ವಿಜಯಪುರ: ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್) ವಿಜಯಪುರ ವತಿಯಿಂದ ಜಿ. ಪಂ. ಯ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ಸಂಜೀವಿನಿ -ಕೆಎಸ್‍ಆರ್‍ಎಲ್‍ಪಿಎಸ್ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರುಗಳಿಗೆ ಆರು ದಿನಗಳ ಉದ್ಯಮಶೀಲತಾಭಿವೃದ್ದಿ ತರಬೇತಿ ಕಾರ್ಯಕ್ರಮಕ್ಕೆ ಜಿ. ಪಂ. ಯೋಜನಾ ನಿರ್ದೇಶಕ ಸಿ. ಬಿ. ದೇವರಮನಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಿಡಾಕ್ ಸಂಸ್ಥೆಯಿಂದ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಉದ್ಯಮದ ಆಯ್ಕೆ ಪ್ರಾರಂಭಿಸುವ ವಿಧಾನ, ಮಾರುಕಟ್ಟೆ ಸಮೀಕ್ಷೆ ,ಬ್ರ್ಯಾಂಡಿಂಗ್ ,ಲೇಬಲಿಂಗ್‍ಗಳ ಕುರಿತು ತರಬೇತಿ ನೀಡಲಿದ್ದು, ತರಬೇತಿಯಲ್ಲಿ ಆಸಕ್ತಿಯಿಂದ ಭಾಗವಹಿಸಿ ಉತ್ತಮವಾಗಿ ತರಬೇತಿ ಪಡೆದು, ಅರಿತುಕೊಂಡು ಉದ್ಯಮಿದಾರರಾಗುವಂತೆ ಅವರು ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸಿ. ಬಿ. ಕುಂಬಾರ ಹಾಗೂ ಸಿಡಾಕ್ ಜಂಟಿ ನಿರ್ದೇಶಕಿ ಎಸ್. ಬಿ. ಬಳ್ಳಾರಿ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ರಫೀಕ ಬಿಜಾಪುರ ಉಪಸ್ಥಿತರಿದ್ದರು.
ಸರಸ್ವತಿ ಖ್ಯಾತಿ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಯಶಸ್ವಿ ಉದ್ದಿಮೆದಾರರಾದ ನಂದಾ ಕುಂಬಾರ ಅವರನ್ನು ಸನ್ಮಾನಿಸಲಾಯಿತು. 30 ಮಹಿಳಾ ಸ್ವ-ಸಹಾಯ ಸಂಘದ ಮಹಿಳೆಯರು ತರಬೇತಿಯಲ್ಲಿ ಪಾಲ್ಗೋಂಡಿದ್ದರು.