ವಿಜಯಪುರ: 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಲಿಂಗಾಯಿತ ಪಂಚಮಸಾಲಿ ಸಮುದಾಯ ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ನೇತತ್ವದಲ್ಲಿ ಹೋರಾಟ ನಡೆಸುತ್ತಿದೆ. ಇದರ ಮುಂದುವರೆದ ಭಾಗವಾಗಿ ಡಿ. 22 ರಂದು ನಿರ್ಣಾಯಕ ಹೋರಾಟ ನಡೆಯಲಿದೆ ಎಂದು ಪಂಚಮಸಾಲಿ ಸಮುದಾಯದ ನಾನಾ ಮುಖಂಡರು ತಿಳಿಸಿದ್ದಾರೆ.
ವಿಜಯಪುರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರ್ಪೋರೇಟರ್ ಪ್ರೇಮಾನಂದ ಬಿರಾದಾರ, ರಾಣಿ ಚೆನ್ನಮ್ಮ ಬಳಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ವಿದ್ಯಾರಾಣಿ ತುಂಗಳ, ಸಮಾಜದ ಜಿಲ್ಲಾಧ್ಯಕ್ಷ ಬಿ. ಎಂ. ಪಾಟೀಲ(ದೇವರ ಹಿಪ್ಪರಗಿ), ರಾಜ್ಯ ಸರಕಾರ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಈ ಹೋರಾಟದಲ್ಲಿ ಪಾಲ್ಗೋಳ್ಳಲು ವಿಜಯಪುರ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ. ಜಿಲ್ಲೆಯ ಪ್ರತಿ ತಾಲೂನಿಂದ 25 ಬಸ್ ಗಳ ಮೂಲಕ ಬೆಳಗಾವಿಗೆ ತೆರಳಲಿದ್ದು, ಮಹಿಳೆಯರಿಗಾಗಿ ಪ್ರತಿ ತಾಲೂಕಿಗೆ ಐದು ಬಸ್ ಮೀಸಲಿಡಲಾಗಿದೆ. ವಿಜಯಪುರ ಜಿಲ್ಲೆಯಿಂದ ಬುಧವಾರ ಮಧ್ಯರಾತ್ರಿ ಬೆಳಗಾವಿಗೆ ತೆರಳಲಾಗುವುದು ಎಂದು ಅವರು ತಿಳಿಸಿದರು.
ವಿಜಯಪುರ ಜಿಲ್ಲಾ ಪಂಚಮಸಾಲಿ ಸಮುದಾಯ ಹಾಗೂ ಚನ್ನಮ್ಮ ಬಳಗದಿಂದ ಹೋರಾಟ ಈ ಹೋರಾಟ ಆಯೋಜಿಸಲಾಗಿದೆ ಎಂದು ಪಂಚಮಸಾಲಿ ಸಮುದಾಗಯ ಮುಖಂಡರು ತಿಳಿಸಿದರು.