Voter List DC: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ- ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನ್ನವರ

ವಿಜಯಪುರ: ಚುನಾವಣೆ ಆಯೋಗದ ನಿರ್ದೇಶನದಂತೆ ಜಿಲ್ಲಾದ್ಯಂತ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ವಿಜಯಪುರ ನಗರದ ನಾನಾ ಮತಗಟ್ಟೆ, ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಜಯಪುರ ನಗರದ ಮತಗಟ್ಟೆ ಸಂಖ್ಯೆ 153 ಹಾಗೂ ಮತಗಟ್ಟೆ ಸಂಖ್ಯೆ 119ರ ಸ್ವತಂತ್ರ ಕಾಲನಿ, ಖಾಜಾನಗರ, ಗುಂಡಬಾವಡಿ ಪ್ರದೇಶದ ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದೆ.  ತಮ್ಮ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ಹೊಸ ಸೇರ್ಪಡೆ, ತಿದ್ದುಪಡಿ, ಸ್ಥಳಾಂತರ, ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವುದು ಹಾಗೂ ವಿಳಾಸದ ಬದಲಾವಣೆಗಳಿದ್ದರೆ ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು.  ಜನವರಿ 1, ಏಪ್ರಿಲ್ 1,  ಜುಲೈ 1 ಹಾಗೂ ಅಕ್ಟೋಬರ್ 1ರಂದು ನಾಲ್ಕು ಅರ್ಹತಾ ದಿನಾಂಕಗಳನ್ನು ನಿಗದಿ ಪಡಿಸಲಾಗಿದೆ. ಅರ್ಹ ಯುವ ಮತದಾರರು ತಮ್ಮ ಹೆಸರು ಸೇರ್ಪಡೆಗಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ  ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮನೆಮನೆಗೆ ತೆರಳಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪರಿಶೀಲಿಸಿದರು

ಮತಗಟ್ಟೆ ಅಧಿಕಾರಿಗಳು ಸಹ ಯಾವುದೇ ಮತದಾರ ಮತದಾನದಿಂದ ವಂಚಿತವಾಗದಂತೆ ಜವಾಬ್ದಾರಿಯಿಂದ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯ ಕೈಗೊಳ್ಳುವಂತೆ ಸಲಹೆ ನೀಡಿದ ಅವರು, ಮತದಾರ ಪಟ್ಟಿಯಲ್ಲಿ ದೋಷಗಳಿಲ್ಲದೇ ಮತದಾರ ಪಟ್ಟಿಯನ್ನು ಸಿದ್ದಪಡಿಸುವಂತೆ ಸೂಚನೆ ನೀಡಿದರು.

ಮತದಾರ ಲಿಂಗಾನುಪಾತ ಹಾಗೂ 18 ವರ್ಷದ ಯುವ ಮತದಾರರು ಮತದಾರರ ಪಟ್ಟಿಯ ಅನುಪಾತ ಕುರಿತು ಮತಗಟ್ಟೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ, ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವುದಾದರೂ ಗೊಂದಲ, ಸಮಸ್ಯೆಗಳಿದ್ದಲ್ಲಿ ಜಿಲ್ಲಾ ದೂರು ನಿರ್ವಹಣೆ ಕೇಂದ್ರದ ಟೋಲ್ ಫ್ರೀ ಸಂಖ್ಯೆ 1950ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಜಯಪುರ ತಹಸೀಲ್ದಾರ ಸಿದರಾಯ ಭೋಸಗಿ ಸೇರಿದಂತೆ ಮತಗಟ್ಟೆ ಅಧಿಕಾರಿಗಳು ಉಪಸ್ತಿತರಿದ್ದರು.

Leave a Reply

ಹೊಸ ಪೋಸ್ಟ್‌