ವಿಜಯಪುರ: ಮತದಾರರ ಪಟ್ಟಿ ಪರಿಷ್ಕರಣೆ ವಿಶೇಷ ಅಭಿಯಾನದ ಅಂಗವಾಗಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ವಿಶೇಷ ಚೇತನ ಮತದಾರರು ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಕುರಿತು ಜಾಗೃತಿ ಮೂಡಿಸಿದರು.
ವಿಜಯಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದಿರುವ ಜಿಲ್ಲಾ ಮಟ್ಟದ ವಿಕಲಚೇತನರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವಿಕಲಚೇತನರಿಗೆ ಜಾಗೃತಿ ಮೂಡಿಸಿ, ಯಾವುದೇ ವ್ಯಕ್ತಿ ಮತದಾನದಿಂದ ದೂರ ಉಳಿಯದೇ, ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಪ್ರತಿಯೊಬ್ಬರು ಮತದಾನ ಮಾಡಬೇಕು. ಈ ನಿಟ್ಟಿನಲ್ಲಿ ಮತದಾರ ಪಟ್ಟಿ ಪರಿಷ್ಕರಣೆ ವಿಶೇಷ ಅಭಿಯಾನ ನಡೆಯುತ್ತಿದ್ದು, ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ಬದಲಾವಣೆಗೆ ಅವಕಾಶ ಕಲ್ಪಿಸಲಾಗಿದ್ದು, ಇದರ ಸದುಪಯೋಗ ಪಡೆದುಕೊಂಡು ಪ್ರತಿಯೊಬ್ಬರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಕೊಳ್ಳುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಕ್ಯಾ. ಮಹೇಶ ಮಾಲಗಿತ್ತಿ, ಯುವ ಸಬಲೀಕರಣ ಮತ್ತು ಕ್ರೀಡ ಇಲಾಖೆ ಸಹಾಯಕ ನಿರ್ದೇಶಕ ಎಸ್. ಜಿ. ಲೋಣಿ ಮುಂತಾದವರು ಉಪಸ್ಥಿತರಿದ್ದರು.