ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯಗಳ ಬಳಕೆ ಸಹಕಾರಿ- ಜಿಲ್ಲಾಧಿಕಾರಿ ಡಾ. ದಾನಮ್ಮನವರ

ವಿಜಯಪುರ: ಇಂದಿನ ಒತ್ತಡದ ಬದುಕಿನಲ್ಲಿ ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಲು ಸಿರಿಧಾನ್ಯಗಳ ಬಳಕೆ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಹೇಳಿದರು.

ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಆಯೋಜಿಸಲಾದ ಜಿಲ್ಲಾ ಮಟ್ಟದ ಸಿರಿಧಾನ್ಯ ಜಾಗೃತಿ ನಡಿಗೆಗೆ ಬಲೂನ್‍ಗಳನ್ನು ಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಸಿರಿಧಾನ್ಯ ನಡಿಗೆ ಶ್ರೀ ಸಿದೇಶ್ವರ ದೇವಸ್ಥಾನದಿಂದ ಆರಂಭಗೊಂಡು ಗಾಂಧಿ ವೃತ್ತ, ಬಸವೇಶ್ವರ ವೃತ್ತ ಮಾರ್ಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಸಂಚರಿಸುವ ಮೂಲಕ ಸಿರಿಧಾನ್ಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಿತು. ನಂತರ ನಗರದ ಗಗನ ಮಹಲ್ ಆವರಣದಲ್ಲಿ ಸಿರಿಧಾನ್ಯಗಳ ಮಹತ್ವ, ಬಳಕೆ ಕುರಿತು ತಜ್ಞರಿಂದ ಹಾಗೂ ಪ್ರಗತಿಪರ ರೈತರಿಂದ ಅನಿಸಿಕೆ ಹಂಚಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಸರಿಯಾದ ಆಹಾರ ಕ್ರಮವಲ್ಲದೇ ಹೆಚ್ಚಾಗಿ ಝಂಕ್ ಫುಡ್‍ಗಳನ್ನು  ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಮೂಲಕ ಹೆಚ್ಚಿನ ರಕ್ತದೊತ್ತಡ, ಮಧುಮೇಹ ಸೇರಿದಂತೆ ವಿವಿಧ ರೋಗಗಳಿಗೆ ಆಹ್ವಾನ ನೀಡಿದಂತಾಗುತ್ತಿದೆ. ಸರಿಯಾದ ಆಹಾರ ಪದ್ಧತಿಯನ್ನು ಅಳವಡಿಸಿಕೊಂಡು, ಉತ್ತಮ ಪೌಷ್ಠಿಕಾಂಶವುಳ್ಳ ಆಹಾರ ಸೇವನೆ ರೂಢಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ಹೇಳಿದರು.

ಆಯುರ್ವೆದ ವೈದ್ಯ ಡಾ. ಸಂಜೀವ ಜೋಶಿ ಅವರು ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಜನರು ಊಟಕ್ಕಿಂತ ಹೆಚ್ಚಾಗಿ ಗುಳಿಗೆಗಳನ್ನು ಸೇವಿಸುವುದು ರೂಢಿಯಾಗಿಬಿಟ್ಟಿದೆ.  ಗ್ಲುಟಿನ್ ಕಡಿಮೆ ಇರುವಂಥ ಸಿರಿಧಾನ್ಯಗಳ ಬಳಕೆ ಮಾಡಬೇಕು.  ಸಿರಿಧಾನ್ಯಗಳಲ್ಲಿ ಔಷಧೀಯ ಗುಣ ಇರುವುದರಿಂದ ಪ್ರತಿನಿತ್ಯ ಸಿರಿಧಾನ್ಯಗಳ ಬಳಕೆ ಮಾಡಬೇಕು ಎಂದು ಹೇಳಿದರು.

ಇಂಡಿ ತಾಲೂಕಿನ ಪ್ರಗತಿಪರ ರೈತ ಮಹಿಳೆ ಭಾರತಿ ಮೆಡೆಗಾರ ಹಾಗೂ ತಿಕೋಟಾ ಗ್ರಾಮದ ಸಿದ್ದಪ್ಪ ಭೂಸಗೊಂಡ ಅವರು ಮಾತನಾಡಿ, ನಾವು ಸ್ವತ: ಸಿರಿಧಾನ್ಯ ಬೆಳೆಯುತ್ತಿದ್ದು, ಸಿರಿಧಾನ್ಯಗಳ ಬಳಕೆ ನಗರ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿದೆ.  ಗ್ರಾಮಾಂತರ ಪ್ರದೇಶಗಳಲ್ಲಿ ಸಿರಿಧಾನ್ಯ ಬಳಕೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವಂತೆ ಸಲಹೆ ನೀಡಿದರು.

ಹೈದರಾಬಾದ್‍ನ ಸಿರಿಧಾನ್ಯಗಳ ಸಂಶೋಧನೆ ಸಂಸ್ಥೆಯಿಂದ ಆಗಮಿಸಿದ್ದ ಡಾ. ಸಂಗಪ್ಪ ಮಾತನಾಡಿ, ಸಿರಿಧಾನ್ಯಗಳು ಮನುಷ್ಯನಿಗೆ ಬೇಕಾಗುವ ಹಲವು ಲಘು ಪೋಷಕಾಂಶಗಳನ್ನು ಒದಗಿಸಲಿದ್ದು, ಪ್ರತಿಯೊಬ್ಬರು ಸಿರಿಧಾನ್ಯಗಳ ಬಳಕೆ ತಮ್ಮ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಕ್ಯಾ. ಮಹೇಶ ಮಾಲಗಿತ್ತಿ, ಮಹಾನಗರ ಪಾಲಿಕೆ ಉಪಾಯುಕ್ತ ಬೋರಣ್ಣವರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಬಿ ಎಸ್ ಎನ್ ಎಲ್ ಅಧಿಕಾರಿ ವಿವೇಕ ನಾಯಕ, ಸೇರಿದಂತೆ ನಾನಾ ಇಲಾಖೆ ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಜಿಲ್ಲೆಯ ಪರಿಕರ ಮಾರಾಟಗಾರರು, ಶಾಲಾ-ಕಾಲೇಜ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಪ್ರಕಾಶ ಚವ್ಹಾಣ ಸ್ವಾಗತಿಸಿದರು.  ಉಪ ಕೃಷಿ ನಿರ್ದೇಶಕ ಚಂದ್ರಕಾಂತ ಪವಾರ ವಂದಿಸಿದರು.

ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಜಿಲ್ಲೆಯ ಪರಿಕರ ಮಾರಾಟಗಾರರು, ಶಾಲಾ-ಕಾಲೇಜ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಪ್ರಕಾಶ ಚವ್ಹಾಣ ಸ್ವಾಗತಿಸಿದರು.  ಉಪ ಕೃಷಿ ನಿರ್ದೇಶಕ ಚಂದ್ರಕಾಂತ ಪವಾರ ವಂದಿಸಿದರು.

Leave a Reply

ಹೊಸ ಪೋಸ್ಟ್‌