ತಮ್ಮಿಚ್ಛೆಯಂತೆ ನಿಸರ್ಗದಲ್ಲಿ ಲೀನರಾದ ಬಸವ ನಾಡಿನ ನಡೆದಾಡಿದ ದೇವರು- ಸಂಪೂರ್ಣ ಶಾಂತಿಯತವಾಗಿ ಎಲ್ಲ ವಿಧಿವಿಧಾನ ನೆರವೇರಿಸಿದ ಜಿಲ್ಲಾಡಳಿತ

ವಿಜಯಪುರ: ಬಸವ ನಾಡಿನ ನಡೆದಾಡಿದ ದೇವರು ನಿಸರ್ಗದಲ್ಲಿ ಲೀನರಾಗಿದ್ದಾರೆ.  ಅವರ ಇಚ್ಛೆಯಂತೆಯೇ ಅಂತ್ಯಕ್ರಿಯೆ ನಡೆದಿದ್ದು, ಮಂಗಳವಾರ ಇಡೀ ದಿನ ಸುಮಾರು 20 ಲಕ್ಷಕ್ಕೂ ಹೆಚ್ಚು ಜನ ಲಿಂ. ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಅಂತಿಮ ದರ್ಶನ ಪಡೆದಿದ್ದಾರೆ.

ನಾಡು ಕಂಡ ಅಪರೂಪದ ಸಂತ, ನಡೆದಾಡುವ ದೇವರೆಂದು ಕರೆಯಲಾಗುವ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿಗಳ ಅಂತಿಮ ಸಂಸ್ಕಾರವನ್ನು ರಾತ್ರಿ 8.50ರ ಸುಮಾರಿಗೆ ವಿಜಯಪುರ ನಗರದ ಜ್ಞಾನಯೋಗಾಶ್ರಮದ ಆವರಣದಲ್ಲಿ ನೆರವೇರಿಸಲಾಯಿತು.  ಸಂಜೆ 5 ಗಂಟೆಗೆ ನಗರದ ಸೈನಿಕ ಶಾಲೆಯ ಆವರಣದಲ್ಲಿ ಸಿದ್ದೇಶ್ವರ ಶ್ರೀಗಳ ಪಾರ್ಥಿವ ಶರೀರವನ್ನು ತೆರೆದ ವಾಹನದಲ್ಲಿ ಗೋದಾವರಿ ಹೋಟೆಲ್, ಶಿವಾಜಿ ವೃತ್ತ, ಲಕ್ಷ್ಮೀಗುಡಿ, ಗಾಂಧಿವೃತ್ತ, ಶ್ರೀ ಸಿದ್ದೇಶ್ವರ ದೇವಸ್ಥಾನ ಹಾಗೂ ಬಿಎಲ್‍ಡಿಇ ರಸ್ತೆ ಮಾರ್ಗವಾಗಿ ಸಂ. 7 ಗಂಟೆಗೆ ಜ್ಞಾನಯೋಗಾಶ್ರಮದ ಆವರಣಕ್ಕೆ ಕರೆ ತಂದು, ಶ್ರೀಗಳ ಇಚ್ಛೆಯಂತೆ ಅಗ್ನಿಸ್ಪರ್ಷ ಮಾಡಲಾಯಿತು.  ಈ ಸಂದರ್ಭದಲ್ಲಿ ಗಂಧದ ಕಟ್ಟಿಗೆಗಳನ್ನು ಇಟ್ಟು,ಕರ್ಪೂರ, ತುಪ್ಪದೊಂದಿಗೆ ಸರಳವಾಗಿ ವಿಧಿ ವಿಧಾನಗಳೊಂದಿಗೆ ಜ್ಞಾನಯೋಗಾಶ್ರಮದ ಶ್ರೀ ಬಸವಾನಂದ ಶ್ರೀಗಳು ಅಗ್ನಿಸ್ಪರ್ಶ ಮಾಡಿದರು.

ಸೈನಿಕ ಶಾಲೆಯಲ್ಲಿ ಸಿಎಂ, ಮಾಜಿ ಸಿಎಂ ಸೇರಿದಂತೆ ನಾನಾ ಗಣ್ಯರು ಸ್ವಾಮೀಜಿಯ ಅಂತಿಮ ದರ್ಶನ ಪಡೆದರು

ಇದಕ್ಕೂ ಮುಂಚೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ, ಮಾಜಿ ಮುಖ್ಯಮಂತ್ರಿ  ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ಗೋವಿಂದ ಎಂ. ಕಾರಜೋಳ, ಮುರುಗೇಶ ನಿರಾಣಿ, ಸಿ. ಸಿ. ಪಾಟೀಲ, ಶಶಿಕಲಾ ಜೊಲ್ಲೆ, ಬಸವರಾಜ ಹೊರಟ್ಟಿ, ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ, ಲಕ್ಷ್ಮಣ ಸವದಿ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ, ಶಾಸಕರಾದ ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ, ಸೋಮನಗೌಡ ಪಾಟೀಲ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ, ಎಸ್ಪಿ ಎಚ್. ಡಿ. ಆನಂದಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ,  ಸೇರಿದಂತೆ ನಾಡಿನ ಹಾಗೂ ಜಿಲ್ಲೆಯ ನಾನಾ ಶಾಸಕರು ಸಂಸದರು, ಜನಪ್ರತಿನಿಧಿಗಳು, ಮಠಾಧೀಶರು ಪೂಜ್ಯರ ಅಂತಿಮ ನಮನ ಸಲ್ಲಿಸಿದರು.

ಶ್ರೀ ಸಿದ್ದೇಶ್ವರ ಶ್ರೀಗಳ ಅಂತ್ಯ ಸಂಸ್ಕಾರಕ್ಕೆ ಜಿಲ್ಲಾಡಳಿತದ ವತಿಯಿಂದ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು. ಶ್ರೀಗಳ ಅಂತ್ಯ ಸಂಸ್ಕಾರ ಹಾಗೂ ಅಂತಿಮ ದರ್ಶನಕ್ಕೆ ಆಗಮಿಸಿದ್ದ ಸೋಲಾಪುರ, ಕಲಬುರಗಿ, ಸಿಂದಗಿ, ಬಾಗಲಕೋಟೆ, ಜಮಖಂಡಿ, ಅಥಣಿ ಸೇರಿದಂತೆ ನಾನಾ ಜಿಲ್ಲೆ ಹಾಗೂ ನೆರೆ ರಾಜ್ಯಗಳಿಂದ ಆಗಮಿಸುವ ಸಹಸ್ರಾರು ಭಕ್ತಾದಿಗಳಿಗೆ ಶ್ರೀಗಳ ದರ್ಶನಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಸರಕಾರಿ ಕಚೇರಿ ಹಾಗೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ, ಜಿಲ್ಲೆಯ ನಾನಾ ಕಡೆಗಳಿಂದ ಆಗಮಿಸುವರಿಗೆ ವಿಜಯಪುರ ನಗರದ ರಿಂಗ್ ರೋಡ ಮೂಲಕ ನಗರ ಪ್ರವೇಶ ಮಾಡಿ, ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ವಾಹನಗಳ ಪಾಕಿರ್ಂಗ್‍ಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಸೈನಿಕ ಶಾಲೆಯ ಎದುರುಗಡೆ ಇರುವ ನೇತಾಜಿ ಸುಭಾಷ ಚಂದ್ರ ಭೋಸ್ ರಸ್ತೆ ಮೂಲಕ ನಡೆದುಕೊಂಡು ಸೈನಿಕ ಶಾಲೆಯಲ್ಲಿ ಪಾರ್ಥಿವ ಶರೀರದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರಿಂದ ನಗರದ ಎಲ್ಲ ಕಡೆಗಳಲ್ಲಿ ಸೂಕ್ತ ಪೆÇಲೀಸ್ ಭದ್ರತೆ ಕಲ್ಪಿಸುವುದರ ಮೂಲಕ ಅಂತಿಮ ಸಂಸ್ಕಾರದಲ್ಲಿ ಯಾವುದೇ ಗೊಂದಲವಾಗದಂತೆ ಜಿಲ್ಲಾಡಳಿತದಿಂದ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿತ್ತು.

ಅಂತಿಮ ದರ್ಶನ ಪಡೆದ ಗಣ್ಯರು

ಇದಕ್ಕೂ ಮುಂಚೆ ಸೈನಿಕ ಶಾಲೆಯ ಆವರಣದಲ್ಲಿ ಶ್ರೀಗಳ ಅಂತಿಮ ಸಂಸ್ಕಾರದಲ್ಲಿ ರಾಜ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಗದೀಶ ಶೆಟ್ಟರ, ಸಚಿವರಾದ ಗೋವಿಂದ ಎಂ.ಕಾರಜೋಳ, ಮುರುಗೇಶ ನಿರಾಣಿ, ಸಿ.ಸಿ.ಪಾಟೀಲ, ಶಶಿಕಲಾ ಜೊಲ್ಲೆ, ಬಿ.ಶ್ರೀರಾಮಲು, ವಿ.ಸೋಮಣ್ಣ, ಶಂಕರ ಪಾಟೀಲ ಮುನೇನಕೊಪ್ಪ, ಬಸವರಾಜ ಹೊರಟ್ಟಿ,ಎ.ಎಸ್.ಪಾಟೀಲ ನಡಹಳ್ಳಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ಸಂಸದ ರಮೇಶ ಜಿಗಜಿಣಗಿ, ನಗರ ಶಾಸಕ ಬಸನಗೌಡ ಪಾಟೀಲ,ಎಂ.ಬಿ.ಪಾಟೀಲ, ಪ್ರಕಾಶ ರಾಠೋಡ, ಯಶವಂತರಾಯಗೌಡ ಪಾಟೀಲ,ಸೋಮನಗೌಡ ಪಾಟೀಲ ಸೇರಿದಂತೆ ನಾಡಿನ ಹಾಗೂ ಜಿಲ್ಲೆಯ ನಾನಾ ಶಾಸಕರು ಸಂಸದರು, ಜನಪ್ರತಿನಿಧಿಗಳು, ಮಠಾಧೀಶರು ಪೂಜ್ಯರ ಅಂತಿಮ ದರ್ಶನ ಪಡೆದು, ಹೂಗುಚ್ಚ ಅರ್ಪಿಸಿ ಗೌರವ ಸಲ್ಲಿಸಿದರು.  ಸೈನಿಕ ಶಾಲೆಯಲ್ಲಿ ಸಕಲ ಸರಕಾರಿ ಗೌರವಗಳನ್ನು ನೀಡಲಾಯಿತು.

Leave a Reply

ಹೊಸ ಪೋಸ್ಟ್‌