ವಿಜಯಪುರ: ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಸಂತ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದ್ದಾರೆ.
ವಿಜಯಪುರ ನಗರದ ಜ್ಞಾನಯೋಗಾಶ್ರಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಜೆ 6 ಗಂಟೆಗೆ ಶ್ರೀಗಳು ಲಿಂಗೈಕ್ಯರಾಗಿದ್ದಾರೆ. ನಸುಕಿನ ಜಾವ 4 ಗಂಟೆಯವರೆಗೆ ಜ್ಞಾನಯೋಗಾಶ್ರಮದ ಆವರಣದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ನಾಳೆ ಬೆಳಿಗ್ಗೆಯಿಂದ ಮ.3ರ ವರೆಗೆ ವಿಜಯಪುರ ನಗರದ ಸೈನಿಕ ಶಾಲೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು. ಸಂ. 5ಕ್ಕೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿಸಿದ್ದಾರೆ
ಈ ಸಂದರ್ಭದಲ್ಲಿ ಸುತ್ತೂರು ಶ್ರೀ, ಕನೇರಿ ಮಠಾಧೀಶರು, ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಎಂ. ಬಿ. ಪಾಟೀಲ, ಬಸನಗೌಡ ಪಾಟೀಲ ಯತ್ನಾಳ, ಎಸ್ಪಿ ಎಚ್. ಡಿ. ಆನಂದಕುಮಾರ ಮುಂತಾದವರು ಉಪಸ್ಥಿತರಿದ್ದರು.