ವಿಜಯಪುರ: ಮಹಾನಗರ ಪಾಲಿಕೆ ವ್ಯಾಪ್ತಿಯ 35 ವಾರ್ಡಗಳನ್ನು ಬಯಲು ಶೌಚಮುಕ್ತ ವಾರ್ಡಗಳೆಂದು ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಅವರು ಘೋಷಿಸಿದ್ದಾರೆ.
ಮಹಾನಗರ ಪಾಲಿಕೆ ವ್ಯಾಪ್ತಿಯ 35 ವಾರ್ಡಗಳನ್ನು ಬಯಲು ಶೌಚಮುಕ್ತ ವಾರ್ಡಗಳೆಂದು ಘೋಷಿಸಲು ನಾನಾ ವಾರ್ಡಗಳಲ್ಲಿ ಶೌಚಾಲಯರಹಿತ ಅರ್ಹ ಫಲಾನುಭವಿಗಳಿಗೆ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಿ, ಶೌಚಾಲಯ ಸೌಲಭ್ಯದಿಂದ ವಂಚಿತರಾದ ಕುಟುಂಬಗಳು, ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು, ಶಾಲಾ ಮುಖ್ಯಸ್ಥರು ಹಾಗೂ ಭಾದಿತರಾಗಬಹುದಾದ ವ್ಯಕ್ತಿ, ಸಂಘ, ಸಂಸ್ಥೆಗಳಿಂದ ಆಕ್ಷೇಪಣೆ-ಸಲಹೆಗಳನ್ನು ಸಲ್ಲಿಸಲು ಡಿ. 7ರ ವರೆಗೆ ದಿನಾಂಕವನ್ನು ನಿಗದಿ ಪಡಿಸಲಾಗಿತ್ತು.
ಆದರೆ, ಈ ನಿಗದಿತ ಅವಧಿಯಲ್ಲಿ ಯಾವುದೇ ಆಕ್ಷೇಪಣೆಗಳು ಬಾರದ ಹಿನ್ನಲೆಯಲ್ಲಿ ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬುರವ ಎಲ್ಲಾ 35 ವಾರ್ಡಗಳನ್ನು ಓಡಿಎಫ್+ ಬಯಲು ಶೌಚ ಮುಕ್ತ ಘೋಷಿಸಲಾಗಿದೆ ಎಂದು ವಿಜಯಕುಮಾರ ಮೆಕ್ಕಳಕಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.