Jarakiholi Yatnal: ಗೋಕಾಕಿನಲ್ಲಿ ಉತ್ತರ ಕೊಡುತ್ತೇನೆ- ಇಂಥವರಿಂದ ಕಾಂಗ್ರೆಸ್ ಅವನತಿಯಾಗುತ್ತಿದೆ- ಯತ್ನಾಳ ವಾಗ್ದಾಳಿ

ವಿಜಯಪುರ: ಹಿಂದೂ ಅಶ್ಲೀಲ ಪದ ಎಂದು ಕಾಂಗ್ರೆಸ್ ರಾಜ್ಯ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೀಡಿರುವ ಹೇಳಿಕೆ ಖಂಡಿಸಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ವಿಜಯಪುರ ನಗರದಲ್ಲಿ ಪ್ರತಿಭಟನೆಗೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಯತ್ನಾಳ, ಕಾಂಗ್ರೆಸ್ ಪಕ್ಷ ಪಾಕಿಸ್ತಾನ ಪಾರ್ಟಿ ಎಂದು ವಾಗ್ದಾಳಿ ನಡೆಸಿದರು. ಮುಸ್ಲಿಮರ ತುಷ್ಟಿಕರಣಕ್ಕೆ ಕಾಂಗ್ರೆಸ್ಸಿನವರು ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ.  ಹಿಂದೂ ಧರ್ಮಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಸನಾತನ ಧರ್ಮ ಇದಾಗಿದೆ.  ಹಿಂದೂ […]

Kho Kho Yatnal: ಅಭಿವೃದ್ಧಿ ಮಾಡುವವರು ನನ್ನ ಗೆಳೆಯರು- ಕತ್ತರಿ ಹಾಕುವವರು ನನ್ನ ದುಷ್ಮನ್- ಯತ್ನಾಳ

ವಿಜಯಪುರ: ವಿಶ್ವದಲ್ಲಿ ಇನ್ನು ಮುಂದೆ ಗ್ರಾಮೀಣ ಕ್ರೀಡೆಗಳಿಗೆ ಮಹತ್ವ ಬರಲಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರ ನಗರದ ಬಿ ಎಲ್ ಡಿ ಇ ಸಂಸ್ಥೆಯ ಮೆಡಿಕಲ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು. ಕ್ರಿಕೆಟ್ ಜೊತೆಗೆ ಕಬಡ್ಡಿ ಮತ್ತು ಖೋ ಖೋ ಸೇರಿದಂತೆ ಭಾರತದ ಗ್ರಾಮೀಣ ಕ್ರೀಡೆಗಳಿಗೆ ಈಗ ಸಾಕಷ್ಟು ಪ್ರೋತ್ಸಾಹ ಸಿಗುತ್ತಿದೆ. ಕೇಂದ್ರ ಮತ್ತು […]

Farmers MBP: ಹೈನುಗಾರಿಕೆ, ಮೀನುಗಾರಿಕೆ, ರೇಷ್ಮೆ ಕೃಷಿ ಬಗ್ಗೆ ಜಾಗೃತಿ ಮೂಡಿಸಿ- ಕೆಡಿಪಿ ಸಭೆಯಲ್ಲಿ ಎಂ. ಬಿ. ಪಾಟೀಲ ಸೂಚನೆ

ವಿಜಯಪುರ: ಜಿಲ್ಲೆಯಲ್ಲಿ ನೀರಾವರಿ ಕ್ಷೇತ್ರ ವಿಸ್ತರಣೆಯಾಗಿರುವುದರಿಂದ ಹೈನುಗಾರಿಕೆ, ಮೀನುಗಾರಿಕೆ ಹಾಗೂ ರೇಷ್ಮೆ ಕೃಷಿಗೆ ಹೇರಳವಾದ ಅವಕಾಶಗಳಿದ್ದು, ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ಸೂಚನೆ ನೀಡಿದ್ದಾರೆ. ವಿಜಯಪುರದಲ್ಲಿ ನಡೆದ ಬಬಲೇಶ್ವರ ಮತಕ್ಷೇತ್ರದ ಬಬಲೇಶ್ವರ ಮತ್ತು ತಿಕೋಟಾ ತಾಲೂಕುಗಳ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ತಾವು ಸಚಿವರಾಗಿದ್ದಾಗ ಕೈಗೊಂಡಿರುವ ನೀರಾವರಿ ಯೋಜನೆಗಳು ಬಹುಪಯೋಗಿಯಾಗಿದ್ದು, ರೈತರು ನಾನಾ ಕ್ಷೇತ್ರಗಳಲ್ಲಿ ಸ್ವಾವಲಂಬಿಯಾಗಲು ಅನುಕೂಲವಾಗಿದೆ. ಕೆರೆಗೆಳಿಗೆ […]