ವಿಜಯಪುರ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಖುದ್ದಾಗಿ ಪರಿಶೀಲನೆ ನಡೆಸುವ ಕಾರ್ಯ ಮುಂದುವರೆಸಿದ್ದಾರೆ.
ಬಸವನ ಬಾಗೇವಾಡಿ ಹಾಗೂ ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪರಿಶೀಲನೆ ನಡೆಸಿದರು. ಬಸವನ ಬಾಗೇವಾಡಿ ಮತಕ್ಷೇತ್ರದ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದ ಮತಗಟ್ಟೆ ಸಂ.139 ಹಾಗೂ 141ರಲ್ಲಿ ಹಾಗೂ ಮುತ್ತಗಿ ಗ್ರಾಮದ ಮತಗಟ್ಟೆ ಸಂಖ್ಯೆ 100 ಹಾಗೂ 101ರ ವ್ಯಾಪ್ತಿಯಲ್ಲಿನ ಮನೆ ಮನೆಗೆ ಹಾಗೂ ಮುದ್ದೇಬಿಹಾಳ ತಾಲೂಕಿನ ಅಗಸಬಾಳ ಗ್ರಾಮದಲ್ಲಿ ಮತಗಟ್ಟೆ ಸಂಖ್ಯೆ 51ರ ಮುದ್ದೇಬಿಹಾಳ ತಾಲೂಕಿನ ಹಳ್ಳೂರ ಗ್ರಾಮದ ಮತಗಟ್ಟೆ ಸಂಖ್ಯೆ 48ರ ವ್ಯಾಪ್ತಿಯ ಮನೆ-ಮನೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಅಲ್ಲದೇ, ಪ್ರಕಟಿತ ಕರಡು ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಾತ್ರಿಪಡಿಸಿಕೊಳ್ಳಬೇಕು. ಹೆಸರು ಇಲ್ಲದಿದ್ದಲ್ಲಿ, ತಿದ್ದುಪಡಿಗಳಿದ್ದಲ್ಲಿ ತಿದ್ದುಪಡಿ, ಹೆಸರು ನೋಂದಾಯಿಸಲು ಸರ್ಕಾರ ವೋಟರ್ ಹೆಲ್ಪಲೈನ್ ಬಿಡುಗಡೆಗೊಳಿಸಿದ್ದು, ಹೆಲ್ಪಲೈನ್ ಮೂಲಕವೂ ಸಹ ಮತದಾರರ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು.
ಹೆಸರು ನೋಂದಾಯಿಸಲು ಅಗತ್ಯ ದಾಖಲೆಗಳನ್ನು ಪಡೆದು, ಮತಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನಿಡಗುಂಡಿ ತಹಸೀಲ್ದಾರ ಅನೀಲಕುಮಾರ ಢವಳಗಿ, ಬಸವನ ಬಾಗೇವಾಡಿ ತಹಶೀಲ್ದಾರ ಪ್ರೇಮಸಿಂಗ್ ಪವಾರ, ಮುದ್ದೇಬಿಹಾಳ ತಹಸೀಲ್ದಾರ ಬಿ. ಎಸ್. ಕಡಕಬಾವಿ, ಗೊಳಸಂಗಿ ಪಿಡಿಓ ಸೇರಿದಂತೆ ಮತಗಟ್ಟೆ ಅಧಿಕಾರಿಗಳು ಉಪಸ್ಥಿತರಿದ್ದರು.