DC Office Constitution Day: ಜಿಲ್ಲಾಧಿಕಾರಿ ಕಚೇರಿ ಪ್ರವಾಸೋದ್ಯಮ ಇಲಾಖೆಯಲ್ಲಿ ಸಂವಿಧಾನ ದಿನಾಚರಣೆ

ವಿಜಯಪುರ: ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಮತ್ತು ಪ್ರವಾಸೋದ್ಯಮ ಕಚೇರಿಯಲ್ಲಿ ಸಂವಿಧಾನ ದಿನ ಆಚರಿಸಲಾಯಿತು. 

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಡಿಸಿ ಕಚೇರಿ ಸಭಾಂಗಣದಲ್ಲಿ ಸಂವಿಧಾನ ದಿನದ ಅಂಗವಾಗಿ ಸಾಮೂಹಿಕವಾಗಿ ಸಂವಿಧಾನ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.

ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು, ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ,  ಸಂವಿಧಾನ ದಿನದ ಅಂಗವಾಗಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.  ನಂತರ  ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಹೊರತಂದಿರುವ ‘ಭಾರತದ ಸಂವಿಧಾನ’ ಪುಸ್ತಕವನ್ನು ಅವರು ಈ ಸಂದರ್ಭದಲ್ಲಿ ಬಿಡುಗಡೆ ಮಾಡಿದರು.

ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಪ್ರತಿಜ್ಞಾ ವಿಧಿ ಬೋಧಿಸಿದರು

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಮನಗೌಡ ಕನ್ನೋಳಿ ಸ್ವಾಗತಿಸಿ, ಸಂವಿಧಾನದ ಆಶಯ ಹಾಗೂ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ನಗರಾಭಿವೃದ್ದಿ ಕೋಶಧ ಯೋಜನಾ ನಿರ್ದೇಶಕ ರಾಜಶೇಖರ ಡಂಬಳ, ವಿಜಯಪುರ ತಹಸೀಲ್ದಾರ ಸಿದ್ರಾಯ ಭೋಸಗಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಸಿದ್ರಾಮ ಮಾರಿಹಾಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂತೋಷ ಚವ್ಹಾಣ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಪುಂಡಲೀಕ ಮಾನವರ, ವ್ಯವಸ್ಥಾಪಕ ಡಾ. ಅರವಿಂದ ಲಂಬು ಹಾಗೂ ನಾನಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರವಾಸೋದ್ಯಮ ಇಲಾಖೆಯಲ್ಲಿ ಸಂವಿಧಾನ ದಿನಾಚರಣೆ

ವಿಜಯಪುರ ನಗರದ ಸ್ಟೇಶನ್ ರಸ್ತೆಯಲ್ಲಿರುವ ಪ್ರವಾಸೋದ್ಯಮ ಇಲಾಖೆಯಲ್ಲಿಯೂ ಸಂವಿಧಾನ ದಿನ ಆಚರಿಸಲಾಯಿತು.  ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಕಚೇರಿ ಸಿಬ್ಬಂದಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

Leave a Reply

ಹೊಸ ಪೋಸ್ಟ್‌