ಯತ್ನಾಳದಲ್ಲಿ ಬಿ ಎಲ್ ಡಿ ಇ ಆಸ್ಪತ್ರೆ ವತಿಯಿಂದ ಮಹಿಳೆಯರ, ಮಕ್ಕಳ ಉಚಿತ ಆರೋಗ್ಯ ತಪಾಸಣೆ ಶಿಬಿರ

ವಿಜಯಪುರ: ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ವತಿಯಿಂದ ತಿಕೋಟಾ ತಾಲೂಕಿನ ಗಡಿಗ್ರಾಮ ಯತ್ನಾಳದಲ್ಲಿ ಮಹಿಳೆಯರು ಮತ್ತು ಮಕ್ಕಳ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಬೃಹತ್ ಶಿಬಿರ ನಡೆಯಿತು. 

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ವೈದ್ಯರು ಮತ್ತು ಮಕ್ಕಳ ಚಿಕಿತ್ಸಾ ವಿಭಾಗದ ಡಾಕ್ಟರುಗಳು ರೋಗಿಗಳ ತಪಾಸಣೆ ನಡೆಸಿದರು.  ಅಲ್ಲದೇ, ಉಚಿತವಾಗಿ ಔಷಧಿ ವಿತರಣೆ ಮಾಡಿದರು.  ಅಷ್ಟೇ ಅಲ್ಲ, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ ವಿಜಯಪುರ ಬಿ. ಎಲ್. ಡಿ. ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಶಿಫಾರಸು ಮಾಡಿದರು.

ಯತ್ನಾಳದಲ್ಲಿ ನಡೆದ ಆರೋಗ್ಯ ಶಿಬಿರದಲ್ಲಿ ಮಕ್ಕಳ ಆರೋಗ್ಯ ತಪಾಸಣೆ ನಡೆಸಿದ ವೈದ್ಯರು

ಬಿ ಎಲ್ ಡಿ ಇ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ವೈದ್ಯರಾದ ಡಾ. ಶ್ರೀದೇವಿ ಕೋರಿ, ಡಾ. ಶ್ರೇಯಾ ಭಟ್, ಡಾ. ಶಬಾನಾ, ಚಿಕ್ಕಮಕ್ಕಳ  ವೈದ್ಯರಾದ ಡಾ. ಯಲಗೂರಸ್ವಾಮಿ ಕೊಲಕಾರ, ಡಾ. ಅಖಿಲ, ಡಾ. ಕೋಣ ಸಾಯಿ ಶ್ರೀ, ಸಿಬ್ಬಂದಿಯಾದ ದ್ರಾಕ್ಷಾಯಣಿ ಶಟಗಾರ, ಸ್ನೇಹಾ ಜಂಟ್ಲಿ, ಅನಿಲಕುಮಾರ ಶಿರಹಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಗ್ರಾಮೀಣ ಭಾಗಕ್ಕೆ ವೈದ್ಯರನ್ನು ಕರೆಯಿಸಿ ಉಚಿತವಾಗಿ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ನೀಡುತ್ತಿರುವುದಕ್ಕೆ ಮಹಾರಾಷ್ಟ್ರದ ಗಡಿಯಲ್ಲಿರುವ ಯತ್ನಾಳ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸುಮಾರು 200ಕ್ಕೂ ಹೆಚ್ಚು ಜನರ ಆರೋಗ್ಯ ತಪಾಸಣೆ ನಡೆಸಲಾಯಿತು.

Leave a Reply

ಹೊಸ ಪೋಸ್ಟ್‌