University Protest: ರಾಣಿ ಚನ್ನಮ್ಮ ವಿವಿ ಸಮಸ್ಯೆಗಳ ಆಗರವಾಗುತ್ತಿದೆ- ಎಬಿವಿಪಿ ಮಹಾನಗರ ಕಾರ್ಯದರ್ಶಿ ಸುರೇಖಾ ಕುಲಕರ್ಣಿ ಆರೋಪ

ವಿಜಯಪುರ:ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಜೀವನವನ್ನು ರೂಪಿಸಬೇಕಾದ ಶಿಕ್ಷಣದ ಕಾರ್ಖಾನೆಗಳಾಗಬೇಕು.  ವಿದ್ಯಾರ್ಥಿಗಳಿಗೆ ಪೂರಕವಾದ ಶೈಕ್ಷಣಿಕ ವಾತಾವರಣವನ್ನು ನಿರ್ಮಾಣ ಮಾಡುವುದು ವಿಶ್ವವಿದ್ಯಾಲಯಗಳ ಕರ್ತವ್ಯವಾಗಿದೆ ಎಂದು ಎಬಿವಿಪಿ ಮಹಾನಗರ ಕಾರ್ಯದರ್ಶಿ ಸುರೇಖಾ ಕುಲಕರ್ಣಿ ಹೇಳಿದ್ದಾರೆ.  ವಿಜಯಪುರ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಅವರು ಮಾತನಾಡಿದರು. ಬೆಳಗಾವಿಯ ರಾಣಿ ಚೆನ್ನಮ್ಮ ವಿವಿಯ ವಿರುದ್ಧ ಎಬಿವಿಪಿ ಪ್ರತಿಭಟನಾ ಮೆರವಣಿಗೆಯ ಆಯೋಜಿಸಿತ್ತು.  ವಿಜಯಪುರ ನಗರದ ಗ್ರಾಮದೇವತೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿಯವರೆಗೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇತ್ತೀಚಿಗೆ ರಾಣಿ […]

Domestic Violence Workshop: ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ ಕುರಿತು ಕಾರ್ಯಾಗಾರ

ವಿಜಯಪುರ:  ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005ರ ಕುರಿತು ಆಯೋಜಿಸಲಾದ  ತರಬೇತಿಗಳು ಅತೀ ಮುಖ್ಯವಾಗಿದ್ದು, ಎಲ್ಲ ಅಧಿಕಾರಿ-ಸಿಬ್ಬಂದಿಗಳು ಕಾಯಿದೆಯಡಿ ಬರುವ ಕಾನೂನು ಮತ್ತು ನಿಯಮಗಳ ಕುರಿತು ಅರಿವು ಹೊಂದಬೇಕು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ(ಪ್ರಭಾರ) ನ್ಯಾಯಾಧೀಶ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸತೀಶ ಎಲ್. ಪಿ. ಹೇಳಿದರು. ವಿಜಯಪುರ ಜಿಲ್ಲಾಢಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಜಯಪುರ ರವರ ಸಂಯುಕ್ತಾಶ್ರಯದಲ್ಲಿ ಕೌಟುಂಬಿಕ ಹಿಂಸೆಯಿಂದ […]

BSY Leadership: ಯಡಿಯೂರಪ್ಪ ಪ್ರಶ್ನಾತೀತ ನಾಯಕ- ಅವರ ನೇತೃತ್ವದಲ್ಲಿಯೇ ಚುನಾವಣೆ- 17 ಜನ ಶಾಸಕರು ಬಿಜೆಪಿಯಲ್ಲಿಯೇ ಇರುತ್ತೇವೆ- ಭೈರತಿ ಬಸವರಾಜ

ವಿಜಯಪುರ: ಮಾಜಿ ಸಿಎಂ ಬಿ.‌ ಎಸ್. ಯಡಿಯೂರಪ್ಪ ಬಿಜೆಪಿಯ ಹಿರಿಯ ಪ್ರಶ್ನಾತೀತ ನಾಯಕರಾಗಿದ್ದಾರೆ. ಅವರ ಹಾಗೂ ಹಿರಿಯರ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು. ಬಿ. ಎಸ್. ಯಡಿಯೂರಪ್ಪ ಅವರನ್ನು ಪಕ್ಷ ಕಡೆಗಣಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ನಾವೆಲ್ಲ ಒಗ್ಗಟ್ಟಾಗಿದ್ದೇವೆ. ಯಡಿಯೂರಪ್ಪ ಹಾಗೂ ಹಿರಿಯರ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ. ಮತ್ತೆ ಬಿಜೆಪಿಯನ್ನು ರಾಜ್ಯದಲ್ಲಿ ಮರುಸ್ಥಾಪಿಸುವ ಕೆಲಸವನ್ನು […]