ಡಿ. 30ರಂದು ಗುಮ್ಮಟ ನಗರಿಯಲ್ಲಿ ಕೃಷ್ಣಾ ಜನಾಂದೋಲನ ಸಮಾವೇಶ- ಎಂ. ಬಿ. ಪಾಟೀಲ
ವಿಜಯಪುರ: ಕೃಷ್ಣಾ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ರಾಜ್ಯ ಬಿಜೆಪಿ ಸರಕಾರ ತೋರುತ್ತಿರುವ ವಿಳಂಬ ನೀತಿಯನ್ನು ಖಂಡಿಸಿ ಹಾಗೂ ಬಿಜೆಪಿ ಸರಕಾರದ ವೈಫಲ್ಯದ ಕುರಿತು ಕೃಷ್ಣಾ ಜಲಾಂದೋಲನ ಸಮಾವೇಶ ದಿ. 30 ರಂದು ಗುಮ್ಮಟ ನಗರಿ ವಿಜಯಪುರದಲ್ಲಿ ನಡೆಯಲಿದೆ. ಡಿ. 30ರಂದು ಶುಕ್ರವಾರ ಮ. 3ಕ್ಕೆ ವಿಜಯಪುರ ನಗರದ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ಈ ಸಮಾವೇಶ ನಡೆಯಲಿದೆ. ಇದರಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ, ಮಾಜಿ ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ, […]
ಎಂ. ಬಿ. ಪಾಟೀಲ ಕಾರ್ಯವೈಖರಿ ಮೆಚ್ಚಿ ಕಮಲ ತೊರೆದು ಕಾಂಗ್ರೆಸ್ ಸೇರಿದ ನೂರಾರು ಕಾರ್ಯಕರ್ತರು
ವಿಜಯಪುರ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರ ಕಾರ್ಯವೈಖರಿಯನ್ನು ಮೆಚ್ಚಿ ಬಿಜ್ಜರಗಿ, ಅಳಗಿನಾಳ, ಘೋಣಸಗಿ ಗ್ರಾಮಗಳ ನಾನಾ ಸಮಾಜದ ಸುಮಾರು 200 ಜನ ಮುಖಂಡರು ಬಿಜೆಪಿ ತೊರೆದೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಬಿಜ್ಜರಗಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂ. ಬಿ. ಪಾಟೀಲ ಅವರ ಸಮ್ಮುಖದಲ್ಲಿ ಗಾಣಿಗ ಸಮಾಜ, ಜಂಗಮ ಸಮಾಜ, ಮರಾಠ ಸಮಾಜ, ಭೋವಿ ಸಮಾಜ, ಪಂಚಮಸಾಲಿ ಸಮಾಜ ಹಾಗೂ ತಳವಾರ ಸಮಾಜದ ನೂರಾರು ಜನ ಹಿರಿಯ ಮುಖಂಡರು ಮತ್ತು ಯುವಕರು ಕಾಂಗ್ರೆಸ್ಸಿಗೆ […]
ನಾನಾ ಬೇಡಿಕೆ ಈಡೇರಿಸಲು ಆಗ್ರಹ- ಡಿ. 29ರಂದು ಗಾಣಿಗ ಸಮುದಾಯದಿಂದ ಸುವರ್ಣಸೌಧ ಎದುರು ಪ್ರತಿಭಟನೆ
ವಿಜಯಪುರ: ಗಾಣಿಗ ಸಮಾಜಕ್ಕೆ ಪ್ರತ್ಯೇಕ ನಿಗಮ ಮಂಡಳಿ ಸೇರಿದಂತೆ ನಾನಾ ಬೇಡಿಕೆಗಳನ್ನು ಇಡೇರಿಸುವಂತೆ ಒತ್ತಾಯಿಸಿ ಗಾಣಿಗ ಸಮಾಜದ ವನಶ್ರೀ ಸಂಸ್ಥಾನ ಮಠದ ಜಗದ್ಗುರು ಶ್ರೀ ಜಯಬಸವಕುಮಾರ ಸ್ವಾಮೀಜಿ ಹಾಗೂ ರಾಜ್ಯಾಧ್ಯಕ್ಷ ಗುರಣ್ಣ ಗೋಡಿ ನೇತೃತ್ವದಲ್ಲಿ ಡಿ. 29 ರಂದು ಬೆಳಗಾವಿ ಸುವರ್ಣಸೌಧದ ಎದುರು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಗಾಣಿಗ ಸಮಾಜ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದರು. ವಿಜಯಪುರ ನಗರದ ವನಶ್ರೀ ಸಂಸ್ಥಾನ ಮಠದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರದ ಸೌಲಭ್ಯಗಳನ್ನು […]
PhD Award: ಎಚ್. ಕೆ. ಯಡಹಳ್ಳಿ ಈಗ ಅವರಿಗೆ ಪಿ ಎಚ್ ಡಿ ಪದವಿ
ವಿಜಯಪುರ: ನಗರದ ಸಿಕ್ಯಾಬ್ ಸಂಸ್ಥೆಯ ಎ. ಆರ್. ಎಸ್. ಇನಾಮದಾರ ಮಹಿಳಾ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕೇಂದ್ರದ ಮನೋವಿಜ್ಞಾನ ವಿಭಾಗದ ಮುಖ್ಯಸ್ಥ ಎಚ್. ಕೆ. ಯಡಹಳ್ಳಿ ಅವರಿಗೆ ಕಲಬುರಗಿಯ ಗುಲ್ಬರ್ಗಾ ವಿಶ್ವವಿದ್ಯಾಲಯ ಮನೋವಿಜ್ಞಾನ ವಿಷಯದಲ್ಲಿ ಸಲ್ಲಿಸಿದ ಪ್ರೌಢಪ್ರಬಂಧವನ್ನು ಪರಿಗಣಿಸಿ ಪಿ ಎಚ್ ಡಿ ಪದವಿ ಪ್ರಧಾನ ಮಾಡಿದೆ. ವೃತ್ತಿಪರ ಹಾಗೂ ವೃತ್ತಿಪರ ರಹಿತ ಕಾಲೇಜು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಮೇಲೆ ಸ್ವಯಂ ಪರಿಕಲ್ಪನೆ, ವ್ಯಕ್ತಿತ್ವ ಪಕ್ವತೆ ಹಾಗೂ ಸಂವೇಗಾತ್ಮಕ ಬುದ್ಧಿಶಕ್ತಿಗಳ ಪ್ರಭಾವ ಎಂಬ ವಿಷಯ ಕುರಿತು ಸಲ್ಲಿಸಿದ […]
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ: ಚಡಚಣ ತಾಲೂಕಿನ ನಾನಾ ಕಚೇರಿಗಳಿಗೆ ಭೇಟಿ, ಪರಿಶೀಲನೆ ನಡೆಸಿದ ಡಾ. ದಾನಮ್ಮನವರ
ವಿಜಯಪುರ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಚಡಚಣ ತಾಲೂಕಿನ ನಾನಾ ಕಚೇರಿಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಚಡಚಣ ತಾಲೂಕು ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕೋವಿಡ್ ನಿಯಂತ್ರಣಕ್ಕಾಗಿ ಸ್ಥಾಪಿಸಲಾದ ಆಕ್ಸಿಜನ್ ಘಟಕವನ್ನು ಪರಿಶೀಲಿಸಿದ ಅವರು, ಮುನ್ನೆಚ್ಚರಿಕೆ ಕ್ರಮವಾಗಿ ಆಕ್ಸಿಜನ್ ಕೊರತೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು. ರೋಗಿಗಳಿಗೆ ಒದಗಿಸುವ ಬೆಡ್‍ಗಳನ್ನು ಶುಚಿತ್ವವಾಗಿಟ್ಟುಕೊಳ್ಳಬೇಕು. ಆಸ್ಪತ್ರೆಗೆ ಬಂದ ರೋಗಿಗಳಿಗೆ ಯಾವುದೇ […]