ವಿಜಯಪುರ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಬಸವ ನಾಡು ವಿಜಯಪುರ ನಗರದ ರಾಜೇಶ್ವರಿ ಗಾಯಕವಾಡ ಅವರಿಗೆ ರಾಜಸ್ಥಾನದ ಉದಯಪುರ ಎಸ್. ಪಿ. ಎಸ್. ಯು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಇತ್ತೀಚೆಗೆ ನಡೆದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಎಸ್. ಪಿ, ಎಸ್. ಯು ಅಧ್ಯಕ್ಷ ಡಾ. ಪದ್ಮಕಲಿ ಬ್ಯಾನರ್ಜಿ ಮತ್ತು ಡಾ. ನಿಧಿಪತಿ ಸಿಂಗಾನಿಯಾ ಅವರು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದ್ದಾರೆ.
ಭಾರತೀಯ ಕ್ರಿಕೆಟ್ ತಂಡದ ಮಹಿಳಾ ಆಟಗಾರ್ತಿಯೊಬ್ಬರಿಗೆ ಇದೇ ಮೊದಲ ಬಾರಿಗೆ ಗೌರವ ಡಾಕ್ಟರೇಟ್ ದೊರಕಿದ್ದು, ವಿಜಯಪುರ ಜಿಲ್ಲೆಗೆ ಹಾಗೂ ರಾಜ್ಯ ಹಾಗೂ ಇಡೀ ದೇಶಕ್ಕೆ ಹೆಮ್ಮೆಯ ವಿಷಯವಾಗಿದೆ.