Border Water: ಮಹಾ ತಗಾದೆಯ ಮಧ್ಯೆಯೇ- ಕರ್ನಾಟಕದಿಂದ ಮಹಾರಾಷ್ಟ್ರದ 28 ಗ್ರಾಮಗಳಿಗೆ ಹರಿದ ನೀರು- ಸಿಎಂ ಬೊಮ್ಮಾಯಿ, ಮಾಜಿ ಸಚಿವ ಎಂ ಬಿ ಪಾಟೀಲ್ ಧನ್ಯವಾದ ಎಂದ ರೈತರು
ವಿಜಯಪುರ: ಮಹಾರಾಷ್ಟ್ರ ಗಡಿ ವಿವಾದದ ಕಿಚ್ಚನ್ನು ಹೆಚ್ಚಿಸಿರುವ ಮಧ್ಯೆಯೇ ಈಗ ಮಹಾರಾಷ್ಟ್ರದ 28 ಗ್ರಾಮಗಳಿಗೆ ಕರ್ನಾಟಕದಿಂದ ನೀರು ಹರಿದಿದೆ. ಕರ್ನಾಟಕದ ವ್ಯಾಪ್ತಿಯಲ್ಲಿರುವ ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಮಹಾರಾಷ್‌ಟರ ರಾಜಕೀಯ ಮುಖಂಡರು ಮತ್ತೆ ತಗಾದೆ ತೆಗೆದಿದ್ದಾರೆ. ಈ ವಿಚಾರ ಈಗ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಸಾಕಷ್ಟು ಬಿಸಿಬಿಸಿ ಚರ್ಚೆಗೆ ಕಾರಣವಾಗಿರುವ ಮಧ್ಯೆಯೇ ಈಗ ಕರ್ನಾಟಕದಿಂದ ಮಹಾರಾಷ್ಟ್ರದ 28 ಗ್ರಾಮಗಳಿಗೆ ನೀರು ಹರಿದು ಬಂದಿದೆ. ಮಹಾರಾಷ್ಟ್ರದ ಸಾಗಲಿ ಜಿಲ್ಲೆಯ ಜತ್ ತಾಲೂಕಿನ 28 ಗ್ರಾಮಗಳಿಗೆ ಕರ್ನಾಟಕದಿಂದ ಕೃಷ್ಣಾ ನದಿ […]
DC Visit: ಜುಮನಾಳದಲ್ಲಿ ವೃದ್ಧಾಶ್ರಮಕ್ಕೆ ಭೇಟಿ- ಹಿಟ್ಟಿನಹಳ್ಳಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಡಿಸಿ ಡಾ. ದಾನಮ್ಮನವರ
ವಿಜಯಪುರ: ಕಳೆದ ಕೆಲವು ದಿನಗಳಿಂದ ನಾನಾ ತಾಲೂಕುಗಳ ಹಲವಾರು ಗ್ರಾಮಗಳಿಗೆ ಭೇಟಿ ನೀಡುತ್ತಿರುವ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಿಗ್ಗೆ ನಾಗಠಾಣ ಮತಕ್ಷೇತ್ರದ ಜುಮನಾಳ ಗ್ರಾಮಕ್ಕೆ ತೆರಳಿದ ಅವರು ವೃದ್ಧಾಶ್ರಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಇದೇ ಗ್ರಾಮದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಪರಿಶೀಲನೆ ನಡೆಸಿದರು. ನಂತರ ಹಿಟ್ಟಿನಹಳ್ಳಿ ಗ್ರಾಮಕ್ಕೆ ತೆರಳಿದ ಅವರು, ಅಲ್ಲಿಯೂ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿದರು. ಈ […]
MBP MBBS Help: ಎಂ. ಬಿ. ಪಾಟೀಲ ಸಹಾಯ ಹಸ್ತ- ಬಡ ರೈತ, ಕೃಷಿ ಕಾರ್ಮಿಕನ ಮಕ್ಕಳು ಎಂ ಬಿ ಬಿ ಎಸ್ ಪ್ರವೇಶ ಪಡೆಯಲು ತಲಾ ರೂ. 4 ಲಕ್ಷ ಧನ ಸಹಾಯ
ವಿಜಯಪುರ: ನೀಟ್ ಪಾಸಾಗಿ ಸರಕಾರಿ ಕೋಟಾದಲ್ಲಿ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್. ಸೀಟು ಸಿಕ್ಕಿದ್ದರೂ ಆರ್ಥಿಕ ಸಂಕಷ್ಟದಿಂದಾಗಿ ಪ್ರವೇಶ ಪಡೆಯಲು ಪರದಾಡುತ್ತಿದ್ದ ರೈತ ಮತ್ತು ಕೃಷಿ ಕಾರ್ಮಿಕನ ಮಕ್ಕಳಿಗೆ ಹಣಕಾಸು ನೆರವು ನೀಡುವ ಮೂಲಕ ಕೆ.ಪಿ.ಸಿ.ಸಿ. ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಬಿ.ಎಲ್.ಡಿ.ಇ. ಸಂಸ್ಥೆಯ ಅಧ್ಯಕ್ಷ ಎಂ.ಬಿ.ಪಾಟೀಲ ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹುಬನೂರ ಗ್ರಾಮದ ಚನಬಸು ಮಾಳಿ ಮತ್ತು ಸಿದ್ಧಾಪುರ ಗ್ರಾಮದ ಶೆಮ್ಮಿರ ಜಾತಗಾರ ಎಂ.ಬಿ.ಬಿ.ಎಸ್.ಪ್ರವೇಶ ಪಡೆಯಲು ಹಣಕಾಸಿನ ತೊಂದರೆಯಿಂದಾಗಿ ಪರದಾಡುತ್ತಿದ್ದರು. […]
Wrestling Championship: ಶಿಕ್ಷಕರ ತವರಿನಲ್ಲಿ ಗಮನ ಸೆಳೆದ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ- ಲಚ್ಯಾಣ ಗ್ರಾಮಸ್ಥರ ಆತಿಥ್ಯಕ್ಕೆ ಮನಸೋತ ಕ್ರೀಡಾಳುಗಳು
ವಿಜಯಪುರ: ಶಾಲಾ ಮಟ್ಟದ ಅದರಲ್ಲೂ ರಾಜ್ಯ ಮಟ್ಟದ ಕ್ರೀಡಾಕೂಟಗಳು ಜಿಲ್ಲಾ ಕೇಂದ್ರಗಳಲ್ಲಿ ನಡೆಯುವುದು ಸಾಮಾನ್ಯ. ಅದರಲ್ಲೂ ಗ್ರಾಮೀಣ ಕ್ರೀಡೆಗಳೂ ಕೂಡ ನಗರ ಪ್ರದೇಶಗಳಲ್ಲಿ ನಡೆಯುತ್ತಿರುತ್ತವೆ. ಬೇರೆ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಾಗಿ ಸಂಚಾರ ವ್ಯವಸ್ಥೆ ಉತ್ತಮವಾಗಿರುತ್ತದೆ ಎಂಬ ಕಾರಣಕ್ಕಾಗಿ ಬಹುತೇಕ ಜಿಲ್ಲೆಗಳ ಆಯೋಜಕರು ತಮ್ಮ ಜಿಲ್ಲಾ ಕೇಂದ್ರಗಳಲ್ಲಿಯೇ ಕ್ರೀಡಾಕೂಟಗಳನ್ನು ಸಂಘಟಿಸುವ ಮೂಲಕ ಗಮನ ಸೆಳೆಯುತ್ತಾರೆ. ಆದರೆ, ಇದಕ್ಕೆ ಅಪವಾದ ಎಂಬಂತೆ ಅದೂ ಕೂಡ ನಾಡಿಗೆ ಸಾವಿರಾರು ಶಿಕ್ಷಕರನ್ನು ನೀಡಿರುವ ಬಸವ ನಾಡು ವಿಜಯಪುರ ಜಿಲ್ಲೆಯ ಇಂಡಿ […]