Voting Percentage: ಶೇ‌ 55.17 ರಷ್ಟು ಮತದಾನ: ವಾರ್ಡವಾರು ಮಾಹಿತಿ‌ ಇಲ್ಲಿದೆ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಒಟ್ಟು ಶೇ. 55.25 ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ವಾರ್ಡವಾರು ಮಾಹಿತಿ ಇಲ್ಲಿದೆ.    

Voter List Confusion: ವೋಟರ್ ಲಿಸ್ಚ್ ಗೊಂದಲ ಯಾಕೆ? ಯಾರು ಹೊಣೆ? ಡಿಲೀಶನ್, ಎಡಿಶನ್ ಆದ ಮತದಾರರ ಸಂಖ್ಯೆ ಎಷ್ಟು ಗೊತ್ತಾ? ಇಲ್ಲಿದೆ ಮಾಹಿತಿ

ಮಹೇಶ ವಿ. ಶಟಗಾರ ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಗೆ ನಡೆದ ಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಅಳಿಸಿ ಹಾಕಿರುವ ಕುರಿತು ಸಾಕಷ್ಟು ದೂರುಗಳು ಬಂದಿವೆ. ಮತದಾನಕ್ಕೆ ಬಂದ ಮತದಾರರಿಗೆ ಶಾಕ್, ತಹಸೀಲ್ದಾರ ಜೊತೆ ವಾಗ್ವಾದ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗುತ್ತಿದ್ದಂತೆ ಮತದಾರರು ತಮ್ಮ ಹಕ್ಕು ಚಲಾಯಿಸಲು ಮತಗಟ್ಟೆಗಳಿಗೆ ಬಂದಿದ್ದಾರೆ.  ಈ ಸಂದರ್ಭದಲ್ಲಿ ಬಹುತೇಕರು ತಮ್ಮ ಮತ ಚಲಾಯಿಸಿ ಮನೆಗೆ ಮರಳಿದರೆ, ಇನ್ನೂ ನೂರಾರು ಜನರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿದ್ದರೂ ಮತಗಟ್ಟೆಯ ಒಳಗೆ […]

Karjol Brothers Voting: ಡಾ. ಗೋಪಾಲ ಕಾರಜೋಳ, ಉಮೇಶ ಕಾರಜೋಳ ದಂಪತಿಯಿಂದ ಮತದಾನ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಮತದಾನ ಚುರುಕು ಪಡೆದುಕೊಂಡಿದ್ದು, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರ ಪುತ್ರರಾದ ಡಾ ಗೋಪಾಲ ಕಾರಜೋಳ ಮತ್ತು ಉಮೇಶ ಕಾರಜೋಳ ದಂಪತಿ ಸಮೇತ ಬಂದು ತಮ್ಮ ಹಕ್ಕು ಚಲಾಯಿಸಿದ್ದಾರೆ. ವಿಜಯಪುರ ನಗದ ಮತ್ತು ನಾಗಠಾಣ ಮತಕ್ಷೇತ್ರದ ವ್ಯಾಪ್ತಿಯಲ್ಲಿರುವ ವಾರ್ಡ್ ಸಂಖ್ಯೆ 12ರಲ್ಲಿ ಬರುವ ಸರಕಾರಿ ಶಾಲೆ ಸಂಖ್ಯೆ 37ರಲ್ಲಿರುವ ಮತಗಟ್ಟೆ ಸಂಖ್ಯೆ 98ರಲ್ಲಿ ಪತ್ನಿ ಡಾ. ನಿವೇದಿತಾ ಕಾರಜೋಳ ಜೊತೆ ಅಗಮಿಸಿದ ಡಾ. ಗೋಪಾಲ ಕಾರಜೋಳ ತಮ್ಮ ಹಕ್ಕು ಚಲಾಯಿಸಿದರು. ಈ […]

DC Family Voting: ಪತ್ನಿ ಶ್ವೇತಾ ಜೊತೆ ಆಗಮಿಸಿ ಮತದಾನ ಮಾಡಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಬಿರುಸಿನಿಂದ ಸಾಗಿದೆ. ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಮ್ಮ ಪತ್ನಿ ಶ್ವೇತಾ ದಾನಮ್ಮನವರ ಜೊತೆ ವಿಜಯಪುರ ನಗರದ ಸರಕಾರಿ ಬಾಲಕರ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ 219ರಲ್ಲಿ ಸದರಿಯಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು. ಸರತಿ ಸಾಲಿನಲ್ಲಿ ನಿಂತು ದರಬಾರ ಶಾಲೆಯಲ್ಲಿ ಸ್ಥಾಪಿಲಾಗಿರುವ 219 ರ ಮತಗಟ್ಟೆಗೆ ತೆರಳಿ ತಮ್ಮ ಮತದಾನ ಹಕ್ಕನ್ನು ಚಲಾಯಿಸುವ ಮೂಲಕ ಮತದಾನ ಮಹತ್ವ ಸಾರಿದರು. ಮತಗಟ್ಟೆಗಳಿಗೆ ಭೇಟಿ ನೀಡಿದ ಡಿಸಿ, ಎಸ್ಪಿ ಚುನಾವಣೆ ಶಾಂತಿಯತವಾಗಿ […]

Yatnal Family Voting: ಕುಟುಂಬ ಸಮೇತ ಬಂದು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾನ ಮಾಡಿದ ಶಾಸಕ ಯತ್ನಾಳ

ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ತಮ್ಮ ಮತದಾನ ಮಾಡಿದ್ದಾರೆ. ವಿಜಯಪುರ ನಗರದ ಎಸ್ ಎಸ್ ಹೈಸ್ಕೂಲ್ ಲಿನಲ್ಲಿರುವ ಮತಗಟ್ಟೆಗೆ ಕುಟುಂಬ ಸಮೇತ ಆಗಮಿಸಿದ ಅವರು, ತಮ್ಮ ಹಕ್ಕು ಚಲಾಯಿಸಿದರು.  ಪತ್ನಿ ಸುಜಾತಾ, ಮಕ್ಕಳಾದ ರಾಮನಗೌಡ ಮತ್ತು ಆದರ್ಶಗೌಡ ಜೊತೆ ಆಗಮಿಸಿದ ಅವರು ಮತ ಚಲಾಯಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. […]

Sunilgouda Patil Voting: ಎಂ ಎಲ್ ಸಿ ಸುನೀಲಗೌಡ ಪಾಟೀಲರಿಂದ ಮತದಾನ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಗೆ ನಡೆಯುತ್ತಿರುವ ಚುನಾವಣೆಗೆ ಮತದಾನ ಬಿರುಸಿನಿಂದ ಸಾಗಿದ್ದು, ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಸುನೀಲಗೌಡ ಪಾಟೀಲ ತಮ್ಮ ಹಕ್ಕು ಚಲಾಯಿಸಿದ್ದಾರೆ. ವಿಜಯಪುರ ನಗರದ ವಾರ್ಡ ಸಂಖ್ಯೆ 11ರಲ್ಲಿ ಬರುವ ಮದ್ದಿನ ಖಣಿ ಬಳಿ ಇರುವ ಮತಗಟ್ಟೆಗಯಲ್ಲಿ ಸದರಿಯಲ್ಲಿ ನಿಂತ ಅವರು, ತಮ್ಮ ಪಾಳಿ ಬಂದ ನಂತರ ಮತದಾನ ಮಾಡಿದರು. ಬಳಿಕ ಮಾತನಾಡಿದ ಅವರು, ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮತದಾರರ ಪಟ್ಟಿ ಗೊಂದಲ ವಿಚಾರ […]