ಸಿಎಂ ಜೊತೆ ಕಿರಿಯ ಸ್ವಾಮೀಜಿ ಫೋನಿನಲ್ಲಿ ಮಾತುಕತೆ- ಸಿದ್ಧೇಶ್ವರ ಸ್ವಾಮೀಜಿ ಆರೋಗ್ಯ ವಿಚಾರಣೆ- ಆತಂಕ ಬೇಡ- ಸಚಿವ ಬಿ. ಶ್ರೀರಾಮುಲು

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಜಯಪುರ ಜ್ಞಾನಯೋಗಾಶ್ರಮದ ಕಿರಿಯ ಸ್ವಾಮೀಜಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರ ಆರೋಗ್ಯದ ಕುರಿತು ವಿಚಾರಿಸಿದ್ದಾರೆ ಎಂದು ಸಾರಿಗೆ ಸಚಿವ ಬಿ.‌ ಶ್ರೀರಾಮುಲು ತಿಳಿಸಿದ್ದಾರೆ. ವಿಜಯಪುರಕ್ಕೆ ಆಗಮಿಸಿದ ಸಚಿವ ಬಿ. ಶ್ರೀರಾಮುಲು, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಮತ್ತು ಇತರ ಮುಖಂಡರ ಜೊತೆಗೂಡಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ದರ್ಶನಕ್ಕೆ ತೆರಳಿದರು. ಶ್ರೀಗಳಿಗೆ ಅನಾರೋಗ್ಯ ವದಂತಿ ಹಿನ್ನೆಲೆಯಲ್ಲಿ ಭೇಟಿಗೆ ಆಗಮಿಸಿದ ಸಚಿವರು, ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಶ್ರೀಗಳ ಭೇಟಿಗಾಗಿ ಕೆಲಹೊತ್ತು […]

ನನ್ನ ಆದ್ಯತೆ ರೈತರಿಗೆ ಪರಿಹಾರ ನೀಡುವುದೇ ಹೊರತು ಗುತ್ತಿಗೆದಾರರಿಗೆ ಹಣ ಕೊಡುವುದು ಅಲ್ಲ: ಗೋವಿಂದ ಕಾರಜೋಳ

ಬೆಳಗಾವಿ: ರೈತರಿಗೆ ಪರಿಹಾರ ನೀಡುವುದೇ ನಮ್ಮ ಪ್ರಥಮ ಆದ್ಯತೆ ಹೊರತು ಗುತ್ತಿಗೆದಾರರಿಗೆ ಹಣ ಕೊಡುವುದು ಅಲ್ಲ. ನಾನು ನೀರಾವರಿ ಸಚಿವನಾದ ಮೇಲೆ ನಾಲ್ಕು ನಿಗಮದಲ್ಲಿ ರಿವಾಲ್ವಿಂಗ್‌ ಪದ್ಧತಿಯಲ್ಲಿ ಹಣ ಇಟ್ಟಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ನಡೆದ ಪ್ರಶ್ನೋತ್ತರ ವೇಳೆ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ ಅವರು ಹಾಸನ ಜಿಲ್ಲೆಯ ಹೇಮಾವತಿ ಯೋಜನೆಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ರೈತರಿಗೆ ಪರಿಹಾರ ನೀಡಲು ವಿಳಂಬವಾಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸೂರಜ […]

ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ- ಡಿಸಿ ಡಾ.ದಾನಮ್ಮನವರ

ವಿಜಯಪುರ: ವಿಜಯಪುರದಲ್ಲಿ ನಡೆಯುವ ಪತ್ರಕರ್ತರ 37ನೇ ರಾಜ್ಯ ಮಟ್ಟದ ಸಮ್ಮೇಳನ ಅತ್ಯಂತ ಅಚ್ಚುಕಟ್ಟಾಗಿ ನಡೆಸಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ನಾನಾ ಇಲಾಖೆಗಳ ಅಧಿಕಾರಿಗಳು ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ರಾಜ್ಯದ ನಾನಾ ಭಾಗಗಳಿಂದ ಆಗಮಿಸುವ ಪತ್ರಕರ್ತರಿಗೆ ಯಾವುದೇ ರೀತಿಯ ಅನಾನೂಕೂಲವಾಗದಂತೆ ಜಿಲ್ಲಾಡಳಿತ ಎಲ್ಲ ರೀತಿಯ ಸಹಕಾರ ಒದಗಿಸಲಿದೆ ಎಂದು ಹೇಳಿದರು. ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ವಸತಿ […]