ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ: ಚಡಚಣ ತಾಲೂಕಿನ ನಾನಾ ಕಚೇರಿಗಳಿಗೆ ಭೇಟಿ, ಪರಿಶೀಲನೆ ನಡೆಸಿದ ಡಾ. ದಾನಮ್ಮನವರ

ವಿಜಯಪುರ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಚಡಚಣ ತಾಲೂಕಿನ ನಾನಾ ಕಚೇರಿಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. 

ಚಡಚಣ ತಾಲೂಕು ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕೋವಿಡ್ ನಿಯಂತ್ರಣಕ್ಕಾಗಿ ಸ್ಥಾಪಿಸಲಾದ ಆಕ್ಸಿಜನ್ ಘಟಕವನ್ನು ಪರಿಶೀಲಿಸಿದ ಅವರು, ಮುನ್ನೆಚ್ಚರಿಕೆ ಕ್ರಮವಾಗಿ ಆಕ್ಸಿಜನ್ ಕೊರತೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು. ರೋಗಿಗಳಿಗೆ ಒದಗಿಸುವ ಬೆಡ್‍ಗಳನ್ನು ಶುಚಿತ್ವವಾಗಿಟ್ಟುಕೊಳ್ಳಬೇಕು. ಆಸ್ಪತ್ರೆಗೆ ಬಂದ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಅವಶ್ಯಕ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಿಕೋಟಾದಲ್ಲಿ ನಾನಾ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಭೇಟಿ ನೀಡಿ ಪರಿಶೀಲನೆ ನಡೆಸಿದರು

ತಹಶೀಲ್ದಾರ ಕಚೇರಿಯಲ್ಲಿ ನಾನಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಾನಾ ಇಲಾಖೆಗಳ ಮಾಹಿತಿ ಪಡೆದುಕೊಂಡರು. ಕುಂದು-ಕೊರತೆ ಸಭೆಯಲ್ಲಿ ಜಾತಿ ಪ್ರಮಾಣ ಪತ್ರ ನೀಡಲು ವಂಶವೃಕ್ಷ-ಕೋರ್ಟ್ ಅಫೀಡವಿಟ್ ಕಡಿತಗೊಳಿಸಲು, ಕೆರೆ ಒತ್ತುವರಿ ತೆರವುಗೊಳಿಸುವುದು, ರೈತರ ಸಾಲ ಮನ್ನಾ, ಸರಕಾರಿ ನೌಕರರ ಸಂಘಕ್ಕೆ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ನಿವೇಶನ ಒದಗಿಸುವುದು ಸೇರಿದಂತೆ ಒಟ್ಟು 8 ಅರ್ಜಿಗಳು ಸ್ವೀಕೃತಗೊಂಡಿದ್ದು,  ಅರ್ಜಿಗಳ ವಿಲೇವಾರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ ಹಣಮಂತ ಶಿರಹಟ್ಟಿ,  ಚಡಚಣ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಂಜಯ ಕಡಗೇಕರ, ಡಾ.ಜಾನಕಟೋಟೆ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಮಾರಯ್ಯ, ಸಿಡಿಪಿಓ ಅನೀಲಕುಮಾರ ಹಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌