ಸುನೀಲಗೌಡರು ಎಂ.ಎಲ್.ಸಿಯಾಗಲು ಹರಕೆ ಹೊತ್ತಿದ್ದ ಗ್ರಾ. ಪಂ. ಸದಸ್ಯ: 30 ಕಿ. ಮೀ. ಪಾದಯಾತ್ರೆ ನಡೆಸಿ ಹರಕೆ ಪೂರೈಸಿದ ಆದಿಲ್ ವಾಲಿಕಾರ
ವಿಜಯಪುರ: ಗ್ರಾಮ ಪಂಚಾಯಿತಿ ಸದಸ್ಯರಿಗೆ ಕೇರಳ ಮಾದರಿಯಲ್ಲಿ ಗೌರವ ಧನ ಹೆಚ್ಚಳ, ಬಸ್ ಪಾಸ್ ಸೌಲಭ್ಯ ಮತ್ತು ಇತರ ಸೌಕರ್ಯಗಳನ್ನು ಸರಕಾರ ಒದಗಿಸುವವರೆಗೂ ವಿರಮಿಸುವುದಿಲ್ಲ ಎಂದು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿ ಅಮೋಘಸಿದ್ಧ ದೇವಸ್ಥಾನಕ್ಕೆ ಗ್ರಾ. ಪಂ. ಸದಸ್ಯರೂ ಸೇರಿದಂತೆ ಆಗಮಿಸಿದ 150 ಜನ ಪಾದಯಾತ್ರಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. ಗ್ರಾ. ಪಂ. ಸದಸ್ಯರ ಗೌರವಧನ ಹೆಚ್ಚಳದ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಮೊದಲ ಬಾರಿಗೆ ನಾನು ಧ್ವನಿ […]
ಗಿನ್ನಿಸ್ ದಾಖಲೆಯ ಅಂಗವಾಗಿ ಸೈನಿಕ ಶಾಲೆಯ ಆವರಣದಲ್ಲಿ ಯೋಗಾಥಾನ- 25 ಸಾವಿರಕ್ಕೂ ಹೆಚ್ಚು ಜನ ಯೋಗಾಪಟುಗಳು ಭಾಗಿ
ವಿಜಯಪುರ: ದೇಹ ಮತ್ತು ಮನಸ್ಸನ್ನು ಸದೃಡಗೊಳಿಸಲು ಜೀವನದಲ್ಲಿ ಯೋಗಾಭ್ಯಾಸ ಅಳವಡಿಸಿಕೊಳ್ಳಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು. ನಗರದ ಸೈನಿಕ ಶಾಲೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ, ಆಯುಷ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ರವಿವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ಯೋಗಾಥಾನಗೆ ಚಾಲನೆ ನೀಡಿ ಮಾತನಾಡಿದ ಅವರು, ಯೋಗದಿಂದ ನಮ್ಮ ಆರೋಗ್ಯಕ್ಕೆ ಪ್ರಯೋಜನವಿದೆ. ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಅಷ್ಟೇ […]
ಮೀಸಲಾತಿ ಸಂಬಂಧ ವರಿಷ್ಠರು ಬೆಳಿಗ್ಗೆ ನನ್ನ ಜೊತೆ ಮಾತನಾಡಿದ್ದಾರೆ- ಈ ಹಿಂದೆ ಮಾಜಿ ಸಚಿವನ ಕೊಲೆಗೆ ಸುಪಾರಿ ಆರೋಪದಲ್ಲಿ ನನ್ನನ್ನು ಸಿಲುಕಿಸಲು ಪ್ರಯತ್ನಿಸಿದ್ದರು- ಯತ್ನಾಳ
ವಿಜಯಪುರ: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಹೈಕಮಾಂಡಿಗೆ ಪಂಚಮಸಾಲಿ ಸಮುದಾಯದ ಹೋರಾಟ ಮನವರಿಕೆಯಾಗಿದೆ. ಬೆಳಿಗ್ಗೆಯಷ್ಟೇ ಹೈಕಮಾಂಡ್ ನವರು ನನ್ನ ಜೊತೆ ಮಾತನಾಡಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟದ ವಿಚಾರವಾಗಿ ನಮ್ಮ ಕೇಂದ್ರ ನಾಯಕ ಮಂಡಳಿ, ಪಕ್ಷದ ಹೈಕಮಾಂಡ ಇಂದು ಬೆಳಿಗ್ಗೆ ಫೋನ್ ಮಾಡಿ ಮಾತನಾಡಿದೆ. ಕರ್ನಾಟಕದ ಮೀಸಲಾತಿ ವಿಚಾರ ಮತ್ತು ಈ ಬಗ್ಗೆ ಇರುವ ಗೊಂದಲ ನಿವಾರಣೆ ಮಾಡಲು ಸಭೆ […]
ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ಆಗ್ರಹಿಸಿ ಸಿಎಂ ಗೆ ಪತ್ರ ಬರೆದ ಯತ್ನಾಳ- ಯಾವ ಕೇಸ್ ಗೊತ್ತಾ?
ವಿಜಯಪುರ: ಕೊಲೆ ಆರೋಪ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ಬಸವನಾಡು ವೆಬ್ ಗೆ ಲಭ್ಯವಾಗಿದ್ದು, ಸಚಿವ ಮುರುಗೇಶ ನಿರಾಣಿ ಹೆಸರು ಹೇಳದೇ ಪತ್ರ ಬರೆದು ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಕಾರು ಚಾಲಕನೊಬ್ಬನ ಕೊಲೆಯಾಗಿದ್ದು, ಈ ಕುರಿತು ತನಿಖೆಯಾದರೆ ಸತ್ಯ ಹೊರಬರಲಿದೆ ಎಂದು ಶನಿವಾರ ಸಚಿವ ಮುರುಗೇಶ ನಿರಾಣಿ ಆರೋಪಿಸಿದ್ದರು. ಈ […]