Students Distnction: ಜೆ ಎಸ್ ಎಸ್ ಶಿಕ್ಷಣ ಮಹಾವಿದ್ಯಾಲಯದ ಎಲ್ಲ ವಿದ್ಯಾರ್ಥಿಗಳು ಎಂ.ಇಡ್ ಪರೀಕ್ಷೆಯಲ್ಲಿ ಡಿಸ್ಚಿಂಕ್ಷನ್ ನಲ್ಲಿ ಉತ್ತೀರ್ಣ

ವಿಜಯಪುರ: ನಗರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ಜೆ ಎಸ್ ಎಸ್ ಸ್ನಾತಕೋತ್ತರ ಶಿಕ್ಷಣ ಅಧ್ಯಯನ ಕೇಂದ್ರದ(ಎಂ.ಇ.ಡಿ)ದ ಎಲ್ಲ ವಿದ್ಯಾರ್ಥಿಗಳು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ನಡೆಸಿದ ಸ್ನಾತಕೋತ್ತರ ಪರಿಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಾಸಾಗುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಪ್ರಾಚಾರ್ಯ ಡಾ. ಬಿ. ವೈ. ಖಾಸನೀಸ್ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಎಂ. ಇಡಿ ನಾಲ್ಕನೇ ಸೆಮಿಸ್ಟರ್ ಪರಿಕ್ಷೆಯಲ್ಲಿ ಕಾಲೇಜಿನ ಎಲ್ಲ 10 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯೊಂದಿಗೆ ಡಿಸ್ಟಿಂಕ್ಷನ್‍ನಲ್ಲಿ ಪಾಸಾಗಿದ್ದಾರೆ.  ಕಾಲೇಜಿನ ಉಮೇಶ ಕಾಂಬಳೆ ಶೇ. 82.62 ಮತ್ತು ವಿಜಯ ಚಲವಾದಿ ಶೇ. 81.24 ಅಂಕಗಳನ್ನು ಗಳಿಸುವ ಮೂಲಕ ಕೇಂದ್ರಕ್ಕೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಉಮೇಶ ಕಾಂಬಳೆ
ವಿಜಯ ಚಲವಾದಿ

ತಮ್ಮ ಸಾಧನೆಯ ಮೂಲಕ ಜೆ ಎಸ್ ಎಸ್ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿರುವ ಎಲ್ಲ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಬಿ ಎಲ್ ಡಿ ಇ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಬಿ. ಪಾಟೀಲ ಮತ್ತು ಆಡಳಿತ ಮಂಡಳಿ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

ಹೊಸ ಪೋಸ್ಟ್‌