Child Labour: ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಾರ್ವಜನಿಕರು ಕೈಜೋಡಿಸಬೇಕು-ನ್ಯಾಯಾಧೀಶ ವೆಂಕಣ್ಣ ಹೊಸಮನಿ

ವಿಜಯಪುರ: ಬಾಲಕಾರ್ಮಿಕ ಪದ್ಧತಿ ಅಪರಾಧವಾಗಿದ್ದು, ಜನರು ಜಾಗೃತರಾಗಿ ಬಾಲಕಾರ್ಮಿಕರ ಕುರಿತು ದೂರು ಸಲ್ಲಿಸುವುದರ ಮೂಲಕ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈ ಜೋಡಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಣ್ಣ ಹೊಸಮನಿ ಹೇಳಿದ್ದಾರೆ. 

ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಮಾಜ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಮಿಕ ಇಲಾಖೆ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿರು.

ಪೋಷಕರು 18 ವರ್ಷದೊಳಗಿನ ಮಕ್ಕಳಿಗೆ ಕೆಲಸಕ್ಕೆ ಹಚ್ಚಬಾರದು,  ಬಾಲಕಾರ್ಮಿಕರು ಕಂಡು ಬಂದಲ್ಲಿ ಕಾರ್ಮಿಕ ಇಲಾಖೆಗೆ ದೂರು ನೀಡಬೇಕು.  ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಪಾಲಕರ, ಸರಕಾರದ ಜವಾಬ್ದಾರಿಯಾಗಿದೆ.  ಕಾರ್ಮಿಕ ಇಲಾಖೆಯಿಂದ ಸಿಗುವ ಯೋಜನೆಗಳ ಲಾಭ ಪಡೆದುಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಮುಂದಾಗಬೇಕು ಎಂದು ವೆಂಕಣ್ಣ ಹೊಸಮನಿ ಹೇಳಿದರು.

ಈ ಕಾರ್ಯಕ್ರಮದಲ್ಲಿ ಅರ್ಹ ಕಾರ್ಮಿಕರಾದ ಪೇಂಟರ್, ಇಲೆಕ್ಟ್ರಿಶಿಯನ್ ಕಿಟ್ ಹಾಗೂ ಈ-ಶ್ರಮ ಕಾರ್ಡಗಳನ್ನು ವಿತರಿಸಲಾಯಿತು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿಯ ಸಹಾಯಕ ಕಾರ್ಮಿಕ ಆಯುಕ್ತ ಮಹ್ಮದ ಬಸೀರ ಅನ್ಸಾರಿ ಮಾತನಾಡಿ, ಜನರ ಅನುಕೂಲಕ್ಕಾಗಿ ಕಾರ್ಮಿಕ ಇಲಾಖೆಯಿಂದ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ.  ಈ-ಶ್ರಮ ಕಾರ್ಡ್ ಮತ್ತು ಪಿ ಎಂ ಎಸ್ ವೈ ಎಂ ಕಾರ್ಡಗಳ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಕಾರ್ಮಿಕ ಅಧಿಕಾರಿ ಎಸ್. ಜಿ. ಖೈನೂರ ಮತ್ತು ನ್ಯಾಯವಾದಿಗಳಾದ ಎಂ. ಸಿ. ಲೋಗಾಂವಿ ಮಾತನಾಡಿದರು.  ಈ ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿ ಕಾರ್ಮಿಕರಾದ ಪೇಂಟರ್, ಇಲೆಕ್ಟ್ರಿಶಿಯನ್ ಕಿಟ್ ಹಾಗೂ ಈ-ಶ್ರಮ ಕಾರ್ಡಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಡಿಕೇರಿ ಕಾರ್ಮಿಕ ಅಧಿಕಾರಿ ಅನಿಲ ಬಗಟಿ, ಮುಖ್ಯಶಿಕ್ಷಕಿ ಭಾರತಿ ಪಾಟೀಲ, ಕಾರ್ಮಿಕ ಕಲ್ಯಾಣ ಮಂಡಳಿ ಕಾರ್ಯ ನಿರ್ವಾಹಕ ಎಸ್. ನಾಗರಾಜ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಡಿಇಓ ಅನಿಲ ರಾಠೋಡ ಉಪಸ್ಥಿತರಿದ್ದರು.

ಕಾರ್ಮಿಕ ನಿರೀಕ್ಷಕಿ ಜಗದೇವಿ ಸಜ್ಜನ ಸ್ವಾಗತಿಸಿದರು.  ಬಾಲಕಾರ್ಮಿಕ ಯೋಜನೆ ಸಂಘದ ಯೋಜನೆ ನಿರ್ದೇಶಕ ನೀಲಮ್ಮಾ ಖೇಡಗಿ ನಿರೂಪಿಸಿದರು.  ಪಾರ್ವತಿ ಶಿವನಾಳ ವಂದಿಸಿದರು.

Leave a Reply

ಹೊಸ ಪೋಸ್ಟ್‌