ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಬಿರುಸಿನಿಂದ ಸಾಗಿದೆ.
ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಮ್ಮ ಪತ್ನಿ ಶ್ವೇತಾ ದಾನಮ್ಮನವರ ಜೊತೆ ವಿಜಯಪುರ ನಗರದ ಸರಕಾರಿ ಬಾಲಕರ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ 219ರಲ್ಲಿ ಸದರಿಯಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.
ಸರತಿ ಸಾಲಿನಲ್ಲಿ ನಿಂತು ದರಬಾರ ಶಾಲೆಯಲ್ಲಿ ಸ್ಥಾಪಿಲಾಗಿರುವ 219 ರ ಮತಗಟ್ಟೆಗೆ ತೆರಳಿ ತಮ್ಮ ಮತದಾನ ಹಕ್ಕನ್ನು ಚಲಾಯಿಸುವ ಮೂಲಕ ಮತದಾನ ಮಹತ್ವ ಸಾರಿದರು.
ಮತಗಟ್ಟೆಗಳಿಗೆ ಭೇಟಿ ನೀಡಿದ ಡಿಸಿ, ಎಸ್ಪಿ
ಚುನಾವಣೆ ಶಾಂತಿಯತವಾಗಿ ನಡೆಯಲು ವಿಜಯಪುರ ಜಿಲ್ಲಾಡಳಿತ ಸಕಲ ಕ್ರಮಗಳನ್ನು ಕೈಗೊಂಡಿದ್ದು, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮತ್ತು ಎಸ್ಪಿ ಎಚ್. ಡಿ. ಆನಂದಕುಮಾರ ನಾನಾ ಮತಗಟ್ಟೆಗಳಿಗೆ ತೆರಳಿ ಪರಿಶೀಲನೆ ನಡೆಸಿದರು.
ಶಹಾಪೂರ ಅಗಸಿಯಲ್ಲಿನ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಶಾಲೆ ನಂ.6 ರಲ್ಲಿರುವ ಮತಗಟ್ಟೆಯಲ್ಲಿ ಕೊಠಡಿ ಸಂಖ್ಯೆ 01ರಲ್ಲಿ ನಡೆಯುತ್ತಿರುವ ಮತದಾನ ಕೇಂದ್ರಕ್ಕೆ ಭೇಟಿ ನೀಡಿದರು. ಅಲ್ಲದೇ, ಮತದಾರರ ಸಮಸ್ಯೆಗಳನ್ನು ಆಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.