Domestic Violence Workshop: ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ ಕುರಿತು ಕಾರ್ಯಾಗಾರ

ವಿಜಯಪುರ:  ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005ರ ಕುರಿತು ಆಯೋಜಿಸಲಾದ  ತರಬೇತಿಗಳು ಅತೀ ಮುಖ್ಯವಾಗಿದ್ದು, ಎಲ್ಲ ಅಧಿಕಾರಿ-ಸಿಬ್ಬಂದಿಗಳು ಕಾಯಿದೆಯಡಿ ಬರುವ ಕಾನೂನು ಮತ್ತು ನಿಯಮಗಳ ಕುರಿತು ಅರಿವು ಹೊಂದಬೇಕು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ(ಪ್ರಭಾರ) ನ್ಯಾಯಾಧೀಶ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸತೀಶ ಎಲ್. ಪಿ. ಹೇಳಿದರು.

ವಿಜಯಪುರ ಜಿಲ್ಲಾಢಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಜಯಪುರ ರವರ ಸಂಯುಕ್ತಾಶ್ರಯದಲ್ಲಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ-2005 ಅನುಷ್ಠಾನದಲ್ಲಿ ಭಾಗಿದಾರ ಇಲಾಖೆಗಳ ಪಾತ್ರ ಕುರಿತಂತೆ ಆಯೋಜಿಸಲಾಗಿದ್ದ ಎರಡು ದಿನಗಳ ಓರಿಯಂಟೇಶನ್ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಿರಿಯ ಸಿವ್ಹಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವೆಂಕಣ್ಣ ಬಿ ಹೊಸಮನಿ ಮಾತನಾಡಿ, ಕ್ಷೇತ್ರ ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಅಧಿಕಾರಿ ವೃಂದದವರು ಮಾನವೀಯ ಮೌಲ್ಯಗಳನ್ನು ಕಾರ್ಯಕ್ಷೇತ್ರದಲ್ಲಿ ಅಳವಡಿಸಿಕೊಂಡು ದೌರ್ಜನ್ಯ, ಶೋಷಣೆಗೆ ಒಳಗಾದ ಮಹಿಳೆಯರಿಗೆ ಪಾರದರ್ಶಕತೆಯಿಂದ ನ್ಯಾಯ ದೊರಕಿಸಿ ಕೊಡುವಲ್ಲಿ ನಿಷ್ಠೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಎಎಸ್ಪಿ ಶಂಕರ ಮಾರಿಹಾಳ  ಮಾತನಾಡಿ, ಪೊಲೀಸ್ ಇಲಾಖೆಯ ಕುರಿತು ಸಾರ್ವಜನಿಕರಲ್ಲಿರುವ ಭಯದ ವಾತಾವರಣದಿಂದ ಹೊರಬರಬೇಕು.  ಯಾವುದೇ ತೊಂದರೆಯಾದಲ್ಲಿ ಪೊಲೀಸ್ ಇಲಾಖೆಯ ಸದಾ ತಮ್ಮ ಜೊತೆಗಿದ್ದು, ತಮಗೆ ನ್ಯಾಯ ಒದಗಿಸಿಕೊಡುವಲ್ಲಿ ಸನ್ನದ್ದರಾಗಿರುತ್ತದೆ. ನೊಂದ ಮಹಿಳೆಯರಿಗಾಗಿ ವುಮೆನ್ ಡೆಸ್ಕ್ ಹಾಗೂ ಶಾಲಾ ಮಕ್ಕಳಿಗೆ ಪೆÇೀಲಿಸ ಇಲಾಖೆಯ ಬಗ್ಗೆ ಓಪನ್ ಹೌಸ್  (ತೆರೆದ ಮನೆ) ಸೌಲಭ್ಯವನ್ನು ಒದಗಿಸಲಾಗುತ್ತಿದೆ. ಯಾವುದೇ ತೊಂದರೆಗಳಾದಲ್ಲಿ ಜನ ಸಾಮಾನ್ಯರು 112 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.                 ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶ್ರೀಮತಿ ರಾಜೇಶ್ವರಿ ಗೊಲಗೇರಿ ತರಬೇತಿ ಉದ್ದೇಶಿಸಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಹಿರಿಯ ನ್ಯಾಯವಾದಿಗಳಾದ ಜೆ. ಎಂ. ಭೂಸಗೊಂಡ, ರಾಹುಲ ನಾಯಕ, ಸಂದೀಪ್ ಎಸ್. ನಾಡಗೌಡ, ಎಂ. ಎಂ. ಭೃಂಗಿಮಠ, ಬಾಬು ಅವತಾಡೆ, ಶಿವಕುಮಾರ ಎಸ್. ಪೂಜಾರ, ಎಂ.  ಸಿ. ಲೋಗಾಂವಿ, ಆರ್. ಕೆ. ಪೂಜಾರ ಉಪಸ್ಥಿತರಿದ್ದರು.

ಭಾರತಿ ಪಿ. ಪಾಟೀಲ ನಿರೂಪಿಸಿ, ವಂದಿಸಿದರು.

Leave a Reply

ಹೊಸ ಪೋಸ್ಟ್‌