DC Visit: ಜುಮನಾಳದಲ್ಲಿ ವೃದ್ಧಾಶ್ರಮಕ್ಕೆ ಭೇಟಿ- ಹಿಟ್ಟಿನಹಳ್ಳಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಡಿಸಿ ಡಾ. ದಾನಮ್ಮನವರ

ವಿಜಯಪುರ: ಕಳೆದ ಕೆಲವು ದಿನಗಳಿಂದ ನಾನಾ ತಾಲೂಕುಗಳ ಹಲವಾರು ಗ್ರಾಮಗಳಿಗೆ ಭೇಟಿ ನೀಡುತ್ತಿರುವ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳಿಗ್ಗೆ ನಾಗಠಾಣ ಮತಕ್ಷೇತ್ರದ ಜುಮನಾಳ ಗ್ರಾಮಕ್ಕೆ ತೆರಳಿದ ಅವರು ವೃದ್ಧಾಶ್ರಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಇದೇ ಗ್ರಾಮದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಪರಿಶೀಲನೆ ನಡೆಸಿದರು.

ನಾಗಠಾಣ ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿದ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ನಂತರ ಹಿಟ್ಟಿನಹಳ್ಳಿ ಗ್ರಾಮಕ್ಕೆ ತೆರಳಿದ ಅವರು, ಅಲ್ಲಿಯೂ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿದರು.

ಈ ಸಂದರ್ಭದಲ್ಲಿ ವಿಜಯಪುರ ತಹಸೀಲ್ದಾರ ಸಿದ್ರಾಮ ಬೋಸಗಿ, ಕಂದಾಯ ನಿರೀಕ್ಷಕ ವಿಜಯಕುಮಾರ ಗುಮಶೆಟ್ಟಿ, ಚುನಾವಣೆ ಮತದಾರರ ಪಟ್ಟಿಗೆ ಸಂಬಂಧಿಸಿದ ಬಿ ಎಲ್ ಒ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌