ಅಂತಿಮ ಮತದಾರರ ಪಟ್ಟಿ ಪ್ರಕಟ: ಮತದಾರರು ಒಂದು ಸಲ ಪಟ್ಟಿ ಚೆಕ್ ಮಾಡಿಕೊಳ್ಳಿ- ಡಿಸಿ ಡಾ. ದಾನಮ್ಮನವರ

ವಿಜಯಪುರ: ಜಿಲ್ಲೆಯ ಎಲ್ಲ ಎಂಟು ವಿಧಾನ ಸಭೆ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿಯನ್ನು ಜನೇವರಿ 5 ರಂದು ಗುರುವಾರ ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ 939813 ಪುರುಷ, 898405 ಮಹಿಳಾ ಮತ್ತು 234 ಇತರೆ ಮತದಾರರು ಸೇರಿದಂತೆ ಒಟ್ಟು 1838452 ಮತದಾರರಿದ್ದಾರೆ.  ಅಂತಿಮ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಮತದಾರರು ಪರಿಶೀಲಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದ್ದಾರೆ. 

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲೆಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲೆಯ ವಿಧಾನಸಭೆ ಮತಕ್ಷೇತ್ರವಾರು ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ ತಹಶೀಲ್ದಾರ ಕಚೇರಿಗಳಲ್ಲಿ ಪ್ರಕಟಿಸಲಾಗಿದ್ದು, ಮತದಾರರ ಪಟ್ಟಿಯಲ್ಲಿ ಹೆಸರಿರುವುದನ್ನು ಪರಿಶೀಲಿಸಿಕೊಳ್ಳುವಂತೆ ತಿಳಿಸಿದರು.

ಅಂತಿಮ ಮತದಾರರ ಪಟ್ಟಿ ಕುರಿತು ಮಾಹಿತಿ ನೀಡಿದ ಅವರು, ಕರಡು ಮತದಾರರ ಪಟ್ಟಿಯನ್ನು 09, 11, 2022 ರಂದು ಪ್ರಕಟಿಸಿ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು 08. 12. 2022ರ ವರೆಗೆ ಅವಕಾಶ ಕಲ್ಪಿಸಲಾಗಿತ್ತು.  ಈ ಅವಧಿಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಮತದಾರ ಪಟ್ಟಿಯಿಂದ ಹೆಸರು ತೆಗೆದು ಹಾಕುವುದು, ತಿದ್ದುಪಡಿ, ವರ್ಗಾವಣೆಗೆ ಸಂಬಂಧಿಸಿದ ಅರ್ಜಿ ನಮೂನೆ ಸಂಖ್ಯೆ 6 ಮತ್ತು 7 ಹಾಗೂ 8 ಅರ್ಜಿಗಳನ್ನು ಸ್ವೀಕರಿಸಿ 26.12.2022ರ ವರೆಗೆ ಕಾಲಾವಕಾಶ ನೀಡಲಾಗಿತ್ತು.  ಎಲ್ಲ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಇತ್ಯರ್ಥಗೊಳಿಸಿ ಅಂತಿಮ ಮತದಾರರ ಪಟ್ಟಿಯಯನ್ನು ಪ್ರಕಟಿಸಲಾಗಿದ್ದು, ಈ ಅವಧಿಯಲ್ಲಿ ಹೆಚ್ಚುವರಿಯಾಗಿ 40058 ಮತದಾರರು ಸೇರ್ಪಡೆಯಾಗಿದ್ದಾರೆ ಎಂದು ಅವರು ತಿಳಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ವಿಜಯಪುರ ಡಿಸಿ ಡಾ. ದಾನಮ್ಮನವರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು

 

ವಿಧಾನ ಸಭಾ ಕ್ಷೇತ್ರಗಳ ಮತದಾರರ ಪಟ್ಟಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿಯೂ ಲಭ್ಯವಿದ್ದು, ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಕುರಿತು ಪರಿಶೀಲನೆ ನಡೆಸಬಹುದಾಗಿದೆ.  ಹಕ್ಕು ಮತ್ತು ಆಕ್ಷೇಪಣೆ ಅವಧಿಯಲ್ಲಿ ಸೇರ್ಪಡೆ ಹಾಗೂ ತೆಗೆದು ಹಾಕಲಾದ ವಿವರವನ್ನು ಮುಖ್ಯ ಚುನಾವಣಾಧಿಕಾರಿಗಳ ವೆಬ್‍ಸೈಟ್‍ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 1838452 ಮತದಾರರು

ಜಿಲ್ಲೆಯ ವಿಧಾನಸಭೆ ಮತಕ್ಷೇತ್ರವಾರು ಮತದಾರರ ಅಂತಿಮ ಪಟ್ಟಿ ಇಲ್ಲಿದೆ

 

26-ಮುದ್ದೇಬಿಹಾಳ ವಿಧಾನಸಭೆ ಮತಕ್ಷೇತ್ರದ ಮತದಾರರ ಮಾಹಿತಿ

ಪುರುಷ: 106875, ಮಹಿಳೆ: 103451 ಹಾಗೂ ಇತರೆ- 22 ಇತರೆ

ಒಟ್ಟು- 210348

 

27-ದೇವರ ಹಿಪ್ಪರಗಿ ವಿಧಾನಸಭೆ ಮತಕ್ಷೇತ್ರದ ಮತದಾರರ ಮಾಹಿತಿ

ಪುರುಷ: 109749, ಮಹಿಳೆ- 103393 ಹಾಗೂ ಇತರೆ- 31

ಒಟ್ಟು- 213173

 

28-ಬಸವನ ಬಾಗೇವಾಡಿ ವಿಧಾನಸಭೆ ಮತಕ್ಷೇತ್ರದ ಮತದಾರರ ಮಾಹಿತಿ

ಪುರುಷ- 104484 ಮಹಿಳೆ- 100186 ಹಾಗೂ ಇತರೆ- 11

ಒಟ್ಟು- 204681

 

29-ಬಬಲೇಶ್ವರ ವಿಧಾನಸಭೆ ಮತಕ್ಷೇತ್ರದ ಮತದಾರರ ಮಾಹಿತಿ

ಪುರುಷ- 108463, ಮಹಿಳೆ- 103961 ಹಾಗೂ ಇರೆ 4

ಒಟ್ಟು- 212428

 

30-ವಿಜಯಪುರ ವಿಧಾನಸಭೆ ಮತಕ್ಷೇತ್ರದ ಮತದಾರರ ಮಾಹಿತಿ

ಪುರುಷ- 131459, ಮಹಿಳೆ- 133161 ಹಾಗೂ ಇತರೆ 94

ಒಟ್ಟು- 264714

 

31-ನಾಗಠಾಣ ವಿಧಾನಸಭೆ ಮತಕ್ಷೇತ್ರದ ಮತದಾರರ ಮಾಹಿತಿ

ಪುರುಷ- 135836, ಮಹಿಳೆ- 128082 ಹಾಗೂ ಇತರೆ- 27

ಒಟ್ಟು- 263945

 

32-ಇಂಡಿ ವಿಧಾನಸಭೆ ಮತಕ್ಷೇತ್ರದ ಮತದಾರರ ಮಾಹಿತಿ

ಪುರುಷ- 122997, ಮಹಿಳೆ- 114382 ಹಾಗೂ ಇತರೆ- 18

ಒಟ್ಟು- 237397 ಮತ್ತು

 

33-ಸಿಂದಗಿ ವಿಧಾನಸಭೆ ಮತಕ್ಷೇತ್ರದ ಮತದಾರರ ಮಾಹಿತಿ

ಪುರುಷ- 119950, ಮಹಿಳೆ- 111789 ಹಾಗೂ ಇತರೆ 27

ಒಟ್ಟು- 231766

ಜಿಲ್ಲೆಯ ಎಂಟು ವಿಧಾನಸಭೆ ಮತಕ್ಷೇತ್ರಗಳಲ್ಲಿ ಪುರುಷ- 939813 ಮಹಿಳೆ- 898405 ಹಾಗೂ ಇತರೆ- 234 ಮತದಾರರು ಸೇರಿದಂತೆ ಒಟ್ಟು- 1838452 ಮತದಾರರಿದ್ದಾರೆ.

ಜಿಲ್ಲೆಯ ಒಟ್ಟು ಮತಗಟ್ಟೆಗಳು- 2072

ವಿಜಯಪುರ ಜಿಲ್ಲೆಯಲ್ಲಿ ಒಟ್ಟು- 2072 ಮತಗಟ್ಟೆಗಳು ಅಸ್ತಿತ್ವದಲ್ಲಿದ್ದು, ಅದರಂತೆ  ಮುದ್ದೇಬಿಹಾಳ ಮತಕ್ಷೇತ್ರದಲ್ಲಿ- 241, ದೇವರ ಹಿಪ್ಪರಗಿ ಮತಕ್ಷೇತ್ರದಲ್ಲಿ- 252, ಬಸವನ ಬಾಗೇವಾಡಿ ಮತಕ್ಷೇತ್ರದಲ್ಲಿ ಈ ಮೊದಲು 233 ಮತಗಟ್ಟೆಗಳಿದ್ದು, ಈಗ ಅಂತಿಮವಾಗಿ 232 ಮತಗಟ್ಟೆಗಳು ಅಸ್ತಿತ್ವದಲ್ಲಿವೆ.

ಬಬಲೇಶ್ವರ ಮತಕ್ಷೇತ್ರದಲ್ಲಿ ಈ ಮೊದಲು 253 ಮತಗಟ್ಟೆಗಳಿದ್ದು, ಈಗ ಅಂತಿಮವಾಗಿ 243 ಮತಗಟ್ಟೆಗಳು ಅಸ್ವಿತ್ವದಲ್ಲಿವೆ.  ವಿಜಯಪುರ ನಗರ ಮತಕ್ಷೆತ್ರದಲ್ಲಿ ಈ ಮೊದಲು 279 ಮತಗಟ್ಟೆಗಳಿದ್ದು, ಈಗ 269 ಮತಗಟ್ಟೆಗಳು ಅಸ್ವಿತ್ವದಲ್ಲಿವೆ.  ನಾಗಠಾಣ ಮತಕ್ಷೇತ್ರದಲ್ಲಿ ಈ ಮೊದಲು 305 ಮತಗಟ್ಟೆಗಳಿದ್ದವು.  ಈಗ ಅಂತಿಮವಾಗಿ 296 ಮತಗಟ್ಟೆಗಳಿವೆ.  ಇಂಡಿ ಮತಕ್ಷೇತ್ರದಲ್ಲಿ ಈ ಮೊದಲು 274 ಮತಗಟ್ಟೆಗಳಿದ್ದವು.  ಈಗ ಅಂತಿಮವಾಗಿ 268 ಮತಗಟ್ಟೆಗಳು ಅಸ್ತಿತ್ವದಲ್ಲಿವೆ ಹಾಗೂ ಸಿಂದಗಿ ಮತಕ್ಷೇತ್ರದಲ್ಲಿ 271 ಮತಗಟ್ಟೆಗಳು ಸೇರಿದಂತೆ ಜಿಲ್ಲೆಯಲ್ಲಿ 2072 ಮತಗಟ್ಟೆಗಳು ಅಂತಿಮವಾಗಿ ಅಸ್ತಿತ್ವದಲ್ಲಿವೆ ಎಂದು ಡಾ. ದಾನಮ್ಮನವರ ತಿಳಿಸಿದರು.

ನಿರಂತರ ಮತದಾರರ ಪಟ್ಟಿ ಪರಿಷ್ಕರಣೆ

ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದ ನಂತರವೂ ಸಹ ಪರಿಷ್ಕರಣೆ ಕಾರ್ಯ ಮುಂದುವರೆಯಲಿದೆ.   ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ನಿರ್ದೇಶನ ಬಂದ ಕೂಡಲೇ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ, ಸ್ಥಳಾಂತರ, ಮತದಾರ ಪಟ್ಟಿಯಿಂದ ಹೆಸರು ಕೈಬಿಡುವುದು ಹಾಗೂ ಇತರೆ ಸೇವೆಗಳಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದರು.

ಮತದಾರರಾಗಿ ನೋಂದಣಿ ಅವಧಿ

ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆ ಮಾಡಲು ಈ ಮೊದಲು ವರ್ಷಕ್ಕೆ ಒಂದು ಬಾರಿ ಮಾತ್ರ ಅವಕಾಶವಿತ್ತು.  ಆದರೆ, ಈಗ ಚುನಾವಣೆ ಆಯೋಗ ಜನವರಿ 01, ಏಪ್ರಿಲ್ 01, ಜುಲೈ 01 ಹಾಗೂ ಅಕ್ಟೊಬರ್ 01 ಸೇರಿದಂತೆ ಒಟ್ಟು ನಾಲ್ಕು ಬಾರಿ 18 ವರ್ಷ ಪೂರೈಸಿದ ಅರ್ಹ ಮತದಾರರು ಮತದಾರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ ಮಾಡಲು ಅವಕಾಶ ನೀಡಿದೆ.  ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ಸ್ಥಳಾಂತರ ಇತ್ಯಾದಿಗಳಿಗಾಗಿ ಆನ್‍ಲೈನ್ ಪ್ಲಾಟ್‍ಫಾರ್ಮಗಳಾದ ವಿಎಚ್‍ಎ, ಎನ್ ವಿ ಎಸ್ ಪಿ ಹಾಗೂ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಸಂಪರ್ಕಿಸಿ ಗರುಡ ತಂತ್ರಾಂಶ ಮೂಲಕವೂ ಕೂಡ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದರು.

ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಚುನಾವಣೆ ತಹಶೀಲ್ದಾರ ಶಾಂತಲಾ ಚಂದನ, ನಾನಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಚನ್ನಬಸಪ್ಪ ನಂದರಗಿ, ಎಚ್. ಎಸ್. ದಳವಾಯಿ, ಎಂ. ಕೆ. ಬಾಗಾಯತ, ನಿತೇಶ ತೊರವಿ, ಅನಿರುದ್ದ ಕುಲಕರ್ಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌