Irrigation Karjol: ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಭೇಟಿಯಾಗಿ ರಾಜ್ಯ ನೀರಾವರಿ ಯೋಜನೆಗಳಿಗೆ ಅನುಮೋದನೆ ಕೋರಿದ ಸಚಿವ ಕಾರಜೋಳ

ನವದೆಹಲಿ: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದಲ್ಲಿ ಬಾಕಿ ಇರುವ ಅನುಮೋದನೆಗಳನ್ನು ದೊರಕಿಸಿ ಕೊಡುವಂತೆ ರಾಜ್ಯ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕೇಂದ್ರ ಜಲ ಸಂಪನ್ಮೂಲ ಸಚಿವ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ ಅವರಿಗೆ ಮನವಿ ಮಾಡಿದ್ದಾರೆ.

ನವದಹೆಲಿಯಲ್ಲಿ ಕೇಂದ್ರ ಸಚಿವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ನಿವಾಸದಲ್ಲಿ ಸಂಜೆ ನಡೆದ ಮಹತ್ವದ ಸಭೆಯಲ್ಲಿ ಕಾರಜೋಳ ಈ ಮನವಿ ಮಾಡಿದರು.

ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಅವರನ್ನು ಭೇಟಿ ಮಾಡಿದ ಸಚಿವ ಗೋವಿಂದ ಕಾರಜೋಳ

ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಮೇಕೆದಾಟು, ಕೃಷ್ಣ ಮೇಲ್ದಂಡೆ ಭದ್ರ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಅನುಮೋದನೆ ನೀಡುವಂತೆ ಸಚಿವರು ಕೋರಿದರು.

ಈ ಮಧ್ಯೆ ಸಭೆಯ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಭದ್ರ ಮೇಲ್ದಂಡೆ ಯೋಜನೆಯ ಪ್ರಸ್ತಾವನೆ ಹಂತದಲೆ.  ಈ ಯೋಜನೆಗೆ ಮುಂದಿನ ಕೇಂದ್ರ ಸಚಿವ ಸಂಪುಟದ  ಸಭೆಯಲ್ಲಿ ಅನುಮೋದನೆ ದೊರೆಯುವ ವಿಶ್ವಾಸವಿದೆ.  ಮಹದಾಯಿ ಯೋಜನೆಯ ಅನುಮೋದನೆ ಶೀಘ್ರದಲ್ಲಿಯೇ ದೊರಕುವ ನಿರೀಕ್ಷೆ ಇದೆ ಎಂದು ಸಚಿವ  ಗೋವಿಂದ ಕಾರಜೋಳ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌