Corporators CM Meet: ಯತ್ನಾಳ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿದ ವಿಜಯಪುರ ಪಾಲಿಕೆ ಬಿಜೆಪಿ ಕಾರ್ಪೋರೇಟರ್ ಗಳು

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಗೆ ಆಯ್ಕೆಯಾದ ಬಿಜೆಪಿ ನೂತನ ಸದಸ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ.

ಯತ್ನಾಳ ನೇತೃತ್ವದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ವಿಜಯಪುರ ಬಿಜೆಪಿ ಕಾರ್ಪೋರೇಟರ್ ಗಳು

ಬೆಂಗಳೂರಿನಲ್ಲಿ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ನಿವಾಸಕ್ಕೆ ತೆರಳಿದ ಸದಸ್ಯರು ಮುಖ್ಯಮಂತ್ರಿಯನ್ನು ಭೇಟಿ ಮಾಡಿದರು‌.  ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿದ ಸದಸ್ಯರು ಕೃತಜ್ಞತೆ ಸಲ್ಲಿಸಿದರು.

ವಿಜಯಪುರ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಅತೀ ಹೆಚ್ಚು ಸದಸ್ಯರು ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಯತ್ನಾಳ ಸೂಚನೆಯಂತೆ ಬಿಜೆಪಿ ಸದಸ್ಯರು ನಿನ್ನೆಯೇ ಬೆಂಗಳೂರಿಗೆ ತೆರಳಿದ್ದರು. ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ನಿವಾಸದಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ‌ ಮಾಡಿ ಶುಭ ಕೋರಿದರು.

Leave a Reply

ಹೊಸ ಪೋಸ್ಟ್‌