Namma Clinic: ವಿಜಯಪುರ ಜಿಲ್ಲೆಯ ನಮ್ಮ ಕ್ಲಿನಿಕ್- ಮುಖ್ಯಮಂತ್ರಿಗಳಿಂದ ವರ್ಚುವಲ್ ಮೂಲಕ ಲೋಕಾರ್ಪಣೆ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಸ್ಥಾಪಿಸಲಾದ ಐದು ನಮ್ಮ ಕ್ಲಿನಿಕ್‍ ‘ಗಳು ಸೇರಿದಂತೆ ರಾಜ್ಯಾದ್ಯಂತ ಸ್ಥಾಪಿಸಲಾದ 114 ನಮ್ಮ ಕ್ಲಿನಿಕ್‍ಗಳನ್ನು ವರ್ಚುವಲ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಿದ್ದಾರೆ. 

ಖಾಸಗಿ ಆಸ್ಪತ್ರೆಯಲ್ಲಿ ಸಿಗುವ ವೈದ್ಯಕೀಯ ಸೇವೆಯನ್ನು ಜನಸಾಮಾನ್ಯರಿಗೆ ಅತಿ ಕಡಿಮೆ ವೆಚ್ಚದಲ್ಲಿ ಉತ್ತಮ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ಜನಸಾಮಾನ್ಯರಿಗೆ ಅನೂಕೂಲ ಕಲ್ಪಿಸಲು ರಾಜ್ಯ ಸರ್ಕಾರ ಮೊದಲ ಹಂತದಲ್ಲಿ 114 ನಮ್ಮ ಕ್ಲಿನಿಕ್‍ಗಳನ್ನು ಸ್ಥಾಪಿಸಿ ಲೋಕಾರ್ಪಣೆ ಮಾಡಲಾಗಿದೆ.

ಬಡತನ ಮತ್ತು ಅನಾರೋಗ್ಯ ಎರಡು ಅಭಿವೃದ್ದಿಯ ಶತ್ರುಗಳು, ಬಡತನದಿಂದ ಮಕ್ಕಳಲ್ಲಿ ಅಪೌಷ್ಠಿಕತೆ ಹೆಚ್ಚುತ್ತದೆ. ಯಾವುದೇ ತಾರತಮ್ಯವಿಲ್ಲದೇ ಎಲ್ಲರಿಗೂ ಉತ್ತಮ ಚಿಕಿತ್ಸೆ, ಉಚಿತ ಔಷಧೋಪಚಾರ ದೊರೆಯಲು ಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನಮ್ಮ ಸರಕಾರ ಆದ್ಯತೆ ನೀಡಿದೆ ಎಂದು ಸಿಎಂ ಈ ಸಂದರ್ಭದಲ್ಲಿ ಹೇಳಿದರು.

ವಿಜಯಪುರದಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ನಮ್ಮ ಕ್ಲಿನಿಕ್ ಉದ್ಗಾಟಿಸಿದರು

ವಿಜಯಪುರ ನಗರ ನಮ್ಮ ಕ್ಲಿನಿಕ್ ಉದ್ಘಾಟನೆ

ವಿಜಯಪುರ ಜಿಲ್ಲೆಯಲ್ಲಿ ಸ್ಥಾಪಿಸಲಾದ ಐದು ನಮ್ಮ ಕ್ಲಿನಿಕ್‍ಗಳನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು.  ವಿಜಯಪುರ ನಗರದ ಪೇಟಿಬೌಡಿಯಲ್ಲಿ ಸ್ಥಾಪಿಸಲಾದ ಸುಸಜ್ಜಿತ ನಮ್ಮ ಕ್ಲಿನಿಕ್‍ನ್ನು ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರು ಅವರು ಮಾತನಾಡಿ, ಬಡಜನರ ಅನುಕೂಲಕ್ಕಾಗಿ ಸರಕಾರ ಹಲವು ಕಾರ್ಯಕ್ರಮಗಳನ್ನು ಜಾರಿ ಮಾಡಿದೆ.  ಜಿಲ್ಲೆಯಲ್ಲಿ 10 ನಮ್ಮ ಕ್ಲಿನಿಕ್‍ಗಳು ಮಂಜೂರಾಗಿದ್ದು, ಮೊದಲನೇ ಹಂತದಲ್ಲಿ ಜಿಲ್ಲೆಯ ಇಂಡಿ, ಸಿಂದಗಿ, ಮುದ್ದೇಬಿಹಾಳ, ಬಸವನ ಬಾಗೇವಾಡಿ ಹಾಗೂ ವಿಜಯಪುರ ನಗರದ ಪೇಟಿ ಬಾವಡಿಯಲ್ಲಿ ಸ್ಥಾಪಿಸಲಾದ ಐದು ನಮ್ಮ ಕ್ಲಿನಿಕ್‍ಗಳನ್ನು ಲೋಕಾರ್ಪಣೆ ಮಾಡಿದ್ದಾರೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಸ್ಥಾಪಿಸಲಾದ ಈ ನಮ್ಮ ಕ್ಲಿನಿಕ್‍ಗಳಲ್ಲಿ ವೈದ್ಯಾಧಿಕಾರಿ, ಶುಶ್ರೂಷಣಾಧಿಕಾರಿ ಸೇರಿದಂತೆ ಅಗತ್ಯ ಸಿಬ್ಬಂದಿಗಳು ಕಾರ್ಯ ನಿರ್ವಹಿಸಲಿದ್ದು, ಗರ್ಭೀಣಿ ಆರೈಕೆ ಹಾಗೂ ಬಾಣಂತಿ ಸೇವೆಗಳು, ನವಜಾತ ಶಿಶು ಆರೈಕೆ ಹಾಗೂ ಚುಚ್ಚು ಮದ್ದು ಸೇವೆಗಳು, ಮಕ್ಕಳ ಹಾಗೂ ಹದಿಹರೆಯದವರಿಗೆ ನೀಡುವ ಆರೋಗ್ಯ ಸೇವೆಗಳು, ಹಿರಿಯ ನಾಗರಿಕರ ಆರೈಕೆ ಹಾಗೂ ಉಪಶಾಮಕ ಆರೈಕೆ, ಕಣ್ಣಿನ ಆರೋಗ್ಯ ಸೇವೆ, ದಂತ ಆರೋಗ್ಯ ಸೇವೆ, ತುರ್ತು ವೈದ್ಯಕೀಯ ಸೇವೆ, ಮಾನಸಿ ಆರೋಗ್ಯ ಸೇವೆಗಳು ಕಡಿಮೆ ವೆಚ್ಚದಲ್ಲಿ ಉತ್ತಮ ಗುಣಮಟ್ಟದ ವೈದ್ಯಕೀಯ ಸೇವೆ ದೊರೆಯಲಿವೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ಅಪರ ನಿರ್ದೇಶಕ ಡಾ ಚನ್ನಮ್ಮ ಕಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸುರೇಶ ಚವ್ಹಾಣ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎಸ್. ಎಲ್. ಲಕ್ಕಣ್ಣವರ, ವಿಜಯಪುರ ಡಿವೈಎಸ್ಪಿ ಸಿದ್ದೇಶ್ವರ, ಡಾ. ಕೆ. ಡಿ. ಗುಂಡಬಾವಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ. ಎಂ. ಕೋಳೂರ, ಸುರೇಶ ಹೊಸಮನಿ, ಮಹಾನಗರ ಪಾಲಿಕೆ ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌