗಿದೆ ಎಂದು ಜಿಲ್ಲಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಗಳು ತಿಳಿಸಿದರು.

ಪೊಲೀಸ್ ಬಂದೋಬಸ್ತ್

ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ ಮಾತನಾಡಿ, ಯಾವುದೇ ರೀತಿಯ ಅಡೆತಡೆಗಳಿಲ್ಲದೇ ಮಹಾನಗರ ಪಾಲಿಕೆಯ ಚುನಾವಣೆ ನಡೆಯಲು ಮತ್ತು ಈ ಚುನಾವಣೆಯಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆಯ ಸನ್ನದ್ದವಾಗಿದೆ. ಈ ಚುನಾವಣೆಗೆ ಗುರುತಿಸಿದ ಮತಗಟ್ಟೆಗಳ ಪೈಕಿ ಕೆಲವು ಮತಗಟ್ಟೆಗಳನ್ನು ಸೂಕ್ಷ್ಮ, ಅತೀ ಸೂಕ್ಷ್ಣ ಹಾಗೂ ಸಾಮಾನ್ಯ ಮತಗಟ್ಟೆಗಳು ಎಂದು ಗುರುತಿಸಿ ನಿಗಾ ವಹಿಸಲಾಗುತ್ತಿದೆ. ಒಟ್ಟು 700ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಚುನಾವಣೆ ಕಾರ್ಯಕ್ಕೆ ನಿಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಈ ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಚುನಾವಣೆ ತಹಸೀಲ್ದಾರ ಶಾಂತಲಾ ಚೆಂದನ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌