ನಾ ನಾಯಕಿ ಸಮಿತಿ ರಚಿಸುವ ಮೂಲಕ ಮಹಿಳೆಯರನ್ನು ಮುಖ್ಯವಾಹಿನಿಗೆ ತರಲಾಗುತ್ತಿದೆ- ಕಾಂತಾ ನಾಯಕ
ವಿಜಯಪುರ: ನಾ ನಾಯಕಿ ಎಂಬ ಸಮಿತಿ ರಚಿಸುವ ಮೂಲಕ ಮಹಿಳೆಯರನ್ನು ಮುಖ್ಯ ವಾಹಿನಿಗೆ ತರಲಾಗುತ್ತಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂತಾ ನಾಯಕ ಹೇಳಿದರು. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಕಳೆದ ಒಂದೂವರೆ ವರ್ಷ ಹಿಂದೆ ನಾ ನಾಯಕಿ ಎಂಬ ಸಮಿತಿಗೆ ಚಾಲನೆ ನೀಡಿದ್ದಾರೆ. ಈ ಸಮಿತಿಯ ಮೂಲಕ ಗ್ರಾಮೀಣ ಮತ್ತು ತಾಲೂಕು ಮಟ್ಟದ ಪ್ರತಿ ಹಂತದಲ್ಲಿಯೂ ಮಹಿಳೆಯರು ತಮ್ಮ ನಾಯಕತ್ವದ ಗುಣಗಳ ಮೂಲಕ ರಾಜಕೀಯಕ್ಕೆ ತರಲು ಶ್ರಮಿಸಲಾಗುತ್ತಿದೆ ಎಂದು […]
ಶಿಕ್ಷಣದ ಜೊತೆಗೆ ಕ್ರೀಡೆಗೂ ಆದ್ಯತೆ ನೀಡಬೇಕು- ಹೆಸ್ಕಾಂ ವಿಜಿಲನ್ಸ್ ಎಸ್ಪಿ ಚೆನ್ನಬಸವಣ್ಣ ಎಸ್. ಎಲ್.
ವಿಜಯಪುರ: ಶಿಕ್ಷಣದ ಜೊತೆಗೆ ಕ್ರೀಡೆಗೆ ಮೊದಲ ಆದ್ಯತೆ ನೀಡುವಂತಾಗಬೇಕು ಎಂದು ಹೆಸ್ಕಾಂ ವಿಜಿಲನ್ಸ್ ಎಸ್ಪಿ ಚೆನ್ನಬಸವಣ್ಣ ಎಸ್. ಎಲ್. ಹೇಳಿದ್ದಾರೆ. ವಿಜಯಪುರದಲ್ಲಿ ಆಕ್ಸಫರ್ಡ್ ಐಐಟಿ ಒಲಂಪಿಯಾಡ್ ಶಾಲೆಯ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಓರ್ವ ವ್ಯಕ್ತಿಯ ಸರ್ವಾಂಗೀಣ ಮತ್ತು ಸಮರ್ಥ ವ್ಯಕ್ತಿತ್ವ ರೂಪಗೊಳ್ಳಬೇಕಾದರೆ ಕ್ರೀಡೆಯ ಪಾತ್ರ ಅನನ್ಯವಾಗಿದೆ. ಆಕ್ಸಫರ್ಡ್ ಶಾಲೆಯ ಮಕ್ಕಳು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಪ್ರತಿನಿಧಿಸುವಂತಾಗಲಿ. ಭಾರತ ಜಗತ್ತಿನ ಬಲಿಷ್ಟ ಕ್ರೀಡಾಪಟುಗಳನ್ನು […]
ಯುವಕರು ದೇಶದ ಅಭಿವೃದ್ದಿಗೆ ಕೈ ಜೋಡಿಸಲು ಸಂಸದ ರಮೇಶ ಜಿಗಜಿಣಗಿ ಕರೆ
ವಿಜಯಪುರ: ಇಂದಿನ ಯುವ ಪೀಳಿಗೆ ತಮ್ಮಲ್ಲಿರುವ ಕೌಶಲ್ಯವನ್ನು ಬಳಸಿಕೊಂಡು ಉತ್ತಮ ಶಿಕ್ಷಣ ಪಡೆಯುವುದರ ಮೂಲಕ ಉದ್ಯೋಗವಂತರಾಗಿ ದೇಶದ ಅಭಿವೃದ್ದಿ ಕೈ ಜೋಡಿಸಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಕರೆ ನೀಡಿದರು. ವಿಜಯಪುರ ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೇಂದ್ರ ಸಂವಹನ ಇಲಾಖೆ, ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲೆ, ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ […]
ಬಸವನಾಡಿನಲ್ಲಿ ಫೆ. 4, 5 ರಂದು ಪತ್ರಕರ್ತರ ರಾಜ್ಯಮಟ್ಟಡ ಸಮ್ಮೇಳನ- ಸಿಎಂ ಮೌಖಿಕವಾಗಿ ಒಪ್ಪಿಗೆ- ಶಿವಾನಂದ ತಗಡೂರು
ಬೆಂಗಳೂರು: ಜ. 9 ಮತ್ತು 10 ರಂದು ಬಸವನಾಡು ವಿಜಯಪುರದಲ್ಲಿ ನಡೆಯಬೇಕಿದ್ದ ಕಾರ್ಯನಿರತ ಪತ್ರಕರ್ತರ 37ನೇ ಸಮ್ಮೇಳನವನ್ನು ಸಿದ್ಧೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಈಗ ಈ ಸಮ್ಮೇಳನವನ್ನು ಫೆ. 4 ಮತ್ತು 5 ರಂದು ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೌಖಿಕವಾಗಿ ಒಪ್ಪಿಗೆ ನೀಡಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಸಮ್ಮೇಳನದ ಆತಿಥ್ಯ ವಹಿಸಿಕೊಂಡಿರುವ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಹಾಗೂ ಪದಾಧಿಕಾರಿಗಳು […]
ನಾಡಿನಲ್ಲಿ ಬಸವಣ್ಣ, ಕೆಂಪೇಗೌಡರ ಚಿಂತನೆ ಹರಿಯಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಚಿಂತನೆ ನಾಡಿನಲ್ಲಿ ಹರಿಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ವಿಧಾನಸಭಭೆಯ ಮುಂಭಾಗದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ಮತ್ತು ನಾಡಪ್ರಭು ಕೆಂಪೇಗೌಡರ ಪುತ್ಥಳಿ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಈ ಇಬ್ಬರೂ ಮಹಾನ್ ಪುರುಷರ ಆಡಳಿತ ಮತ್ತು ಆಧ್ಯಾತ್ಮಿಕ ಚಿಂತನೆ ನಮ್ಮ ನಾಡಿನಲ್ಲಿ ಬರಬೇಕು. ಈ ಶಕ್ತಿ ಸೌಧದಿಂದ ಅದು ಹರಿಯಬೇಕು. ಆ ವಿಚಾರಗಳು ಹರಿದು ಕರ್ನಾಟಕ ಸಮಗ್ರವಾಗಿ […]
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ದೇಶದ ಚಿತ್ರಣ ಬದಲಾಗಲಿದೆ- ಹಿರಿಯ ಐಎಎಸ್ ಅಧಿಕಾರಿ ಎಂ. ಮದನಗೋಪಾಲ
ವಿಜಯಪುರ: ಹೊಸ ಶಿಕ್ಷಣ ನೀತಿಯಿಂದ ದೇಶದ ಚಿತ್ರಣ ಬದಲಾಗಲಿದೆ ಎಂದು ಹಿರಿಯ ಐಎಎಸ್ ಅಧಿಕಾರಿ ಎಂ. ಮದನಗೋಪಾಲ ಹೇಳಿದ್ದಾರೆ. ವಿಜಯಪುರದಲ್ಲಿ ಜಿ. ಪಂ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ವಿಜಯಪುರ ಹಾಗೂ ಜಿಲ್ಲಾ ಗಣಿತ ಮತ್ತು ವಿಜ್ಞಾನ ಶಿಕ್ಷಕರ ಸಂಘ ಜಂಟಿಯಾಗಿ ಆಯೋಜಿಸಿದ್ದ 2022-23ನೇ ವರ್ಷದ ಎಸ್. ಎಸ್. ಎಲ್. ಸಿ ಗಣಿತ ಮತ್ತು ವಿಜ್ಞಾನ ಪರೀಕ್ಷಾ ಮಾರ್ಗದರ್ಶಿ ಸಾಹಿತ್ಯಗಳಾದ ಸಂಪ್ರತಿ ಹಾಗೂ ಸನ್ಮತಿ ಪುಸ್ತಕಗಳ ಬಿಡುಗಡೆ ಸಮಾರಂಭ, ಡಾ. ಶ್ರೀನಿವಾಸ ರಾಮಾನುಜನ್, ಸ್ವಾಮಿ ವಿವೇಕಾನಂದರ […]