Reservation MBP: 2014ರಲ್ಲಿಯೇ ತಳವಾರ ಸಮುದಾಯಕ್ಕೆ ಎಸ್. ಟಿ. ಮೀಸಲಾತಿ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲಾಗಿತ್ತು- ಎಂ. ಬಿ. ಪಾಟೀಲ
ವಿಜಯಪುರ: 2014ರಲ್ಲಿ ಸಿದ್ಧರಾಮಯ್ಯ ಸಿಎಂ ಆಗಿದ್ದಾಗ ತಳವಾರ ಸಮುದಾಯದ ಮುಖಂಡರು ನನ್ನ ಬಳಿಗೆ ಬಂದು ಮನವಿ ಮಾಡಿದ್ದರಿಂದ ಈ ಸಮುದಾಯವನ್ನು ಎಸ್. ಟಿ. ಮೀಸಲಾತಿ ಪಟ್ಟಿಗೆ ಸೇರಿಸುವಂತೆ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲಾಗಿತ್ತು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಬಬಲೇಶ್ವರ ಶಾಸಕ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರದಲ್ಲಿ ನಾನಾ ಯೋಜನೆಗಳ ಫಲಾನುಭವಿಗಳಿಗೆ ಪಿಂಚಣಿ ಆದೇಶ ಪ್ರತಿ ಮತ್ತು ಕಾರ್ಮಿಕರಿಗೆ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾನು […]