Election Vehicles: ಮಹಾನಗರ ಪಾಲಿಕೆ ಚುನಾವಣೆ: ಮತಗಟ್ಟೆ ಸಿಬ್ಬಂದಿಗಳು ಮಸ್ಟರಿಂಗ್ ಕೇಂದ್ರಕ್ಕೆ ತೆರಳಲು ವಾಹನ ವ್ಯವಸ್ಥೆ ಜಿಲ್ಲಾಧಿಕಾರಿ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಗೆ ಅ. 28 ರಂದು ಮತದಾನ ನಡೆಯಲಿದ್ದು, ಸುವ್ಯವಸ್ಥಿತವಾಗಿ ಮತದಾನ ನಡೆಯುವ ದೃಷ್ಟಿಯಿಂದ ನಾನಾ ತಾಲೂಕುಗಳಿಂದ  ಅವಶ್ಯಕ ಮತಗಟ್ಟೆ ಸಿಬ್ಬಂದಿಗಳನ್ನು ನಿಯೋಜಿಸಿ ಆದೇಶಿಸಲಾಗಿದ್ದು, ನಿಯೋಜಿತ ಮತಗಟ್ಟೆ ಸಿಬ್ಬಂದಿಗಳು ಮಸ್ಟರಿಂಗ್ ಕೇಂದ್ರಕ್ಕೆ ತೆರಳಲು  ಜಿಲ್ಲೆಯ ಆಯಾ ತಾಲೂಕುಗಳಿಂದ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ತಿಳಿಸಿದ್ದಾರೆ. ನಿಯೋಜಿತ ಮತಗಟ್ಟೆ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಮಸ್ಟರಿಂಗ್ ಕೇಂದ್ರವಾದ ವಿಜಯಪುರ ನಗರದ ವಿ.ಬಿ.ದರಬಾರ ಶಾಲೆಗೆ ತಲುಪಲು […]

Reservatin Ibrahim: ಮುಸ್ಲಿಂ ಮೀಸಲಾತಿ ವಿಚಾರ: ಯಡಿಯೂರಪ್ಪರಿಂದ ರದ್ದುಪಡಿಸಲು ಸಾಧ್ಯವಾಗದದ್ದು ಬೊಮ್ಯಾಯಿಂದ ಹೇಗೆ ಸಾಧ್ಯ? ಸಿ ಎಂ ಇಬ್ರಾಹಿಂ

ವಿಜಯಪುರ: ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಮುಸ್ಲಿಮರ ಮೀಸಲಾತಿ ರದ್ದುಗೊಳಿಸಲು ಸಾಧ್ಯವಾಗಲಿಲ್ಲ.  ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಸಾಧ್ಯವಾಗುತ್ತಾ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಅಧಿಕಾರದಲ್ಲಿದ್ದಾಗ ಸಂವಿಧಾನ ಬದ್ಧವಾಗಿ, ಸಮಿತಿ ರಚಿಸಿ ಆ ಕಮೀಟಿ ವರದಿ ಆಧಾರದ ಮೇಲೆ ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ನೀಡಲಾಗಿದೆ.  ಯಡಿಯೂರಪ್ಪ ಸಿಎಂ ಇದ್ದಾಗ ಈ […]

Deepavali Celebration: ಬಸವ ನಾಡಿನಲ್ಲಿ ದೀಪಾವಳಿ ಸಂಭ್ರಮ- ಪಟಾಕಿಗಳ ಮಾರಾಟ, ಖರೀದಿ ಜೋರು

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲಾದ್ಯಂತ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ, ಸಡಗರ ಮನೆ ಮಾಡಿದೆ.  ಬೆಳಿಗ್ಗೆಯಿಂದಲೇ ಹಿಂದೂಗಳು ಪವಿತ್ರ ದೀಪಾವಳಿ ಹಬ್ಬದ ಆಚರಣೆಯಲ್ಲಿ ತೊಡಗಿದ್ದು, ಹೊಸ ಬಟ್ಟೆ ತೊಟ್ಟು ಸಂಭ್ರಮಿಸುತ್ತಿದ್ದಾರೆ. ಈ ಮಧ್ಯೆ, ಕಳೆದ ಎರಡು ವರ್ಷಗಳಿಂದ ಕೊರೊನಾದಿಂದಾಗಿ ಸಾಕಷ್ಟು ಕಡಿಮೆಯಾಗಿದ್ದ ಪಟಾಕಿಗಳ ಮಾರಾಟ ಮತ್ತು ಖರೀದಿ ಈ ಬಾರಿ ಮತ್ತೆ ಗತವೈಭವಕ್ಕೆ ಮರಳಿದೆ.  ವಿಜಯಪುರ ನಗರದ ವಿಠ್ಠಲ ಮಂದಿರ ರಸ್ತೆಯಲ್ಲಿರುವ ಪಟಾಕಿ ಅಂಗಡಿಗಳಲ್ಲಿ ಖರೀದಿಗೆ ಜನ ಮುಗಿ ಬಿದ್ದಿದ್ದಾರೆ. ಕೊರೊನಾ ಸೋಂಕಿನ ಭಯದಿಂದ ಕಳೆದ […]