BJP Action: ಮಹಾನಗರ ಪಾಲಿಕೆ ಚುನಾವಣೆ- ಬಂಡಾಯ ಅಭ್ಯರ್ಥಿಗಳ ವಿರುದ್ಧ ಕಠಿಣ ಕ್ರಮ- 33 ವಾರ್ಡುಗಳಲ್ಲಿ ಬಿಜೆಪಿ ಗೆಲುವು ಖಚಿತ- ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಂಡಾಯವಾಗಿರುವ ಸ್ಪರ್ಧಿಸಿರುವ ಅಭ್ಯರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಚ್. ಪಾಟೀಲ ಕೂಚಬಾಳ ತಿಳಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷ ಶಿಸ್ತಿನ ಪಕ್ಷ.  ಹೀಗಾಗಿ ಬಂಡಾಯವಾಗಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಮನವೊಲಿಸುವ ಪ್ರಯತ್ನ ಮಾಡಲಾಗಿತ್ತು.  ಆದರೆ, ಕೆಲವರು ಕಣದಿಂದ ಹಿಂದೆ ಸರಿಯದಿರುವ ಹಿನ್ನೆಲೆಯಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ವಿಜಯಪುರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಸುದ್ದಿಗೋಷ್ಠಿ ನಡೆಸಿದರು

ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿದೆ.  ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ 350ಕ್ಕೂ ಹೆಚ್ಚು ಸ್ಪರ್ಧಾ ಆಕಾಂಕ್ಷಿಗಳು ಟಿಕೆಟಿಗಾಗಿ ಅರ್ಜಿ ಸಲ್ಲಿಸಿದ್ದರು.  ಆದರೆ, ಸಾಮಾಜಿಕ ನ್ಯಾಯದ ಆಧಾರದ ಮೇಲೆ ಮಹಾನಗರ ಪಾಲಿಕೆಯ 33 ವಾರ್ಡುಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ.  ಈ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲವು ಸಾಧಿಸಲಿದೆ.  ಸಂಘಟನೆ ಹಾಗೂ ಅಭಿವೃದ್ಧಿಯ ವಿಷಯಗಳನ್ನು ಇಟ್ಟುಕೊಂಡು ಮತ ಕೇಳುತ್ತೇವೆ.  ಸಮುದಾಯದ ಆಧಾರಿತ ರಾಜಕಾರಣಕ್ಕಿಂತ ಸಮುದಾಯದ ಹಿತ ಕಾಯುವ ಕೆಲಸವನ್ನು ಬಿಜೆಪಿ ಮಾಡಲಿದೆ ಎಂದು ಆರ್. ಎಸ್. ಪಾಟೀಲ ಕೂಚಬಾಳ ತಿಳಿಸಿದರು.

Leave a Reply

ಹೊಸ ಪೋಸ್ಟ್‌