ವಿಜಯಪುರ 26. ಗ್ರಾಮೀಣ ಪ್ರದೇಶದ ಜನರಿಗೆ ಬಿ.ಎಲ್.ಡಿ.ಇ ಆಸ್ಪತ್ರೆ ಸಂಜೀವಿನಿಯಾಗಿದೆ ಎಂದು ಜಂಬಗಿ ಎಚ್-ಕೆಂಗಲಗುತ್ತಿ ಅಡವಿ ಸಿದ್ದೇಶ್ವರ ಸ್ವಾಮೀಜಿ ಹೇಳಿದರು.
ವಿಜಯಪುರದ ಬಿ.ಲ್.ಡಿ.ಇ ಸಂಸ್ಥೆ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ವತಿಯಿಂದ ಬಬಲೇಶ್ವರ ತಾಲೂಕಿನ ಹೊಸೂರಿನಲ್ಲಿ ಆಯೋಜಿಸಿದ್ದ ಉಚಿತ ಆರೊಗ್ಯ ತಪಾಸಣೆ ಶಿಬಿರ ಚಾಲನೆ ನೀಡಿ ಅವರು ಮಾತನಾಡಿದರು.
ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲರು ರೈತರಿಗೆ ನೀರಾವರಿ ಯೋಜನೆ ಮಾಡಿ ಸ್ವಾವಲಂಬಿ ಜೀವನ ನಡೆಸಲು ಕಾರಣರಾಗಿದ್ದಾರೆ. ಅಷ್ಟೇ ಅಲ್ಲ, ಗ್ರಾಮೀಣ ಭಾಗದ ಜನರ ಆರೋಗ್ಯದ ಬಗ್ಗೆಯೂ ಅಪಾರ ಕಾಳಜಿ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಬಿರಗಳನ್ನು ಆಯೋಜಿಸುವ ಮೂಲಕ ಜನರ ಮನೆ ಬಾಗಿಲಿಗೆ ವೈದ್ಯರ ಸೇವೆಯನ್ನು ಒದಗಿಸುತ್ತಿದ್ದಾರೆ ಎಂದು ಪ್ರಶಂಸಿದರು.
ಸುಮಾರು 1000 ಜನರ ಆರೋಗ್ಯ ತಪಾಸಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಎಚ್.ಎಸ್.ಕೊರಡ್ಡಿ, ಟಿ.ಆರ್.ಪಚ್ಚನ್ನವರ, ಬಸನಗೌಡ ಪಾಟೀಲ ಹೊಸೂರ, ರಮೇಶ ಯರಗಟ್ಟಿ, ವೆಂಕಣ್ಣ ಸಿಂಗಾರಡ್ಡಿ, ಪಾಂಡಪ್ಪ ಚಿಗದಾನಿ ಸೇರಿದಂತೆ ಸುತ್ತಲಿನ ಗ್ರಾಮಸ್ಥರು ಉಪಸ್ಥಿತಿತರಿದ್ದರು.
ನಾಗಠಾಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ
ವಿಜಯಪುರ ತಾಲೂಕಿನ ನಾಗಠಾಣದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಮಾಜಿ ಶಾಸಕ ವಿಠ್ಠಲ ಕಟಕದೊಂಡ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಎಂ.ಬಿ.ಪಾಟೀಲರು ಬಿ.ಎಲ್.ಡಿ.ಇ ಆಸ್ಪತ್ರೆ ವತಿಯಿಂದ ಜಿಲ್ಲೆಯ ಎಲ್ಲ ಕಡೆಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಆಯೋಜಿಸುವ ಮೂಲಕ ಜನರ ಆರೋಗ್ಯದ ಬಗ್ಗೆ ಗಮನ ಹರಿಸಿದ್ದಾರೆ. ರಕ್ತ ಕಡಿಮೆ, ಜಂತು ಹುಳುಗಳು, ಚರ್ಮ ರೋಗಗಳಿಗೆ ಚಿಕಿತ್ಸೆ ಪಡೆಯಲು ಜನರು ಪಟ್ಟಣಗಳಿಗೆ ತೆರಳಬೇಕಾಗುತ್ತದೆ. ಇದನ್ನು ಮನಗಂಡ ಎಂ.ಬಿ.ಪಾಟೀಲರು ನಗರಗಳಲ್ಲಿ ಸಿಗುವ ತಜ್ಞ ವೈದ್ಯರ ಸೇವೆಯನ್ನು ಈ ಭಾಗಕ್ಕೆ ಒದಗಿಸುವ ಮೂಲಕ ಬಡವರಿಗೂ ಉತ್ತಮ ಆರೋಗ್ಯ ಸೇವೆ ಒದಗಿಸುತ್ತಿದ್ದಾರೆ. ಇದು ಎಂ.ಬಿ.ಪಾಟೀಲರು ಸರ್ವಜನರ ಬಗ್ಗೆ ಹೊಂದಿರುವ ಕಾಳಜಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಬಿ.ಎಲ್.ಡಿ.ಇ ಆಸ್ಪತ್ರೆಯ ಡಾ.ವಿಕ್ರಮ ಸಿಂದಗಿಕರ, ಡಾ. ನೀತಿನ ಪಿ.ಎಸ್, ಡಾ.ಶೃತಿ ಕುಲಕರ್ಣಿ, ಡಾ.ಶ್ರೀಶೈಲ ಗಿಡಗಂಟಿ, ಡಾ.ಶ್ರವಣಕುಮಾರ ಹಾಗೂ ಸಿಬ್ಬಂದಿ 1000 ಜನರ ಆರೋಗ್ಯ ತಪಾಸಣೆ ನಡೆಸಿದರು. ಅಲ್ಲದೇ, 123 ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆಗೆ ಬಿ.ಎಲ್.ಡಿ. ಇ ಆಸ್ಪತ್ರೆಗೆ ಶಿಫಾರಸ್ಸು ಮಾಡಲಾಯಿತು.
ಈ ಸಂದರ್ಭದಲ್ಲಿ ಉಪಕುಲಪತಿ ಡಾ.ಆರ್.ಎಸ್.ಮುಧೋಳ, ಉಪಪ್ರಾಚಾರ್ಯ ಆನಂದ ಪಾಟೀಲ, ಮುಖಂಡ ಚಂದ್ರಶೇಖರ ಅರಕೇರಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.