MBP Congress Rajayuga: ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ- ಅಭಿವೃದ್ಧಿಯ ರಾಜಯುಗ ಆರಂಭವಾಗಲಿದೆ- ಎಂ. ಬಿ. ಪಾಟೀಲ

ವಿಜಯಪುರ: ಮುಂದಿನ ಬಾರಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ರಾಜ್ಯದಲ್ಲಿ ಅಭಿವೃದ್ಧಿಯ ರಾಜಯೋಗ ಆರಂಭವಾಗಲಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ಹೇಳಿದರು. ತಿಕೋಟಾ ತಾಲೂಕಿನ ಕನಮಡಿಯಲ್ಲಿ ಬಳಿಯ ಧರಿದೇವರ ದೇವಸ್ಥಾನದ ಹತ್ತಿರ ರೂ.1.25 ಕೋಟಿ ವೆಚ್ಚದ ಬಾಂದಾರ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಕೈಗೊಂಡ ನೀರಾವರಿ ಯೋಜನೆಗಳಿಂದಾಗಿ ವಿಜಯಪುರ ಜಿಲ್ಲೆಯ ರೈತರಿಗೆ ಸಾಕಷ್ಟು ಅನಕೂಲವಾಗಿದೆ. ಗಡಿ ಭಾಗದ ಜನ ಗುಳೆ ಹೋಗುವುದನ್ನು ಬಿಟ್ಟು […]

BLDE Sanjeevini: ಗ್ರಾಮೀಣ ಜನರಿಗೆ ಬಿ ಎಲ್ ಡಿ ಇ ಆಸ್ಪತ್ರೆ ಸಂಜೀವಿನಿಯಾಗಿದೆ- ಕೆಂಗಲಗುತ್ತಿ ಅಡವಿ ಸಿದ್ಧೇಶ್ವರ ಸ್ವಾಮೀಜಿ

ವಿಜಯಪುರ 26. ಗ್ರಾಮೀಣ ಪ್ರದೇಶದ ಜನರಿಗೆ ಬಿ.ಎಲ್.ಡಿ.ಇ ಆಸ್ಪತ್ರೆ ಸಂಜೀವಿನಿಯಾಗಿದೆ ಎಂದು ಜಂಬಗಿ ಎಚ್-ಕೆಂಗಲಗುತ್ತಿ ಅಡವಿ ಸಿದ್ದೇಶ್ವರ ಸ್ವಾಮೀಜಿ ಹೇಳಿದರು. ವಿಜಯಪುರದ ಬಿ.ಲ್.ಡಿ.ಇ ಸಂಸ್ಥೆ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ವತಿಯಿಂದ ಬಬಲೇಶ್ವರ ತಾಲೂಕಿನ ಹೊಸೂರಿನಲ್ಲಿ ಆಯೋಜಿಸಿದ್ದ ಉಚಿತ ಆರೊಗ್ಯ ತಪಾಸಣೆ ಶಿಬಿರ ಚಾಲನೆ ನೀಡಿ ಅವರು ಮಾತನಾಡಿದರು. ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲರು ರೈತರಿಗೆ ನೀರಾವರಿ ಯೋಜನೆ ಮಾಡಿ ಸ್ವಾವಲಂಬಿ ಜೀವನ ನಡೆಸಲು ಕಾರಣರಾಗಿದ್ದಾರೆ. ಅಷ್ಟೇ ಅಲ್ಲ, ಗ್ರಾಮೀಣ ಭಾಗದ ಜನರ ಆರೋಗ್ಯದ ಬಗ್ಗೆಯೂ ಅಪಾರ  ಕಾಳಜಿ […]

Maharastra MBP: ರಾಜಕೀಯ ವಿಚಾರವನ್ನು ಡೈವರ್ಟ್ ಮಾಡಲು ಮಹಾರಾಷ್ಟ್ರದ ಮುಖಂಡರು ಗಡಿ ಕ್ಯಾತೆ ತೆಗೆಯುತ್ತಿದ್ದಾರೆ- ನಾವೂ ಹಾಗೇ ಮಾಡಬೇಕಾಗುತ್ತೆ- ಎಂ. ಬಿ. ಪಾಟೀಲ

ವಿಜಯಪುರ: ಗಡಿ ವಿವಾದ ಈಗ ಮುಗಿದ ಅಧ್ಯಾಯ.  ಆದರೆ, ಮಹಾರಾಷ್ಟ್ರದ ರಾಜಕಾರಣಿಗಳು ಅಲ್ಲಿನ ಅಲ್ಲಿನ ರಾಜಕೀಯ ಪರಿಸ್ಥಿತಿಯನ್ನು ಡೈವರ್ಟ್ ಮಾಡಲು ಗಡಿ ಕ್ಯಾತೆ ತೆಗೆದಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಜಲಸಂಪನ್ಮೂಲ ಖಾತೆ ಮಾಜಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.  ವಿಜಯಪುರ ಜಿಲ್ಲೆಯ ಇಟ್ಟಂಗಿಹಾಳ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಕ್ಯಾತೆ ತೆಗೆದರೆ ನಾವೂ ಕೂಡ ಮಹಾರಾಷ್ಟ್ರದಲ್ಲಿರುವ ಸೋಲಾಪುರ, ದಕ್ಷಿಣ ಸೋಲಾಪುರ, ಅಕ್ಕಲಕೋಟ, ಜತ್ ಸೇರಿದಂತೆ ಇನ್ನೂ ಬಹಳ ಪ್ರದೇಶಗಳನ್ನು […]

Child Labour: ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಾರ್ವಜನಿಕರು ಕೈಜೋಡಿಸಬೇಕು-ನ್ಯಾಯಾಧೀಶ ವೆಂಕಣ್ಣ ಹೊಸಮನಿ

ವಿಜಯಪುರ: ಬಾಲಕಾರ್ಮಿಕ ಪದ್ಧತಿ ಅಪರಾಧವಾಗಿದ್ದು, ಜನರು ಜಾಗೃತರಾಗಿ ಬಾಲಕಾರ್ಮಿಕರ ಕುರಿತು ದೂರು ಸಲ್ಲಿಸುವುದರ ಮೂಲಕ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈ ಜೋಡಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಣ್ಣ ಹೊಸಮನಿ ಹೇಳಿದ್ದಾರೆ.  ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಮಾಜ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಮಿಕ ಇಲಾಖೆ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ […]

Udyog Mela: ಮಹಿಳಾ ವಿವಿ ಉದ್ಯೋಗ ಮೇಳದಲ್ಲಿ 140 ಅಭ್ಯರ್ಥಿಗಳು ಆಯ್ಕೆ, 378 ಅಭ್ಯರ್ಥಿಗಳು 2ನೇ ಸುತ್ತಿನ ಸಂದರ್ಶನಕ್ಕೆ ಆಯ್ಕೆ

ವಿಜಯಪುರ: ಕರ್ನಾಟಕ ಸರಕಾರದ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ಜಿಲ್ಲಾಡಳಿತ, ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ವಿವಿ ಆವರಣದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 140 ಅಭ್ಯರ್ಥಿಗಳು ಆಯ್ಕೆಯಾಗಿದ್ದು, 378 ಅಭ್ಯರ್ಥಿಗಳು ಎರಡನೇ ಸುತ್ತಿನ ಸಂದರ್ಶನಕ್ಕೆ ಆಯ್ಕೆಯಾಗಿರುತ್ತಾರೆ. ಈ ಉದ್ಯೋಗ ಮೇಳದಲ್ಲಿ 25 ಕಂಪನಿಗಳು/ ಸಂಸ್ಥೆಗಳು ಭಾಗವಹಿಸಿದ್ದವು.  2000 ಕ್ಕಿಂತ ಹೆಚ್ಚು ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ ಸುಮಾರು 800ಕ್ಕೂ […]