ತಲೆಹಿಡುಕರು ಯಾರು ಎನ್ನುವುದು ಜನರಿಗೆ ಗೊತ್ತಿದೆ- ಸಚಿವ ನಿರಾಣಿ ವಿರುದ್ಧ ಯತ್ನಾಳ ವಾಗ್ದಾಳಿ

ವಿಜಯಪುರ: ತಲೆಹಿಡುಕರು ಯಾರು ಎಂಬುದು ಜಗತ್ತಿಗೆ ಗೊತ್ತಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿ ಕಾರಿದ್ದಾರೆ. ವಿಜಯಪುರ ನಗರದಲ್ಲಿ ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೋಂಡ ಬಳಿಕ ಮಾತನಾಡಿದ ಅವರು, ತಲೆಹಿಡುಕರು ಯಾರು ಅನ್ನೋದು ಜಗತ್ತಿಗೆ ಗೊತ್ತಿದೆ ಎಂದು ಸಚಿವ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದರು. ನಾನು ಯಾರ ಕಾಲು ಹಿಡಿಯಲು ಹೋಗಿಲ್ಲ ಯತ್ನಾಳ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಕಾಲು ಹಿಡಿಯಲು […]

ಡಿ. 30ಕ್ಕೆ ವಿಜಯಪುರದಲ್ಲಿ ರಾಜ್ಯ ಸರಕಾರ ಯುಕೆಪಿಗೆ ನೀಡಿರುವ ಕೊಡುಗೆಯನ್ನು ಬಿಚ್ಚಿಡುತ್ತೇವೆ- ಎಂ. ಬಿ. ಪಾಟೀಲ

ವಿಜಯಪುರ: ಡಿ. 30 ರಂದು ವಿಜಯಪುರದಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶದಲ್ಲಿ ಹಿಂದಿನ ಕಾಂಗ್ರೆಸ್ ಸರಕಾರ ಮತ್ತು ಈಗಿನ ರಾಜ್ಯ ಸರಕಾರ ಕೃಷ್ಣಾ ಕಣಿವೆಯ ನೀರಾವರಿ ಯೋಜನೆಗಳಿಗೆ ಏನು ಕೊಡುಗೆ ನೀಡಿದ್ದಾರೆ ಎಂಬುದನ್ನು ಬಿಚ್ಚಿಡುತ್ತೇವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಜಲಸಂಪನ್ಮೂಲ ಖಾತೆ ಮಾಜಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಲಮಟ್ಟಿ ಜಲಾಷಯದ ಎತ್ತರವನ್ನು 524.256 ಮೀ. ಗೆ ಹೆಚ್ಚಿಸುವ ಕುರಿತು ಮತ್ತು ನಮ್ಮ ಪಾಲಿನ 130 […]

ಶಿಸ್ತಿನ ಪಕ್ಷದಲ್ಲಿ ಸ್ವಾರ್ಥ ಹೆಚ್ಚಾದಾಗ ಆಂತರಿಕ ಕಚ್ಚಾಟ ಉಂಟಾಗುತ್ತದೆ- ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ

ವಿಜಯಪುರ: ಶಿಸ್ತಿನ ಪಕ್ಷದಲ್ಲಿ ಸ್ವಾರ್ಥ ಹೆಚ್ಚಾದಾಗ ಆಂತರಿಕ ಕಚ್ಚಾಟ ಹೆಚ್ಚಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಸಚಿವರು ಮತ್ತು ಶಾಸಕರ ಮಧ್ಯೆ ನಡೆಯುತ್ತಿರುವ ಕಿತ್ತಾಟದಿಂದ ಬಿಜೆಪಿ ಮೇಲೆ ಪರಿಣಾಮ ಬೀರುವುದಿಲ್ಲವೇ ಎಂಬ ಪ್ರಶ್ನೆಗೆ ಮಾರ್ಮಿಕವಾಗಿ ಪ್ರತಿಕ್ರಿಯೆ ನೀಡಿದರು. ಎಲ್ಲ ಕಾಲದಲ್ಲಿ ಎಲ್ಲ ಪಕ್ಷಗಳಲ್ಲಿಯೂ ಆಂತರಿಕ ಕಿತ್ತಾಟ ಇದ್ದೆ ಇದೆ.  ನಮ್ಮ ಪಕ್ಷದಲ್ಲಿ ಬೇರೆ ಪಕ್ಷಗಳಿಗಿಂತ ಕಡಿಮೆ ಕಿತ್ತಾಟವಿದೆ.  ಹಿಂದೆ ವೀರಪ್ಪ ಮೋಯ್ಲಿ ಸಿಎಂ ಆಗಿದ್ದಾಗ, ಸಚಿವ […]

Health Camp: ಜನತೆ ಉಚಿತ ಆರೋಗ್ಯ ತಪಾಸಣೆ ಶಿಬಿರಗಳ ಪ್ರಯೋಜ‌ ಪಡೆಯಬೇಕು- ಬಸನಗೌಡ ಪಾಟೀಲ

ವಿಜಯಪುರ: ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಮುಂಚೂಣಿಯಲ್ಲಿರುವ ಬಿ ಎಲ್ ಡಿ ಆಸ್ಪತ್ರೆ ಜಿಲ್ಲೆಯ ನಾನಾ ಕಡೆಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಬೃಹತ್ ಶಿಬಿರಗಳನ್ನು ಆಯೋಜಿಸುತ್ತಿದೆ. ಇದನ್ನು ಸದುಪಯೋಗ ಪಡಿಸಿಕೊಂಡು ಎಲ್ಲರೂ ಆರೋಗ್ಯವಂತರಾಗಬೇಕು ಎಂದು ಬಿ ಎಲ್ ಡಿ ಇ ಸಂಸ್ಥೆಯ ನಿರ್ದೇಶಕ ಬಸನಗೌಡ(ರಾಹುಲ) ಪಾಟೀಲ ಕರೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಬಿ. ಎಂ. ಪಾಟೀಲ […]