ವಿಜಯಪುರ: ಜಿಲ್ಲೆಯ 15 ಜನ ಪುರುಷರು ಸಂತಾನ ಹರಣ ಚಿಕಿತ್ಸೆ ಒಳಗಾಗುವ ಮೂಲಕ ಗಮನ ಸೆಳೆದಿದ್ದಾರೆ.
ಬಿ.ಎಲ್.ಡಿ.ಇ ಡೀಮ್ಡ್ ವಿವಿ, ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಪುರುಷರ ಸಂತಾನ ಹರಣ ಶಸ್ತ್ರಚಿಕಿತ್ಸೆ ಶಿಬಿರ ನಡೆಯಿತು.
ಈ ಶಿಬಿರದಲ್ಲಿ ಡಾ.ಗಿರೀಶ ಕುಲ್ಲೋಳ್ಳಿ, ಡಾ.ತೇಜಸ್ವೀನಿ ವಲ್ಲಭ ಹಾಗೂ ಡಾ.ಎಂ.ಬಿ.ಪಾಟೀಲ ಶಸ್ತ್ರಚಿಕಿತ್ಸಾ ತಂಡವು ಈ ಶಿಬಿರದಲ್ಲಿ ಸ್ವಯಂ ಪ್ರೇರಿತರಾಗಿ ಆಗಮಿಸಿದ 15 ಜನ ಪುರುಷರು ಸಂತಾನ ಹರಣ ಶಸ್ತ್ರಚಿಕಿತ್ಸೆ ನೇರವೇರಿಸಿದರು.
ಈ ಸಂದರ್ಭದಲ್ಲಿ ಕಾಲೇಜು ಪ್ರಾಚಾರ್ಯ ಡಾ.ಅರವಿಂದ ಪಾಟೀಲ, ವೈದ್ಯಕೀಯ ಅಧೀಕ್ಷಕ ಡಾ.ರಾಜೇಶ ಹೊನ್ನುಟಗಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುರೇಶ ಚವ್ಹಾಣ, ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ರಾಜೇಶ್ವರಿ ಗೋಲಗೇರಿ, ಡಾ.ಟಿ.ಎ.ಹಿಟ್ನಳ್ಳಿ, ಡಾ.ಬಾಲಕೃಷ್ಣ.ಜಿ.ಕೆ, ಡಾ.ಸಂತೋಷ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.