MBP Talawar Honour: ಎಂ. ಬಿ. ಪಾಟೀಲರಿಗೆ ತಳವಾರ ಸಮಾಜದವರಿಂದ ಸನ್ಮಾನ- ಯಾಕೆ ಗೊತ್ತಾ?

ವಿಜಯಫುರ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಅವರನ್ನು ತಳವಾರ ಸಮಾಜದ ಮುಖಂಡರು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು. ವಿಜಯಪುರ ನಗರದರಲ್ಲಿರುವ ಎಂ. ಬಿ. ಪಾಟೀಲ ಅವರ ನಿವಾಸಕ್ಕೆ ಆಗಮಿಸಿದ ತಳವಾರ ಸಮಾಜದ ಮುಖಂಡರು, ಬಬಲೇಶ್ವರ ಮತಕ್ಷೇತ್ರದಲ್ಲಿ ತಳವಾರ ಸಮುದಾಯಕ್ಕೆ ಎಸ್. ಟಿ. ಪ್ರಮಾಣ ಪತ್ರ ಒದಗಿಸುವಲ್ಲಿ ಶಾಸಕರು ಪ್ರಾಮಾಣಿಕ ಪ್ರಯತ್ನಾ ಮಾಡಿದ್ದಾರೆ.  ಈ ಹಿನ್ನೆಲೆಯಲ್ಲಿ ಸನ್ಮಾನಿಸುತ್ತಿರುವುದಾಗಿ ತಿಳಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಎಂ. ಬಿ. ಪಾಟೀಲ, ತಳವಾರ ಸಮುದಾಯ […]

Yatnal CM Ibrahim: ಬಸವ ತತ್ವಕ್ಕೆ ಸಿಎಂ ಮಾಡುವ ಶಕ್ತಿಯಿದೆ- ಯತ್ನಾಳ ಹಿಂದುತ್ವ ಬಿಟ್ಟು ಬಸವ ತತ್ವ ಪಾಲಿಸಿದರೆ ಸಿಎಂ ಆಗುತ್ತಾರೆ- ಸಿಎಂ ಇಬ್ರಾಹಿಂ

ವಿಜಯಪುರ: ಬಸವ ತತ್ವಕ್ಕೆ ಸಿಎಂ ಮಾಡುವ ಶಕ್ತಿಯಿದೆ.  ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಿಂದುತ್ವ ಬಿಟ್ಟು ಬಸವ ತತ್ವ ಪಾಲಿಸಿದರೆ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 10 ವರ್ಷಗಳ ಹಿಂದೆಯೇ ಯತ್ನಾಳ ಅವರಿಗೆ ಭವಿಷ್ಯ ನುಡಿದಿದ್ದೆ.  ನೀವು ಮುಂದೆ ಮುಖ್ಯಮಂತ್ರಿಯಾಗುವ ಸರಕು ಎಂದು ಹೇಳಿದ್ದೆ.  ಚಿಲ್ಲರೆಯಾಗಲು ಹೋಗಬೇಟಡಿ ಎಂದು ಕಿವಿಮಾತು ಹೇಳಿರುವುದಾಗಿ ಅವರು ತಿಳಿಸಿದರು. ಕೇಶವ ತತ್ವ ಇಂಪೋರ್ಟೆಡ್ […]

DC Office Constitution Day: ಜಿಲ್ಲಾಧಿಕಾರಿ ಕಚೇರಿ ಪ್ರವಾಸೋದ್ಯಮ ಇಲಾಖೆಯಲ್ಲಿ ಸಂವಿಧಾನ ದಿನಾಚರಣೆ

ವಿಜಯಪುರ: ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಮತ್ತು ಪ್ರವಾಸೋದ್ಯಮ ಕಚೇರಿಯಲ್ಲಿ ಸಂವಿಧಾನ ದಿನ ಆಚರಿಸಲಾಯಿತು.  ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಡಿಸಿ ಕಚೇರಿ ಸಭಾಂಗಣದಲ್ಲಿ ಸಂವಿಧಾನ ದಿನದ ಅಂಗವಾಗಿ ಸಾಮೂಹಿಕವಾಗಿ ಸಂವಿಧಾನ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು. ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು, ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ,  ಸಂವಿಧಾನ ದಿನದ ಅಂಗವಾಗಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.  ನಂತರ  ಸಮಾಜ ಕಲ್ಯಾಣ […]

Voter List DC: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ- ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನ್ನವರ

ವಿಜಯಪುರ: ಚುನಾವಣೆ ಆಯೋಗದ ನಿರ್ದೇಶನದಂತೆ ಜಿಲ್ಲಾದ್ಯಂತ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ವಿಜಯಪುರ ನಗರದ ನಾನಾ ಮತಗಟ್ಟೆ, ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ನಗರದ ಮತಗಟ್ಟೆ ಸಂಖ್ಯೆ 153 ಹಾಗೂ ಮತಗಟ್ಟೆ ಸಂಖ್ಯೆ 119ರ ಸ್ವತಂತ್ರ ಕಾಲನಿ, ಖಾಜಾನಗರ, ಗುಂಡಬಾವಡಿ ಪ್ರದೇಶದ ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಮತದಾರ ಪಟ್ಟಿ ಪರಿಷ್ಕರಣೆ […]

Constitution Day: ಸಂವಿಧಾನದ ಆಶಯಕ್ಕನುಗುಣವಾಗಿ ನಡೆದುಕೊಳ್ಳಬೇಕು- ನ್ಯಾಯಾಧೀಶ ಜಿ. ಜಿ. ಕುರವತ್ತಿ

ವಿಜಯಪುರ: ಸಂವಿಧಾನದ ಪೂರ್ವ ಪೀಠಿಕೆಯ ಆಶಯವನ್ನು ಪ್ರತಿಯೊಬ್ಬರೂ ಅರ್ಥೈಸಿಕೊಂಡು ಸ್ಪಂದಿಸಿ, ಸಂವಿಧಾನದ ಆಶಯಕ್ಕನುಗುಣವಾಗಿ ನಡೆದುಕೊಳ್ಳಬೇಕು ಎಂದು  ವಿಜಯಪುರ ಜಿಲ್ಲಾ ಪ್ರಧಾನ  ಮತ್ತು ಸತ್ರ ನ್ಯಾಯಾಧೀಶ ಜಿ. ಜಿ. ಕುರವತ್ತಿ ಹೇಳಿದ್ದಾರೆ.  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ,ಪೊಲೀಸ್. ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಸಂವಿಧಾನ ದಿನ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಅವರು ಮಾತನಾಡಿದರು. ತ್ವರಿತಗತಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ರಾಮ ನಾಯಕ ಮಾತನಾಡಿ, ಸಂವಿಧಾನವು ನಮ್ಮೆಲ್ಲರಿಗೂ […]