World Scientist: ಡಾ. ಆರ್. ವಿ. ಕುಲಕರ್ಣಿಯವರಿಗೆ ಸತತ 2ನೇ ಬಾರಿಗೆ ವಿಶ್ವದ ಉನ್ನತ 2% ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ

ವಿಜಯಪುರ: ಔಷಧ ವಿಜ್ಞಾನ ಹಾಗೂ ಪಾಲಿಮರ್ ಕ್ಷೇತ್ರದಲ್ಲಿನ ಸಂಶೋಧನೆಗಾಗಿ ವಿಜಯಪುರದ ಬಿ.ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ. ರಾಘವೇಂದ್ರ ಕುಲಕರ್ಣಿ ಅವರಿಗೆ 2022 ನೇ ಸಾಲಿನ ವಿಶ್ವದ ಉನ್ನತ 2% ವಿಜ್ಞಾನಿಗಳ ಪಟ್ಟಿಯಲ್ಲಿ ಸತತ 2ನೇ ಬಾರಿ ಸ್ಥಾನ ಲಭಿಸಿದೆ.

ಅಮೇರಿಕಾದ ಸ್ಟ್ಯಾನಫೆೋರ್ಡ್ ವಿಶ್ವವಿದ್ಯಾಲಯ ಹಾಗೂ ನೆದರಲ್ಯಾಂಡ್ನ ಎಲ್ಸವಿಯರ್ ಪ್ರಕಾಶನ ಸಂಸ್ಥೆಯು ಪ್ರತಿ ವರ್ಷವೂ ಸೈಟೇಷನ್ ಇಂಡೆಕ್ಸ್ ಆಧಾರದ ಮೇಲೆ ಒಂದು ಲಕ್ಷಕ್ಕೂ ಹೆಚ್ಚು ವಿಜ್ಞಾನಿಗಳನ್ನು ಗುರುತಿಸಿ, ಅವರಲ್ಲಿ ಶ್ರೇಷ್ಠ 2% ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಕಲ್ಪಿಸುತ್ತದೆ.  ಸತತ 2ನೇ ಬಾರಿ ಡಾ. ರಾಘವೇಂದ್ರ ಕುಲಕರ್ಣಿ ಈ   ಪಟ್ಟಿಯಲ್ಲಿ ಸ್ಥಾನ ಪಡೆಯುವ ಮೂಲಕ ಜಿಲ್ಲೆ, ರಾಜ್ಯ ಮತ್ತು ದೇಶಕ್ಕೆ ಕೀರ್ತಿ ತಂದಿದ್ದಾರೆ.

ಪಾಲಿಮರ್ ಆಧಾರಿತ ಔಷಧ ವಿಜ್ಞಾನ ಕ್ಷೇತ್ರದಲ್ಲಿ ಸಂಶೋಧನೆಗೈದ ಭಾರತದ ಸಂಶೋಧಕರ ಪೈಕಿ 15 ನೇ ಸ್ಥಾನ ಹಾಗೂ ವಿಶ್ವದ 130 ನೇ ಸ್ಥಾನ ಪಡೆದಿದ್ದಾರೆ.  ಡಾ. ಕುಲಕರ್ಣಿ ಅವರು 113 ಸಂಶೋಧನಾ ಪ್ರಕಟನೆಗಳು, 87 ಸಂಶೋಧನಾ ಪ್ರಭಂದಗಳು, 6 ಪುಸ್ತಕಗಳನ್ನು ರಚಿಸಿದ್ದಾರೆ ಮತ್ತು 7 ಪೇಟೆಂಟ್ ಗಳನ್ನು ಕೂಡ ಪಡೆದಿದ್ದಾರೆ.  ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ, ಮರೆವು ಕಾಯಿಲೆ ಹಾಗೂ ಕ್ಯಾನ್ಸರ್ ದಂಥ ರೋಗಗಳ ಔಷಧ ಸಂಶೋಧನೆಯಲ್ಲಿ ತೊಡಗಿಸಿಕೊಂಡಿರುವ ಅವರು, ರಾಜ್ಯ ಹಾಗೂ ಕೇಂದ್ರ ಸರಕಾರದಿಂದ 91 ಲಕ್ಷ ರೂಪಾಯಿ ಅನುದಾನವನ್ನೂ ಪಡೆದುಕೊಂಡಿದ್ದಾರೆ.  ಡಾ. ಕುಲಕರ್ಣಿ ಅವರು ಅಂತಾರಾಷ್ಟ್ರೀಯ ವಿಜ್ಞಾನ ನಿಯತಕಾಲಿಕಗಳ ಸಂಪಾದಕಿಯ ಸದಸ್ಯ ಹಾಗೂ ವಿಮರ್ಶಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಇವರ ಸಾಧನೆಗೆ ಬಿ.ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯದ ಅಧ್ಯಕ್ಷ, ಮಾಜಿ ಸಚಿವ ಶ್ರೀ ಎಂ. ಬಿ. ಪಾಟೀಲ, ಕುಲಪತಿ ಡಾ. ಆರ್. ಎಸ್. ಮುಧೋಳ ಹಾಗೂ ಅಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿದ್ದಾರೆ.

ಬಸವ ನಾಡು ವೆಬ್ ಕೂಡ ಡಾ. ರಾಘವೇಂದ್ರ ಕುಲಕರ್ಣಿ ಅವರ ಸಾಧನೆಗೆ ಅಭಿನಂದನೆ ಸಲ್ಲಿಸುತ್ತದೆ.

Leave a Reply

ಹೊಸ ಪೋಸ್ಟ್‌