ವಿಜಯಪುರ: ಜಿಲ್ಲೆಯಲ್ಲಿ ನೀರಾವರಿ ಕ್ಷೇತ್ರ ವಿಸ್ತರಣೆಯಾಗಿರುವುದರಿಂದ ಹೈನುಗಾರಿಕೆ, ಮೀನುಗಾರಿಕೆ ಹಾಗೂ ರೇಷ್ಮೆ ಕೃಷಿಗೆ ಹೇರಳವಾದ ಅವಕಾಶಗಳಿದ್ದು, ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ಸೂಚನೆ ನೀಡಿದ್ದಾರೆ.
ವಿಜಯಪುರದಲ್ಲಿ ನಡೆದ ಬಬಲೇಶ್ವರ ಮತಕ್ಷೇತ್ರದ ಬಬಲೇಶ್ವರ ಮತ್ತು ತಿಕೋಟಾ ತಾಲೂಕುಗಳ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ತಾವು ಸಚಿವರಾಗಿದ್ದಾಗ ಕೈಗೊಂಡಿರುವ ನೀರಾವರಿ ಯೋಜನೆಗಳು ಬಹುಪಯೋಗಿಯಾಗಿದ್ದು, ರೈತರು ನಾನಾ ಕ್ಷೇತ್ರಗಳಲ್ಲಿ ಸ್ವಾವಲಂಬಿಯಾಗಲು ಅನುಕೂಲವಾಗಿದೆ. ಕೆರೆಗೆಳಿಗೆ ನೀರು ತುಂಬಿಸುವ ಯೋಜನೆಯಿಂದಾಗಿ ಬಹಳಷ್ಟು ಕೆರೆಗಳಿಗೆ ನೀರು ಬಂದಿದ್ದು, ಈ ಕೆರೆಗಳಲ್ಲಿ ಮೀನುಗಾರಿಕೆ ನಡೆಸಿದರೆ ಜಿಲ್ಲೆ ಮತ್ಸಕ್ಷೇತ್ರದಲ್ಲಿಯೂ ಉತ್ತಮ ಸಾಧನೆ ಮಾಡಲಿದೆ ಎಂದು ಹೇಳಿದರು.
ನೀರಾವರಿಯಿಂದಾಗಿ ಹೈನುಗಾರಿಕೆಯೂ ಹೆಚ್ಚಾಗಿದೆ. ಅದೇ ರೀತಿ ರೇμÉ್ಮಯೂ ವಾಣಿಜ್ಯ ಬೆಳೆಯಾಗಿದ್ದು ರೈತರಿಗೆ ಕಡಿಮೆ ಅವಧಿಯಲ್ಲಿ ಆರ್ಥಿಕವಾಗಿ ಹೆಚ್ಚಿನ ಲಾಭ ತಂದು ಕೊಡುತ್ತದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಜನಜಾಗೃತಿ ಅಭಿಯಾನ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಬಬಲೇಶ್ವರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಕೈಗೊಂಡಿರುವ ರಸ್ತೆ ಕಾಮಗಾರಿಗಳ ಬಗ್ಗೆ ಗಮನ ಹರಿಸುವಂತೆ ಸೂಚನೆ ನೀಡಿದ ಅವರು, ಜಲಜೀವನ ಮಿಶನ್ ಯೋಜನೆ ಅನುಷ್ಠಾನಕ್ಕಾಗಿ ರಸ್ತೆಗಳನ್ನು ಅಗೆಯುತ್ತಿರುವುದರಿಂದ ಹೊಸದಾಗಿ ನಿರ್ಮಿಸಲಾಗಿರುವ ರಸ್ತೆಗಳಿಗೆ ಹಾನಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಮನ್ವಯ ಸಾಧಿಸಿ ಕೆಲಸ ಮಾಡಬೇಕು ಎಂದು ಶಾಸಕರು ಸೂಚನೆ ನೀಡಿದರು.
ಇದೇ ವೇಳೆ ಬಬಲೇಶ್ವರ ಮತ್ತು ತಿಕೋಟಾ ತಾಲೂಕುಗಳಲ್ಲಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳು, ಹೊಸ ಶಾಲಾ ಕೊಠಡಿಗಳು, ಹಾಲಿ ಕೊಠಡಿಗಳ ದುರಸ್ಥಿ, ಶೌಚಾಲಯಗಳ ಅಗತ್ಯದ ಕುರಿತು ಸಂಪೂರ್ಣ ಮಾಹಿತ ಸಂಗ್ರಹಿಸಿ ತುರ್ತು ಅಗತ್ಯಗಳ ಕುರಿತು ತಮಗೆ ಮಾಹಿತಿ ನೀಡುವಂತೆ ಶಾಸಕರು ಹೇಳಿದರು.
ಬಬಲೇಶ್ವರ ಮತಕ್ಷೇತ್ರದಲ್ಲಿ ನೀರಾವರಿಯಾಗಿರುವುದರಿಂದ ಜಮೀನಿನ ಬೆಲೆ ಹೆಚ್ಚಾಗಿದೆ. ಹೀಗಾಗಿ ಕೆಲವು ಕಡೆಗಳಲ್ಲಿ ಸರಕಾರಿ ಜಮೀನನ್ನು ಅತೀಕ್ರಮಣ ಮಾಡುತ್ತಿರುವ ವಿಚಾರ ಗಮನಕ್ಕೆ ಬಂದಿದೆ. ಇದನ್ನು ತಡೆಗಟ್ಟಲು ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಏಜೆಂಟರು ಹಸ್ತಕ್ಷೇಪ ಮಾಡುತ್ತಿದ್ದಾರೆ. ಈ ಮೂಲಕ ಅಮಾಯಕÀ ರೈತರಿಗೆ ಅನ್ಯಾಯವಾಗುವುದನ್ನು ತಡೆಗಟ್ಟಬೇಕು ಎಂದು ಎಂ. ಬಿ. ಪಾಟೀಲ ಹೇಳಿದರು.
ಎಲ್ಲ ಇಲಾಖೆಗಳ ಸರಕಾರಿ ಯೋಜನೆಗಳ ಅನುμÁ್ಠನದಲ್ಲಿ ಪಾರದರ್ಶಕತೆ ಅನುಸರಿಸಬೇಕು. ವೈಜ್ಞಾನಿಕವಾಗಿ ಮತ್ತು ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಲಾಭ ದೊರೆಯುವಂತೆ ಎಚ್ಚರಿಕೆ ವಹಿಸಬೇಕು. ಜನಪ್ರತಿನಿಧಿಗಳಲ್ಲದವರ ಹಸ್ತಕ್ಷೇಪಕ್ಕೆ ಅವಕಾಶ ನೀಡದೆ ಸುಸೂತ್ರವಾಗಿ ಯೋಜನೆಗಳ ಅನುμÁ್ಠನ ಮಾಡಬೇಕು ಎಂದು ಶಾಸಕರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪರಿಶಿಷ್ಠರ ಯೋಜನೆಗಳ ಜಾರಿಯಲ್ಲಿ ಯಾವುದೇ ತಾರತಮ್ಯ ಮಾಡಬಾರದು. ಸಿದ್ಧರಾಮಯ್ಯ ಅವರು ಸಿಎಂ ಆಗಿದ್ದ ಸಮಯದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಎಸ್.ಸಿ ಮತ್ತು ಎಸ್.ಟಿ. ಸಮುದಾಯಕ್ಕೆ ಒಟ್ಟು ಬಜೆಟ್ ನಲ್ಲಿ ಶೇ. 24 ರಷ್ಟು ಹಣವನ್ನು ಮೀಸಲಿಟ್ಟಿದ್ದರು. ಆದರೆ, ಈಗಿನ ಸರಕಾರ ಬಜೆಟ್ ಗಾತ್ರ ಹೆಚ್ಚಾದರೂ ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಖರ್ಚು ಮಾಡುತ್ತಿಲ್ಲ ಎಂದು ಅವರು ಹೇಳಿದರು.
ಬಬಲೇಶ್ವರ ಮತಕ್ಷೇತ್ರ ವ್ಯಾಪ್ತಿಯಲ್ಲಿ ಸ್ವಂತ ಕಟ್ಟಗಳಿರುವ ಅಂಗನವಾಡಿಗಳ ಕುರಿತು ಮಾಹಿತಿ ಪಡೆದ ಅವರು, ಹೊಸದಾಗಿ ಅಂಗನವಾಡಿ ಕೇಂದ್ರಗಳನ್ನು ಜಾರಿ ಮಾಡಿದರೆ ಮಾತ್ರ ಸಾಲದು. ಕೇವಲ ಜಾಗ ಪಡೆದು ಕಟ್ಟಡಕ್ಕಾಗಿ ಅನುದಾನ ಪಡೆಯದಿದ್ದರೆ ಆ ಕಾಮಗರಿಗಳಿಗೆ ಹಿನ್ನೆಡೆಯಾಗುತ್ತದೆ. ಹೀಗಾಗಿ ಸ್ವಂತ ಕಟ್ಟಡ ಹೊಂದಿರುವ ಅಂಗನವಾಡಿಗಳನ್ನು ಆರಂಭಿಸಬೇಕು ಎಂದು ಅವರು ಸೂಚನೆ ನೀಡಿದರು.
ವಿಕಲಚೇತರನ್ನು ಗುರುತಿಸಿ ಅವರಿಗೆ ಲಭ್ಯವಿರುವ ಸೌಲಭ್ಯಗಳು, ಅವರಿಗಾಗಿಯೇ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಲಾಗುವ ಕ್ರೀಡಾಕೂಟಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಇದರಿಂದ ವಿಕಲಚೇತನರು ಹೆಚ್ಚಿನ ಸಂಖ್ಯೆಯಲ್ಲಿ ಸರಕಾರಿ ಯೋಜನೆಗಳ ಲಾಭ ಪಡೆಯಲು ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.
ತಿಕೋಟಾ ತಾಲೂಕಿನಲ್ಲಿ ಒಟ್ಟು 52 ಕಂದಾಯ ಗ್ರಾಮಗಳಾಗಿದ್ದು, ಬಬಲೇಶ್ವರ ತಾಲೂಕಿನಲ್ಲಿ ಐದು ಮಜರೆ ಹಳ್ಳಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತನೆ ಮಾಡಲಾಗಿದೆ ಎಂದು ತಹಸೀಲದಾರರು ಸಭೆಯ ಗಮನಕ್ಕೆ ತಂದರು. ಬಬಲೇಶ್ವರ ಮತಕ್ಷೇತ್ರದಲ್ಲಿ ಇನ್ನೂ ನೂರಾರು ವಸ್ತಿಗಳಿದ್ದು, ಅವ ಅವುಗಳನ್ನೂ ಕೂಡ ಸಮೀಕ್ಷೆ ನಡೆಸಿ ಕಂದಾಯ ಗ್ರಾಮಗಳಾಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಬಲೇಶ್ವರ ಮತಕ್ಷೇತ್ರದಲ್ಲಿ ಸಾರಾಯಿ ಮುಕ್ತ ಕ್ಷೇತ್ರವನ್ನಾಗಿ ಮಾಡಲು ಗ್ರಾಮ-ಗ್ರಾಮಗಳಲ್ಲಿ ಜಾಗೃತಿ ಮೂಡಿಸಲು ಸ್ವ-ಸಹಾಯ ಸಂಘ, ಸ್ತ್ರೀ-ಶಕ್ತಿ ಸಂಘ, ಆಶಾ ಕಾರ್ಯಕರ್ತರ ಸಹಯೋಗದೊಂದಿಗೆ ಜಾಗ್ರತಿ ಅಭಿಯಾನ ಮಾಡಲು ಸೂಕ್ತ ಕ್ರಮ ಕೈಗೊಳ್ಳಲು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಇದೇ ವೇಳೆ, ಕμÁ್ಣ ನದಿ ತೀರದಲ್ಲಿ ಮರಳುಗಾರಿಕೆಗೆ ಅವಕಾಶ ನೀಡಬೇಡಿ ಎಂದು ಎಂ. ಬಿ. ಪಾಟೀಲರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಈ ಸಭೆಯಲ್ಲಿ ತಿಕೋಟಾ ತಹಸೀಲ್ದಾರ ಸಂತೋಷ ಎಂ. ಮ್ಯಾಗೇರಿ, ಬಬಲೇಶ್ವರ ತಹಸೀಲ್ದಾರ ಪ್ರಶಾಂತ ಚನಗೊಂಡ, ತಿಕೋಟಾ ತಾ. ಪಂ. ಇಓ ಬಸವರಾಜ ಐನಾಪುರ, ಬಬಲೇಶ್ವರ ತಾ.ಪಂ. ಇ ಓ ಜುಬೇರ ಪಠಾಣ ಸೇರಿದಂತೆ ನಾನಾ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.