Model Teachers Award: ಎ. ಎಸ್. ಅತ್ತಾರ ಸೇರಿದಂತೆ ನಾನಾ ಶಿಕ್ಷಕರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ ಮತ್ತು ಉಪನ್ಯಾಸ ಹಾಗೂ ಸನ್ಮಾನ ಸಮಾರಂಭ ಬಸವನ ಬಾಗೇವಾಡಿ ಪಟ್ಟಣದ ಬಸವ ಭವನದಲ್ಲಿ ನಡೆಯಿತು.

ಈ ಕಾರ್ಯಕ್ರಮವನ್ನು ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಉದ್ಘಾಟಿಸಿದ ಮಾತನಾಡಿದರು.

ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಕಾರ್ಯಕ್ರಮದಲ್ಲಿ ಮಾತನಾಡಿದರು

ಬಸವನ ಬಾಗೇವಾಡಿ ವಿರಕ್ತಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು.  ಕರ್ನಾಟಕ ಸಹಕಾರ ಮಹಾಮಂಡಳದ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಮುಂತಾದವರು ಮಾತನಾಡಿದರು. ‘

ಈ ಸಂದರ್ಭದಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ನಿಡಗುಂದಿ ತಾಲೂಕಿನ ಆಲಮಟ್ಟಿ ಡಿ.ಎಸ್.ನ ಯು ಬಿ ಎಚ್ ಪಿ ಎಸ್ ಶಿಕ್ಷಕಿ ಎ. ಎಸ್. ಅತ್ತಾರ ಸೇರಿದಂತೆ ನಾನಾ ಶಿಕ್ಷಕರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ ಮಾಡಲಾಯಿತು.

Leave a Reply

ಹೊಸ ಪೋಸ್ಟ್‌