ವಿಜಯಪುರದಲ್ಲಿ ಸಶಸ್ತ್ರ ಪಡೆಗಳ ಧ್ವಜ ದಿನ ಆಚರಣೆ

ವಿಜಯಪುರ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಈ ಸಂದರ್ಭದಲ್ಲಿ ಸಶಸ್ತ್ರ ಪಡೆಗಳ ಸಾಂಕೇತಿಕ ಧ್ವಜ ಹಾಗೂ ವಾಹನ ಧ್ವಜಗಳನ್ನು ಬಿಡುಗಡೆ ಮಾಡಿದರು. ಅಲ್ಲದೇ, ಸಾಂಕೇತಿಕವಾಗಿ ಧ್ವಜ ಸ್ವೀಕರಿಸಿ, ದೇಣಿಗೆ ನೀಡುವುದರ ಮೂಲಕ ಸಾರ್ವಜನಿಕರಿಗೆ ಧ್ವಜಗಳನ್ನು ಮಾರಾಟ ಮಾಡಿ ದೇಣಿಗೆ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಿದರು.

ಸೈನಿಕ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿವೇಕಾನಂದ ಹೂವಿನಹಳ್ಳಿ, ಮಾಜಿ ಸುಬೇದಾರ ಕ್ಯಾ. ಎನ್. ಡಿ. ಸೂರ್ಯವಂಶಿ, ಲೆ. ಮಹಿಬೂಬ ಸುಭಾನಿ, ಪ್ರವೀಣ ನಾಗಮೋತಿ, ಮೀರಾ ಐಗಳಿ, ಗುರುರಾಜ ಕುಲಕರ್ಣಿ, ರಾವಸಾಬ ಮೆಣಸಂಗಿ, ರವಿ ಅವರಾಧಿ ಸೇರಿದಂತೆ ಇತರೆ ಮಾಜಿ ಸೈನಿಕರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌