RoB Open: ಇಬ್ರಾಹಿಂಪೂರ ರೇಲ್ವೆ ಮೇಲ್ಸೇತುವೆ ಡಿ. 27ರಿಂದ ಕಾರ್ಯಾರಂಭ- ರಮೇಶ ಜಿಗಜಿಣಗಿ

ವಿಜಯಪುರ: ಬಹುದಿನಗಳಿಂದ ಆಮೇಗತಿಯಲ್ಲಿ ಸಾಗಿದ್ದ ವಿಜಯಪುರ ನಗರದ ಇಬ್ರಾಹಿಂಪೂರ ರೈಲ್ವೆ ಮೇಲ್ಸೆತುವೆ ಡಿ.27 ಮಂಗಳವಾರದಿಂದ ಸಂಚಾರಕ್ಕೆ ಮುಕ್ತವಾಗಲಿದೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬೆಳೆಯುತ್ತಿರುವ ವಿಜಯಪುರ ಮಹಾನಗರ ಸಂಚಾರ ದಟ್ಟಣೆ ತಪ್ಪಿಸುವ ದೃಷ್ಟಿಯಿಂದ ಈ ಮೇಲ್ಸೆತುವೆ ನಿರ್ಮಿಸಲಾಗಿದೆ. ರೇಲ್ವೆ ಕ್ರಾಸಿಂಗ್ ಸಮಯದಲ್ಲಿ ಇಲ್ಲಿರುವ ಗೇಟ್ ಬಂದ್ ಆಗಿ ನಾನಾ ವಾಹನಗಳು ಸುಮಾರು ಹೊತ್ತು ಕಾಯಬೇಕಿತ್ತು. ಈ ಮೇಲ್ಸೆತುವೆ ಸಂಚಾರಕ್ಕೆ ಮುಕ್ತವಾಗುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಈ ರೇಲ್ವೆ ಮೇಲ್ಸೆತುವೆ ನಿರ್ಮಾಣಕ್ಕೆ ರೂ. 23 ಕೋ. ವೆಚ್ಚ ಮಾಡಲಾಗಿದೆ. ಈ ಕಾಮಗಾರಿ ನಿಗದಿತ ಅವಧಿಯಲ್ಲಿ ಮುಗಿಯಬೇಕಿತ್ತು, ಆದರೆ ಕೊರೊನಾದಿಂದಾಗಿ ಹಾಗೂ ಅನೇಕ ತಾಂತ್ರಿಕ ಕಾರಣಗಳಿಂದಾಗಿ ಕಾಮಗಾರಿ ವಿಳಂಬವಾಗಿತ್ತು. ಈ ಹಿನ್ನೆಲೆಯಲ್ಲಿ ನಾನು ಸಮಸ್ತ ಪ್ರಜಾಪ್ರಭುಗಳ ಕ್ಷಮೆಯಾಚಿಸುತ್ತೇನೆ. ಈಗ ಕಾಮಗಾರಿ ಪೂರ್ಣವಾಗಿದ್ದು,
ಮಂಗಳವಾರ ಈ ರೈಲ್ವೆ ಮೇಲ್ಸೆತುವೆ ಸಂಚಾರಕ್ಕೆ ಮುಕ್ತವಾಗಲಿದೆ. ಜ‌ನತೆಯ ಆಶೀರ್ವಾದ ಬಲದಿಂದ ಆಯ್ಕೆಯಾಗಿರುವ ನಾನು ಸಂಸದರ ಅನುದಾನದ ಅಡಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದೇನೆ. ಅಷ್ಟೇ ಅಲ್ಲ, ಕೇಂದ್ರ ಸಚಿವರ ಮನವೊಲಿಸಿ ಸಾವಿರಾರು ಕೋಟಿ ರೂಪಾಯಿ ಅನುದಾನ ತಂದು ಅನೇಕ ಹೆದ್ದಾರಿಗಳ ಅಭಿವೃದ್ಧಿ ಸೇರಿದಂತೆ ‌ನಾನಾ ಕಾರ್ಯಗಳನ್ನು ಕೈಗೊಂಡಿದ್ದೇನೆ. ಈಗ ಇಬ್ರಾಹಿಂಪೂರ ರೇಲ್ವೆ ಮೇಲ್ಸೆತುವೆಯಿಂದ ಜನರಿಗೆ ಅತ್ಯಂತ ಅನುಕೂಲವಾಗಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌