ಫೆ. 4, 5 ರಂದು ಕಾರ್ಯನಿರತ ಪತ್ರಕರ್ತರ ರಾಜ್ಯ ಸಮ್ಮೇಳನ- ಯಶಸ್ಸಿಗೆ ಸಹಕರಿಸಲು ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಮನವಿ
ವಿಜಯಪುರ: ಬಸವನಾಡು ವಿಜಯಪುರದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಕಾರ್ಯನಿರತ ಪತ್ರಕರ್ತರ 37ನೇ ರಾಜ್ಯ ಸಮ್ಮೇಶನದ ಯಶಸ್ಸಿಗೆ ಎಲ್ಲ ಪತ್ರಕರ್ತರು, ಜಿಲ್ಲೆಯ ನಾಗರಿಕರು ಸಹಕರಿಸಬೇಕು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಮನವಿ ಮಾಡಿದ್ದಾರೆ. . ನಗರದ ಜಿ. ಪಂ. ರಸ್ತೆಯಲ್ಲಿರುವ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಗಡಿ ಭಾಗದಲ್ಲಿ ನಡೆಯುವ ಈ ಸಮ್ಮೇಳನ ಹಲವು ವೈಶಿಷ್ಠ್ಯಗಳೊಂದಿಗೆ ಐತಿಹಾಸಿಕವಾಗಿ ನಡೆಸಲು ಎಲ್ಲರೂ ಕೈಜೋಡಿಸಬೇಕು. ರಾಜ್ಯದ ನಾನಾ ಜಿಲ್ಲೆಗಳಿಂದ ಆಗಮಿಸುವ ಪ್ರತಿನಿಧಿಗಳಿಗೆ ಊಟ, ವಸತಿ ವ್ಯವಸ್ಥೆ ಅಚ್ಚುಕಟ್ಟಾಗಿ […]
ತಾಂಡಾಗಳಿಗೆ ಕಂದಾಯ ಗ್ರಾಮ ಮಾನ್ಯತೆ ಮಲ್ಲಿಕಾರ್ಜುನ ಖರ್ಗೆ ಕನಸಿನ ಕೂಸು- ಬಿಜೆಪಿ ಕ್ರೆಡಿಟ್ ತೆಗೆದುಕೊಳ್ಳುತ್ತಿದೆ- ಎಂ ಎಲ್ ಸಿ ಪ್ರಕಾಶ ರಾಠೋಡ
ವಿಜಯಪುರ: ಲಂಬಾಣಿ ತಾಂಡಗಳು ಕಂದಾಯ ಗ್ರಾಮವಾಗಬೇಕು ಎನ್ನುವುದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕನಸಿನ ಕೂಸು. ಆದರೆ, ಬಿಜೆಪಿ ಇದರ ಕ್ರೆಡಿಟ್ ತೆಗೆದುಕೊಳ್ಳುತ್ತಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ಮುಖ್ಯ ಸಚೇತಕ ಮತ್ತು ಕೆಪಿಸಿಸಿ ವಕ್ತಾರ ಪ್ರಕಾಶ ರಾಠೋಡ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2013ರಲ್ಲಿ ಖರ್ಗೆ ಅವರ ಕನಸಿಗೆ ಪೂರ್ಣಶಕ್ತಿ ಬಂದಿದೆ. ಕಂದಾಯ ಗ್ರಾಮ ಘೋಷಣೆಗೆ ಎಲ್ಲಾ ಸಿದ್ಧತೆಗಳಾಗಿದ್ದರೂ ಬಿಜೆಪಿ ಕಳೆದ ಮೂರೂವರೆ ವರ್ಷದಿಂದ ತಾಂಡಾ ಜನರನ್ನು ಚಂಚಿಸಿದೆ. ಈಗ ಬಿಜೆಪಿ […]
ಸಿಎಂ ಆಗಿದ್ದರೂ ಸರಕಾರಿ ಬಂಗಲೆ ನೀಡಿರಲಿಲ್ಲ- ಸಿದ್ಧರಾಮಯ್ಯ ಹಾಡಿದ್ದೆ ಹಾಡೋ ಕಿಸಬಾಯಿ ದಾಸ- ಎಚ್ ಡಿ ಕೆ ವಾಗ್ದಾಳಿ
ವಿಜಯಪುರ: ಸಮ್ಮಿಶ್ರ ಸತಕಾರದಲ್ಲಿ ನಾನು ಸಿಎಂ ಆಗಿದ್ದಾಗ ಸರಕಾರಿ ಬಂಗಲೆ ನೀಡಿರಲಿಲ್ಲ. ಹೀಗಾಗಿ ವೆಸ್ಟೆಂಡ್ ಹೋಟೇಲಿನಲ್ಲಿರುತ್ತಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕಾಂಗ್ರೆಸ್ ಮುಖಂಡರ ವಿರುದ್ಧ ಹರಿಹಾಯ್ದಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಳವಾಟ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾನಾಡಿದ ಅವರು, ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ ಹಾಡಿದ್ದೇ ಹಾಡೋ ಕಿಸಬಾಯಿ ದಾಸ್. ಕಾಂಗ್ರೆಸ್ ಕೈಗೊಂಡಿರುವ ಪ್ರಜಾಧ್ವನಿ ಹೆಸರನ್ನು ಕಾಂಗ್ರೆಸ್ ಧ್ವನಿ ಎಂದು ಬದಲಾಯಿಸಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ಸಿದ್ಧರಾಮಯ್ಯ ಅವರು ಜೆಡಿಎಸ್ ನ್ನು […]