ಶಾಸಕ ನಡಹಳ್ಳಿ ಅಧ್ಯಕ್ಷತೆಯಲ್ಲಿ ಬಿಜೆಪಿ ಬೂತ್ ಮಟ್ಟದ ಪ್ರಮುಖರ ಸಭೆ- ಜ.19ರ ಮೋದಿ ಕೊಡೆಕಲ್ ಗೆ ಭೇಟಿ- ಮತದಾರರು ಭಾಗವಹಿಸಲು ಶಾಸಕರ ಕರೆ

ವಿಜಯಪುರ: ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರವನ್ನು ಪೂರ್ಣ ಬಹುಮತದೊಂದಿಗೆ ಅಧಿಕಾರಿಕ್ಕೆ ತರಲು ಮತ್ತು ಮುದ್ದೇಬಿಹಾಳ ವಿಧಾನಸಭೆ ಕ್ಷೇತ್ರದಲ್ಲಿ ಎರಡನೇ ಬಾರಿ ಬಿಜೆಪಿ ಗೆಲ್ಲಿಸಲು ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಶ್ರಮಿಸಬೇಕು ಎಂದು ಶಾಸಕ ಮತ್ತು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ. ಎಸ್. ಪಾಟೀಲ ನಡಹಳ್ಳಿ ಕರೆ ನೀಡಿದ್ದಾರೆ.  ಮುದ್ದೇಬಿಹಾಳ ಪಟ್ಟಣದ ಮಾರುತಿನಗರ ಬಡಾವಣೆಯ ಹೊರವಲಯದಲ್ಲಿರುವ ಫಾರ್ಮಹೌಸ್‍ನಲ್ಲಿ ಸೋಮವಾರ ಏರ್ಪಡಿಸಿದ್ದ ಮುದ್ದೇಬಿಹಾಳ ಮಂಡಲ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರಗಳ ಬೂತ್‍ಮಟ್ಟದ ಪ್ರಮುಖರ ಪೂರ್ವಭಾವಿ […]

ನಿಮ್ಮ ಗ್ರಾಮಕ್ಕೆ ನಮ್ಮ ಆರೋಗ್ಯ ಸೇವೆ- ಕೊಲ್ಹಾರದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜನೆ

ವಿಜಯಪುರ: ತಜ್ಞ ವೈದ್ಯರ ವೈದ್ಯಕೀಯ ತಂಡವನ್ನು ಗ್ರಾಮೀಣ ಪ್ರದೇಶಕ್ಕೆ ಕರೆದುಕೊಂಡು ಬಂದು ನಿಮ್ಮ ಗ್ರಾಮಕ್ಕೆ ನಮ್ಮ ಆರೋಗ್ಯ ಸೇವೆ ಕಾರ್ಯಕ್ರಮದಡಿ ಬಿ ಎಲ್ ಡಿ ಇ ಸಂಸ್ಥೆ ಗ್ರಾಮೀಣ ಭಾಗದ ಜನರ ಆರೋಗ್ಯ ಸುಧಾರಿಸುವ ನಿಟ್ಟಿನಲ್ಲಿ ಮಹತ್ವದ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವ ಎಸ್. ಕೆ. ಬೆಳ್ಳುಬ್ಬಿ ಹೇಳಿದರು. ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ವತಿಯಿಂದ ಕೊಲ್ಹಾರದಲ್ಲಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು […]

ದೆಹಲಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ನನ್ನ ಪರವಾಗಿ ನಿರ್ಣಯ ಬರಲಿದೆ- ಯಾವುದೇ ಭಯಕ್ಕೂ ಅಂಜುವ ಮಗ ನಾನಲ್ಲ- ಯತ್ನಾಳ

ವಿಜಯಪುರ: ದೆಹಲಿಯಲ್ಲಿ ನಡೆದಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ನನ್ನ ಪರವಾಗಿ ನಿರ್ಣಯ ಬರಲಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಮತ್ತು ಬಿಜೆಪಿ ನಾಯಕರ ವಿರುದ್ಧ ಟೀಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ತಮಗೆ ನೋಟೀಸ್ ನೀಡಲಾಗಿದೆ ಎಂಬ ವದಂತಿಗಳ ಬಗ್ಗೆ ಸ್ವತಃ ಸ್ಪಷ್ಟನೆ ನೀಡಿದರು. ತಮಗೆ ಬಿಜೆಪಿ ಹೈಕಮಾಂಡ್ ನೋಟಿಸ್ ನೀಡಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ.  ಹೈಕಮಾಂಡ್ ನೊಟೀಸ್ ಕೊಡುವಂಥ ಅಪರಾಧವನ್ನು ನಾನೇನೂ ಮಾಡಿಲ್ಲ.  ಕೆಲವರು […]

ದೆಹಲಿಯಲ್ಲಿ ಸಚಿವ ಗಜೇಂದ್ರಸಿಂಗ್ ಭೇಟಿ ಮಾಡಿದ ಕಾರಜೋಳ- ಕೃಷ್ಣಾ ಐ ತೀರ್ಪು ಗೆಜೆಟ್ ನಲ್ಲಿ ಸೇರಿಸುವ ಕುರಿತು ಚರ್ಚೆ

ನವದೆಹಲಿ: ನವದೆಹಲಿ ಪ್ರವಾಸ ಕೈಗೊಂಡಿರುವ ರಾಜ್ಯ ನೀರಾವರಿ ಸಚಿವ ಗೋವಿಂದ ಕಾರಜೋಳ‌ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ ಅವರನ್ನು ಭೇಟಿ ಮಾಡಿದ್ದಾರೆ. ಬೆಳಿಗ್ಗೆ ಕೇಂದ್ರ ಸಚಿವರ ನಿವಾಸದಲ್ಲಿ ಶೇಖಾವತ ಅವರನ್ನು ಕಾರಜೋಳ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ನೀಡುವ ಪ್ರಸ್ತಾವಕ್ಕೆ ಅನುಮೋದನೆ ನೀಡುವಂತೆ ಕಾರಜೋಳ ಒತ್ತಾಯಿಸಿದರು. ಅಲ್ಲದೇ, ಕೃಷ್ಣ ಮೇಲ್ದಂಡೆ ಯೋಜನೆಯ ನ್ಯಾಯಾಧೀಕರಣದ ಐ-ತಿರ್ಪನ್ನು ಕೇಂದ್ರ ಸರಕಾರದ ಗೆಜೆಟ್ ನಲ್ಲಿ ಪ್ರಕಟಿಸುವುದು ಸೇರಿದಂತೆ ನಾನಾ ವಿಷಯಗಳ ಬಗ್ಗೆ ಚರ್ಚಿಸಿದರು.