Rajyotsava Inamadar: ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು- ಡಾ. ಅರುಣ ಇನಾಮದಾರ

ವಿಜಯಪುರ: ಕನ್ನಡ ರಾಜ್ಯೋತ್ಸವ ಒಂದು ದಿನಕ್ಕೆ ಸೀಮತವಾಗದೇ ನಿತ್ಯೋತ್ಸವ ಆಗಬೇಕು ಎಂದು ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಪತಿ ಡಾ. ಅರುಣ ಇನಾಮದಾರ ಹೇಳಿದರು.

ಬಿ ಎಲ್ ಡಿ ಇ ಡೀಮ್ಡ್ ವಿವಿಯಲ್ಲಿ ನಡೆದ 67ನೇ ಕರ್ನಾಟಕ ರಾಜ್ಯೋತ್ಸವವನ್ನು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕರ್ನಾಟಕದ ಏಕೀಕರಣಕ್ಕಾಗಿ ಶ್ರಮಿಸಿದ ಆಲೂರು ವೆಂಕಟರಾಯರು ಸೇರಿದಂತೆ ಇತರ ಮಹನೀಯರ ಕೊಡುಗೆ ಅನನ್ಯ.  ಎಲ್ಲ ವೈದ್ಯಕೀಯ ವಿಭಾಗದ ವೈದ್ಯರು ರೋಗಿಗಳೊಂದಿಗೆ ಕನ್ನಡದಲ್ಲಿ ವ್ಯವಹರಿಸಬೇಕು ಎಂದು ಡಾ. ಅರುಣ ಇನಾಮದಾರ ಹೇಳಿದರು.

ಈ ಸಂದರ್ಭದಲ್ಲಿ ಕುಲಸಚಿವ ಡಾ. ರಾಘವೇಂದ್ರ ಕುಲಕರ್ಣಿ ಮಾತನಾಡಿ, ಕನ್ನಡ ಭಾಷೆಗೆ ಅದರದೇ ಆದ ಪ್ರಾಮುಖ್ಯತೆ ಇದೆ.  ಕನ್ನಡವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.  ಕನ್ನಡ ಭಾಷೆಯ ಬಗ್ಗೆ ಅಭಿಮಾನ ಹೊಂದಿರಬೇಕು.  ಎಲ್ಲ ಭಾಷೆಗಳನ್ನು ಗೌರವಿಸಬೇಕು.  ಕನ್ನಡದಲ್ಲಿಯೇ ಮಾತನಾಡಬೇಕು ಎಂದು ಹೇಳಿದರು.

ರಾಜ್ಯೋತ್ಸವ ಅಂಗವಾಗಿ ಬಿ ಎಲ್ ಡಿ ಇ ಚರ್ಮರೋಗ ವಿಭಾಗದಿಂದ ಕನ್ನಡ ಮಾಹಿತಿ ಪತ್ರಗಳನ್ನು ಬಿಡುಗಡೆ ಮಾಡಲಾಯಿತು

ಇದೇ ವೇಳೆ, ಚರ್ಮರೋಗ ವಿಭಾಗದಿಂದ ಕನ್ನಡದಲ್ಲಿ ಸಿದ್ಧಪಡಿಸಿದ ಐದು ನಾನಾ ಮಾಹಿತಿ ಪತ್ರಗಳನ್ನು ಬಿಡುಗಡೆ ಮಾಡಲಾಯಿತು.  ರೋಗಿಗಳು ಮತ್ತು ಸಾಮಾನ್ಯ ಜನರಿಗೆ ಚರ್ಮರೋಗಗಳ ಕುರಿತು ತೆಗೆದುಕೊಳ್ಳಬೇಕಾದ ಮುನೆಚ್ಚರಿಕೆ ಕ್ರಮಗಳ ಮತ್ತು ರೋಗಗಳ ಪರಿಹಾರೋಪಾಯಗಳನ್ನು ಈ ಮಾಹಿತಿ ಪತ್ರಗಳು ಒಳಗೊಂಡಿವೆ.

ಇದೇ ರೀತಿ ಎಲ್ಲ ವೈದ್ಯಕೀಯ ವಿಭಾಗಗಳೂ ರೋಗಗಳ ಮಾಹಿತಿ ಕೈಪಿಡಿಯನ್ನು ಕನ್ನಡದಲ್ಲಿಯೇ ಸಿದ್ಧಪಡಿಸಲು ಸೂಚನೆ ನಿರ್ಧರಿಸಲಾಗಿದೆ.  ಈ ಕೈಪಿಡಿಗಳನ್ನು ಬಿ ಎಲ್ ಡಿ ಇ ವಿಶ್ವವಿದ್ಯಾಲಯದ ಪ್ರಸಾರಾಂಗ ವಿಭಾಗದಿಂದ ಪ್ರಕಟಿಸಲು ಈ ಕರ್ನಾಟಕ ರಾಜ್ಯೋತ್ಸವದ ಆಚರಣೆಯ ಸಂದರ್ಭದಲ್ಲಿ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಪ್ಪಗೋಳ, ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ, ಉಪಪ್ರಾಂಶುಪಾಲ ಡಾ. ಸುಮಂಗಲಾ ಪಾಟೀಲ ಮತ್ತು ಡಾ. ಎಂ. ಬಿ. ಪಾಟೀಲ, ವಿದ್ಯಾರ್ಥಿ ವ್ಯವಹಾರಗಳ ಮುಖ್ಯಸ್ಥ ಡಾ. ಆನಂದ ಅಂಬಲಿ, ಉಪಕುಲಸಚಿವ ಸತೀಶ ಪಾಟೀಲ, ನಾನಾ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಮತ್ತು ಸಿಬ್ಬದಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌